ಕಾಂಗ್ರೆಸ್ ಅಧಿಕಾರಕ್ಕೆ ಬಂದ 6 ತಿಂಗಳ ಒಳಗೆ ಗ್ಯಾರಂಟಿ ಅನುಷ್ಠಾನ, ಇಲ್ಲವೆಂದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಯುಟಿ ಖಾದರ್​​

ಈ ಬಾರಿ ಬಿಜೆಪಿ ಸೋಲಿಸಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಗ್ಯಾರಂಟಿ. ನಮ್ಮ ಗ್ಯಾರಂಟಿ ನಾವು ಆರು ತಿಂಗಳ ಒಳಗೆ ಅನುಷ್ಠಾನ ಮಾಡದೇ ಇದ್ದರೆ ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ ಎಂದು ಮಾಜಿ ಸಚಿವ ಯುಟಿ ಖಾದರ್​​ ಹೇಳಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದ 6 ತಿಂಗಳ ಒಳಗೆ ಗ್ಯಾರಂಟಿ ಅನುಷ್ಠಾನ, ಇಲ್ಲವೆಂದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಯುಟಿ ಖಾದರ್​​
ಯು.ಟಿ.ಖಾದರ್
Follow us
ಗಂಗಾಧರ​ ಬ. ಸಾಬೋಜಿ
|

Updated on: May 08, 2023 | 2:58 PM

ಮಂಗಳೂರು: ಈ ಬಾರಿ ಬಿಜೆಪಿ ಸೋಲಿಸಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಗ್ಯಾರಂಟಿ. ನಮ್ಮ ಗ್ಯಾರಂಟಿ ನಾವು ಆರು ತಿಂಗಳ ಒಳಗೆ ಅನುಷ್ಠಾನ ಮಾಡದೇ ಇದ್ದರೆ ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ ಎಂದು ಮಾಜಿ ಸಚಿವ ಯುಟಿ ಖಾದರ್ (UT Khader)​​ ಹೇಳಿದ್ದಾರೆ. ಮಂಗಳೂರಿನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಪಕ್ಷ ನಾಯಕರಿಗೆ ಸುಳ್ಳೇ ಬಂಡವಾಳ, ಅವರಲ್ಲಿ ಸತ್ಯ ಇಲ್ಲ. ಜನರ ನೋವು ಶಮನಗೊಳಿಸುವುದೇ ಕಾಂಗ್ರೆಸ್​ನ​ ಗ್ಯಾರಂಟಿ ಸ್ಕೀಂ. ಅಧಿಕಾರಕ್ಕೆ ಬಂದ ತಕ್ಷಣ 5 ಗ್ಯಾರಂಟಿಗಳನ್ನು ಈಡೇರಿಸುತ್ತೇವೆ. ಬಿಜೆಪಿ ಜಾತಿ, ಧರ್ಮದ ಹೆಸರಿನಲ್ಲಿ ಅಧಿಕಾರದ ಕನಸು ಕಾಣುತ್ತಿದೆ ಎಂದು ಕಿಡಿಕಾರಿದರು.

ಮುಖಭಂಗ ತಪ್ಪಿಸಿಕೊಳ್ಳಲು ನಮ್ಮ ಮೇಲೆ ಆರೋಪ

ಮತದಾರರು ಮತ್ತೆ ಬಿಜೆಪಿಗೆ ಅವಕಾಶ ಕೊಡಬಾರದು. ಕಾಂಗ್ರೆಸ್​ ಸಮಾಜಕ್ಕೆ ಪೂರಕವಾದ ಸಂಘಟನೆಗೆ ಪ್ರೋತ್ಸಾಹ ನೀಡುತ್ತೆ. ಸಮಾಜ ವಿರೋಧಿ, ಸಮಾಜಘಾತುಕ ಸಂಘಟನೆಗಳ ಮೇಲೆ ಕ್ರಮಕೈಗೊಳ್ಳಲಾಗುವುದು. ಮುಸ್ಲಿಂ ಮೀಸಲಾತಿ ವಿಚಾರ ಸದ್ಯ ಕೋರ್ಟ್​​ನಲ್ಲಿದೆ. ಮೇ 13ರಂದು ರಾಜ್ಯದಲ್ಲಿ ಬಿಜೆಪಿ ಭವಿಷ್ಯ ಮುಗಿಯಲಿದೆ. ಜೆಡಿಎಸ್​​ನವರಿಗೆ ಇಡೀ ಜಿಲ್ಲೆಯಲ್ಲಿ 2 ಸಾವಿರ ಮತ ಕೂಡ ಇಲ್ಲ. ಮುಖಭಂಗ ತಪ್ಪಿಸಿಕೊಳ್ಳಲು ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದರು.

ಇದನ್ನೂ ಓದಿ: ಮತದಾನಕ್ಕೆ 2 ದಿನ ಬಾಕಿ ಇರುವಾಗಲೇ ಬಿಜೆಪಿ, ಕಾಂಗ್ರೆಸ್​ಗೆ​ ಬಿಗ್ ಶಾಕ್, ಶಿರಹಟ್ಟಿ ಕ್ಷೇತ್ರದಲ್ಲಿ ರಾಜಕೀಯಲ ತಲ್ಲಣ

ಬಿಜೆಪಿಯವರು ಜನರಿಗೆ ಮೋಸ ಮಾಡಿದ್ದಾರೆ 

ನಳಿನ್​​ಕುಮಾರ ಕಟೀಲ್​, ಸುನೀಲ್, ಕೋಟಾ ಶ್ರೀನಿವಾಸ ಪೂಜಾರಿ ಜನರಿಗೆ ಮೋಸ ಮಾಡಿದ್ದಾರೆ. ಬಜೆಟ್‌ನಲ್ಲಿ ಹಣ ಮೀಸಲಿಡದೇ ನಾರಾಯಣ ಗುರು ಅಭಿವೃದ್ಧಿ ನಿಗಮ ಘೋಷಣೆ ಮಾಡಿದ್ದಾರೆ. 2ಬಿ ಹಿಂತೆಗೆದು ಸಣ್ಣ ಸಣ್ಣ ಸಮುದಾಯಕ್ಕೆ ಕೊಡದೇ ಬೇರೆಯವರಿಗೆ ಕೊಟ್ಟಿದ್ದಾರೆ. ಅವರಿಗೂ ಗೊತ್ತಿದೆ, ಇದನ್ನ ಕೋರ್ಟ್​​ ಒಪ್ಪಲ್ಲ ಅಂತ. ಬಿಜೆಪಿ ಗಲಭೆ ಪ್ರಿಯ, ತಾರತಮ್ಯದ ಮತ್ತು ಕೋಮು ಬೆಂಬಲಿತ ಸರ್ಕಾರ ಅಂತ ಇತಿಹಾಸದ ಪುಟದಲ್ಲಿ ಬರಲಿದೆ ಎಂದರು.

ಜನತೆಗೆ ಬೇಕಾದ ವಿಚಾರ ಚರ್ಚೆಯಾಗಲಿ

ಪ್ರಜ್ಞಾವಂತ ಮತದಾರರು ಅರ್ಥ ಮಾಡಿಕೊಳ್ಳಬೇಕು. ಸ್ವಾಭಿಮಾನದ ಬದುಕು, ಉದ್ಯೋಗ, ಸಾಮರಸ್ಯದ ಜೀವನ ಅಗತ್ಯದ ವಿಷಯ. ಕಾಂಗ್ರೆಸ್ ಪಕ್ಷದ ಸರ್ಕಾರ ರಾಜ್ಯದಲ್ಲಿರುವ ಸಮಾಜಕ್ಕೆ ಪೂರಕವಾದ ಸಂಘಟನೆಗಳಿಗೆ ಪ್ರೋತ್ಸಾಹ ನೀಡಲಿದೆ. ಸಂವಿಧಾನಕ್ಕೆ ವಿರುದ್ದ ಇರುವವರು ಮಾತ್ರ ಕ್ರಮ ಆಗುತ್ತದೆ.  ಪ್ರಣಾಳಿಕೆಯಲ್ಲಿ‌ ಬೇರೆ ಬೇರೆ ವಿಷಯ ಇದೆ. ಆದರೆ ಇದು ಚರ್ಚೆ ಆಗುತ್ತಿಲ್ಲ. ಜನತೆಗೆ ಬೇಕಾದ ವಿಚಾರ ಚರ್ಚೆಯಾಗಲಿ ಎಂದು ಹೇಳಿದರು.

ಇದನ್ನೂ ಓದಿ: ಮತದಾನ ದಿನದಂದು ನಮ್ಮ ಮೆಟ್ರೋ ರೈಲು ಸಂಚಾರ ಮಧ್ಯರಾತ್ರಿಯವರೆಗೂ ವಿಸ್ತರಣೆ: ಇಲ್ಲಿದೆ ವೇಳಾಪಟ್ಟಿ

ಬಿಜೆಪಿಯದ್ದು ಓಟ್ ಬ್ಯಾಂಕ್ ಲೆಕ್ಕಾಚಾರ 

ಬಿಜೆಪಿ ರಾಜಕೀಯವಾಗಿ ಆಲೋಚನೆ ಮಾಡಲ್ಲ. ಅವರದ್ದು ಓಟ್ ಬ್ಯಾಂಕ್ ಲೆಕ್ಕಾಚಾರ. ಕೇಂದ್ರದ ಸಂಸದೀಯ ಸಚಿವ ಪ್ರಲ್ಹಾದ್​ ಜೋಶಿ ಬಹಿರಂಗ ಹೇಳಿಕೆ ಕೊಡಲಿ. ಎಸ್​ಸಿ, ಎಸ್​ಟಿಯನ್ನ 9th ಶೆಡ್ಯೂಲ್​ಗೆ ಸೇರಿಸುತ್ತೇವೆ ಅಂತ ಹೇಳಲಿ. ಮೇ. 13ಕ್ಕೆ ಬಿಜೆಪಿ ಭವಿಷ್ಯ ಮುಗಿಯುತ್ತದೆ, ವಿನಾಶೇ ಕಾಲೇ ವಿಪರೀತ ಬುದ್ಧಿ. ನನ್ನ ಕ್ಷೇತ್ರದಲ್ಲಿ ಜೆಡಿಎಸ್ ಅವರ ಕಾರ್ಯಕರ್ತರಿಗೆ ಟಿಕೆಟ್ ಕೊಟ್ಟಿಲ್ಲ. ಬದಲಿಗೆ ಕಾಂಗ್ರೆಸ್ ಹಿತೈಷಿಗೆ ಟಿಕೆಟ್ ಕೊಟ್ಟಿದ್ದಾರೆ. ಇದೊಂದು ರಾಜಕೀಯ ಆಟ ಅಷ್ಟೇ, ಇದರ ಬಗ್ಗೆ ಚಿಂತೆ ಮಾಡಲ್ಲ ಎಂದು ಹರಿಹಾಯ್ದರು.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ