Karnataka Elections 2023: ಇಂದು ಕಾಂಗ್ರೆಸ್‌ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ: ಟಿಕೆಟ್ ಯಾರಿಗುಂಟು ಯಾರಿಗಿಲ್ಲ..!

ಕಾಂಗ್ರೆಸ್‌ ಪಾಲಿಗೆ ತಲೆನೋವಾಗಿರುವ ಮುಂಬರುವ ವಿಧಾನಸಭಾ ಚುನಾವಣೆ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಕಸರತ್ತು ಅಂತಿಮ ಹಂತಕ್ಕೆ ಬಂದಿದ್ದು, ಗುರುವಾರ ಪಟ್ಟಿ ಬಿಡುಗಡೆಯಾಗಲಿದೆ.

Karnataka Elections 2023: ಇಂದು ಕಾಂಗ್ರೆಸ್‌ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ: ಟಿಕೆಟ್ ಯಾರಿಗುಂಟು ಯಾರಿಗಿಲ್ಲ..!
Follow us
ರಮೇಶ್ ಬಿ. ಜವಳಗೇರಾ
|

Updated on:Apr 06, 2023 | 6:45 AM

ನವದೆಹಲಿ/ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಸಿವೆ.  ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ನಿರಾಯಾಸವಾಗಿ ಬಿಡುಗಡೆ ಮಾಡಿ ಗೆದ್ದಿದ್ದ ಕಾಂಗ್ರೆಸ್‌ಗೆ (Congress) ಉಳಿದಿರುವ 100 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿತ್ತು. ಕಳೆದ ಎರಡು ದಿನಗಳಲ್ಲಿ ದೆಹಲಿಯಲ್ಲೇ ಬೀಡುಬಿಟ್ಟು ಮ್ಯಾರಥಾನ್ ಸಭೆ ನಡೆಸಿದ್ದಾರೆ. ಅಂತಿಮವಾಗಿ 100ರ ಪೈಕಿ 45ರಿಂದ 50 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗಿದ್ದು, ಇಂದು(ಏಪ್ರಿಲ್ 06) ಬೆಳಗ್ಗೆ 11 ಗಂಟೆಯೊಳಗೆ ಕೈ ಅಭ್ಯರ್ಥಿಗಳ 2 ಪಟ್ಟಿ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದೆ. ಬಾಕಿ ಉಳಿದಿರುವ 100 ಕ್ಷೇತ್ರಗಳಿಗೆ ಅಭ್ಯರ್ಥಿ ಪಟ್ಟಿ ಅಂತಿಮಗೊಳಿಸಲು ಬುಧವಾರ ಇಡೀ ದಿನ ನಡೆದ ಕಸರತ್ತಿನ ನಂತರ ಸುಮಾರು 50 ಕ್ಷೇತ್ರಗಳಿಗೆ ಒಂಟಿ ಹೆಸರು ಅಂತಿಮಗೊಳಿಸಿದ್ದು, ಈ ಪಟ್ಟಿಯಲ್ಲಿ ಸಿದ್ದರಾಮಯ್ಯನವರ ಎರಡನೇ ಕ್ಷೇತ್ರ ಇರುತ್ತಾ? ಎನ್ನುವುದು ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ಕೈಗೆ ಬಿಜೆಪಿ ರಿವರ್ಸ್ ಆಪರೇಷನ್​, ಹಲವು ಕ್ಷೇತ್ರಗಳ ಕಾಂಗ್ರೆಸ್ ಟಿಕೆಟ್​ ಆಕಾಂಕ್ಷಿಗಳು ಬಿಜೆಪಿ ಸೇರ್ಪಡೆ: ಇಲ್ಲಿದೆ ಪಟ್ಟಿ

ಇಂದು ಪಟ್ಟ ಬಿಡುಗಡೆ ಸುಳಿವು ಕೊಟ್ಟ ಡಿಕೆ ಶಿವಕುಮಾರ್

ದೆಹಲಿಯಲ್ಲಿ ನಡೆದ ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಸಮಿತಿ ಸಭೆ ಬಳಿಕ ಮಾತನಾಡಿದ ಕೆಪಿಸಿಸಿ ಡಿ.ಕೆ.ಶಿವಕುಮಾರ್, ಸೂರ್ಯ ಉದಯವಾಗುವ ತನಕ ಕಾಯಿರಿ ಎಂದು ಹೇಳಿದ್ದಾರೆ. ಅಂದ್ರೆ ಇಂದು ಬೆಳಗ್ಗೆ ಕಾಂಗ್ರೆಸ್​​​​ ಟಿಕೆಟ್ ಬಿಡುಗಡೆಯಾಗುವ ಸೂಚನೆಯನ್ನು ಡಿಕೆಶಿ ಕೊಟ್ಟಿದ್ದಾರೆ. ಡಿಕೆಶಿ ಬಳಿಕ ಮಾತನಾಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಇಂದು ಬೆಳಗ್ಗೆ 11 ಗಂಟೆಯೊಳಗೆ ಟಿಕೆಟ್ ರಿಲೀಸ್ ಆಗಲಿದೆ ಎಂದಿದ್ದಾರೆ.

ಬಾಕಿ ಉಳಿದಿರುವುದರಲ್ಲಿ ಶೇ.50ಕ್ಕೂ ಹೆಚ್ಚು ಕ್ಷೇತ್ರಗಳಿಗೆ ಎರಡಕ್ಕಿಂತ ಹೆಚ್ಚು ಹೆಸರುಗಳು ಚುನಾವಣಾ ಸಮಿತಿ ಸಭೆ ಮುಂದೆ ಚರ್ಚೆಗೆ ಬಂದ ಹಿನ್ನೆಲೆಯಲ್ಲಿ ಮಂಗಳವಾರವೇ ಪಕ್ಷದ ವರಿಷ್ಠ ರಾಹುಲ್‌ ಗಾಂಧಿ ಅವರು ಗರಂ ಆಗಿದ್ದರು. ಒಂದು ಅಥವಾ ಎರಡು ಹೆಸರುಗಳಿರುವ ಪಟ್ಟಿಯನ್ನಷ್ಟೇ ಚುನಾವಣಾ ಸಮಿತಿ ಮುಂದೆ ತನ್ನಿ ಎಂದು ಖಡಕ್‌ ಸೂಚನೆ ನೀಡಿದ್ದರು. ಅದರಂತೆ ಮತ್ತೊಮ್ಮೆ ಸಭೆ ಸೇರಿದ ಸ್ಕ್ರೀನಿಂಗ್‌ ಕಮಿಟಿಯು ಎರಡಕ್ಕಿಂತ ಹೆಚ್ಚು ಹೆಸರುಗಳಿರುವ ಕ್ಷೇತ್ರಗಳಲ್ಲಿ ಸಂಭಾವ್ಯರ ಸಂಖ್ಯೆಯನ್ನು ಎರಡಕ್ಕಿಳಿಸುವ ಕಾರ್ಯವನ್ನು ಬುಧವಾರ ಮಧ್ಯಾಹ್ನದ ವೇಳೆಗೆ ಪೂರ್ಣಗೊಳಿಸಿದೆ.

ಆ ಬಳಿಕ ಕಾಂಗ್ರೆಸ್‌ ಚುನಾವಣಾ ಸಮಿತಿಯು ಸಂಜೆ 4.30ರಿಂದ ಸುಮಾರು 2 ಗಂಟೆಗಳ ಕಾಲ ಎರಡನೇ ಪಟ್ಟಿಕುರಿತು ಚರ್ಚೆ ನಡೆಸಿದೆ. ಸದ್ಯಕ್ಕೆ ಸಭೆ ಅಪೂರ್ಣಗೊಂಡಿದ್ದು, ಗುರುವಾರ ಮಧ್ಯಾಹ್ನ 2.30 ವೇಳೆಗೆ ಮತ್ತೆ ಸಮಿತಿ ಸಭೆ ಸೇರಲಿದೆ. ಈ ಸಭೆಯಲ್ಲಿ ತೀವ್ರ ಗೊಂದಲ ಇರುವ ಕ್ಷೇತ್ರಗಳ ಬಗ್ಗೆ ಚರ್ಚೆ ನಡೆಯಲಿದೆ. ಮೂಲಗಳ ಪ್ರಕಾರ ಎರಡನೇ ಪಟ್ಟಿಗುರುವಾರ ಬಿಡುಗಡೆಯಾದರೂ ಅನಂತರದ ಪಟ್ಟಿಯೇನಿದ್ದರೂ ಬಿಜೆಪಿಯ ಪಟ್ಟಿ ಪ್ರಕಟವಾದ ನಂತರವೇ ಬಿಡುಗಡೆ ಮಾಡಲು ನಾಯಕರು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಯಾಕಂದ್ರೆ, ಕೆಲ ಬಿಜೆಪಿ ನಾಯಕರು ಕಾಂಗ್ರೆಸ್ ಸೇರುವ ಸಾಧ್ಯತೆಗಳಿದ್ದು, ಅವರಿಗಾಗಿ ಟಿಕೆಟ್​ ಕಾಯ್ದಿರಿಸಿದೆ ಎಂದು ತಿಳಿದುಬಂದಿದೆ.

ಸಂತೋಷ್ ಲಾಡ್, ವಿನಯ್‌ಗೆ ಟಿಕೆಟ್ ಪಕ್ಕಾ?

ಕಾಂಗ್ರೆಸ್​​​​​​​​​​​​​​​​​​​​ ಅಭ್ಯರ್ಥಿಗಳ ಎರಡನೇ ಪಟ್ಟಿ ಇಂದು ರಿಲೀಸ್​ ಆಗ್ತಿದ್ದು, 2ನೇ ಪಟ್ಟಿಯಲ್ಲಿ ಯಾರೆಲ್ಲ ಚಾನ್ಸ್​​​ ಪಡೆಯಬಹುದು ಎಂದು ನೋಡುವುದಾದರೆ, ಕುತೂಹಲ ಸೃಷ್ಟಿಸಿದ್ದ ಕಲಘಟಗಿ ಕ್ಷೇತ್ರದಿಂದ ಸಂತೋಷ್ ಲಾಡ್, ಧಾರವಾಡ ಗ್ರಾಮೀಣ ಕ್ಷೇತ್ರದಿಂದ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಟಿಕೆಟ್​​ ಪಕ್ಕಾ ಎನ್ನಲಾಗಿದೆ. ಇನ್ನೂ ಕುಂದಗೋಳದಿಂದ ಕುಸುಮ ಶಿವಳ್ಳಿ, ದಾವಣಗೆರೆಯ ಚನ್ನಗಿರಿಯಿಂದ ಶಿವಗಂಗಾ ಬಸವರಾಜು ಮತ್ತು ಹರಪ್ಪನಹಳ್ಳಿ ಕ್ಷೇತ್ರದಿಂದ ಕೊಟ್ರೆಶ್​ ಟಿಕೆಟ್ ಫೈನಲ್​ ಆಗಿದೆ ಎಂದು ತಿಳಿದುಬಂದಿದೆ,

ಹಲವು ಕ್ಷೇತ್ರಗಳಲ್ಲಿ ಟಿಕೆಟ್ ಕಗ್ಗಂಟು

ತರೀಕೆರೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಟಿಕೆಟ್‌ಗೆ ಶ್ರೀನಿವಾಸ್ ಹಾಗೂ ಗೋಪಿಕೃಷ್ಣ ನಡುವೆ ಫೈಟ್ ಇದ್ಯಂತೆ. ಇನ್ನೂ ಚಿಕ್ಕಮಗಳೂರು ಜಿಲ್ಲೆಯ ಕಡೂರು ಕ್ಷೇತ್ರದಲ್ಲಿ ಆನಂದ್ ಹಾಗೂ ವೈ.ಎಸ್.ವೈ.ದತ್ತಾ ಹೋರಾಡ್ತಿದ್ದಾರೆ. ಚಿಕ್ಕಮಗಳೂರಲ್ಲಿ ಹೆಚ್.ಡಿ.ತಮ್ಮಯ್ಯಗೆ ಟಿಕೆಟ್ ನೀಡದಂತೆ ಮೂಲ ಕಾಂಗ್ರೆಸಿಗರು ಒತ್ತಡ ಹಾಕ್ತಿದ್ದಾರೆ. ಬಾಗಲಕೋಟೆ ಜಿಲ್ಲೆಯ ತೇರದಾಳ ಕ್ಷೇತ್ರದಲ್ಲಿ ಮಾಜಿ ಸಚಿವೆ ಉಮಾಶ್ರೀ ಹಾಗೂ ಸಿದ್ದುಕೊಣ್ಣೂರ್​​ ಪೈಪೋಟಿ ಇದೆ. ಹಾಸನ ಜಿಲ್ಲೆಯಲ್ಲಿ ಟಿಕೆಟ್​ ಬಡಿದಾಟ ಜೋರಾಗಿದೆ. ಅರಕಲಗೂಡು ಕ್ಷೇತ್ರದಲ್ಲಿ ಶ್ರೀಧರ್ ಗೌಡ ಹಾಗೂ ಕೃಷ್ಟೇಗೌಡ ಮತ್ತು ಬೇಲೂರಿನಲ್ಲಿ ರಾಜಶೇಖರ್ ಮತ್ತು ಗಂಡಸಿ ಶಿವರಾಂ ನಡುವೆ ಫೈಟ್ ನಡೆಯುತ್ತಿದೆ.

ಒಟ್ಟಿನಲ್ಲಿ ಕಾಂಗ್ರೆಸ್​ನ ಎರಡನೇ ಪಟ್ಟಿ ತೀವ್ರ ಕುತೂಃಲ ಮೂಡಿಸಿದ್ದು,  ಟಿಕೆಟ್​ ಯಾರಿಗೆ ಸಿಗುತ್ತೆ ಯಾರಿಗಿಲ್ಲ ಎನ್ನುವುದನ್ನು ಕಾದುನೋಡಬೇಕಿದೆ.

ಇನ್ನಷ್ಟು ಕರ್ನಾಟಕ ವಿಧಾನಸಭೆ ಚುನಾವಣೆ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 6:42 am, Thu, 6 April 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ