ಇಂದು ಬಿಜೆಪಿ ಪ್ರಣಾಳಿಕೆ ಬೆನ್ನಲ್ಲೆ ನಾಳೆ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ; ಭರವಸೆಗಳ ಮಹಾಪೂರ ಸಾಧ್ಯತೆ

Congress Menifesto Karnataka Election 2023: ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಲು ಕಾಂಗ್ರೆಸ್ ಸಿದ್ದತೆ ಮಾಡಿಕೊಂಡಿದೆ. ಮೇ‌ 2 ರಂದು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡುವ ಸಾಧ್ಯತೆ ಇದೆ.

ಇಂದು ಬಿಜೆಪಿ ಪ್ರಣಾಳಿಕೆ ಬೆನ್ನಲ್ಲೆ ನಾಳೆ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ; ಭರವಸೆಗಳ ಮಹಾಪೂರ ಸಾಧ್ಯತೆ
ಕಾಂಗ್ರೆಸ್ ಸಮಿತಿ
Follow us
ಆಯೇಷಾ ಬಾನು
|

Updated on:May 01, 2023 | 10:46 AM

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ(Karnataka Assembly Elections 2023) ಮೇ 10ರಂದು ಮತದಾನ ನಡೆಯಲಿದ್ದು ಕೆಲವೇ ದಿನಗಳು ಮಾತ್ರ ಬಾಕಿ ಇವೆ. ಹೀಗಾಗಿ ಇಂದು ಬಿಜೆಪಿ ಪಕ್ಷ ಪ್ರಜಾ ಪ್ರಣಾಳಿಕೆ ಹೆಸರಿನಲ್ಲಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಲಿದೆ(BJP Menifesto Karnataka Election 2023). ಇದೇ ಬೆನ್ನಲ್ಲೆ ಈಗ ಕಾಂಗ್ರೆಸ್ ಕೂಡ ನಾಳೆ ಪ್ರಣಾಳಿಕೆ ಬಿಡುಗಡೆಗೆ ಮುಂದಾಗಿದೆ(Congress Menifesto Karnataka Election 2023). ಹೀಗಾಗಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಲು ಕಾಂಗ್ರೆಸ್ ಸಿದ್ದತೆ ಮಾಡಿಕೊಂಡಿದೆ. ಮೇ‌ 2 ರಂದು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡುವ ಸಾಧ್ಯತೆ ಇದೆ.

ಈಗಾಗಲೇ ಕಾಂಗ್ರೆಸ್ 6 ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಗೃಹಲಕ್ಷ್ಮಿ, ಗೃಹಜ್ಯೋತಿ, ಯುವ ನಿಧಿ, 10 ಕೆಜಿ ಉಚಿತ ಅಕ್ಕಿ, ಮಹಿಳೆಯರಿಗೆ ಉಚಿತ ಬಸ್ ಪಾಸ್, ಅಂಗನವಾಡಿ, ಆಶಾ, ಬಿಸಿಯೂಟ ‌ನೌಕರರಿಗೆ ಗೌರವ ಧನ ಹೆಚ್ಚಳ ಸೇರಿದಂತೆ 6 ಗ್ಯಾರಂಟಿಗಳನ್ನು ಘೋಷಿಸಿದೆ. ಇನ್ನು ವಿಭಾಗವಾರು ಪ್ರಣಾಳಿಕೆ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಕರಾವಳಿ ಭಾಗ, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ, ಹಳೇ ಮೈಸೂರು ಭಾಗ, ಮಹಿಳೆಯರು, ಯುವಕರು, ರೈತರು, ಕೂಲಿ ಕಾರ್ಮಿಕರು, ಆದಿವಾಸಿಗಳು, ದಲಿತರು, ಒಬಿಸಿ, ಅಲ್ಪಸಂಖ್ಯಾತರು, ಅಪಾರ್ಟ್ಮೆಂಟ್ ನಿವಾಸಿಗಳನ್ನು ಗುರಿಯಾಗಿಸಿಕೊಂಡು ಪ್ರಣಾಳಿಕೆ ಸಿದ್ಧಪಡಿಸಲಿದ್ದಾರೆ. ಕಳೆದ ಬಾರಿಗಿಂತ ಹೆಚ್ಚಿನ ಭರವಸೆಗಳನ್ನು ಘೋಷಣೆ ಮಾಡುವ ಸಾಧ್ಯತೆಯಿದೆ. 2018 ರಲ್ಲಿ 160 ಭರವಸೆಗಳನ್ನು ಕಾಂಗ್ರೆಸ್ ಘೋಷಣೆ ಮಾಡಿತ್ತು.

ಪ್ರಣಾಳಿಕೆಯಲಿ ಯಾವೆಲ್ಲ ಭರವಸೆ ನೀಡುವ ಸಾಧ್ಯತೆಯಿದೆ ಎನ್ನುವುದನ್ನು ನೋಡುವುದಾದರೇ

  • ಖಾಲಿ ಇರುವ. 2.5 ಲಕ್ಷ ಸರ್ಕಾರಿ ನೌಕರಿಗಳ ಭರ್ತಿ
  • OPS ಜಾರಿ ಮಾಡುವ ಬಗ್ಗೆ ಭರವಸೆ
  • ನೀರಾವರಿ ಯೋಜನೆಗಳಿಗೆ ಒತ್ತು
  • ಐದು ವರ್ಷದಲ್ಲಿ 2 ಲಕ್ಷ ಕೋಟಿ ನೀರಾವರಿಗೆ ಮೀಸಲು
  • ರಾಜ್ಯಕ್ಕೆ ಹೂಡಿಕೆದಾರರನ್ನು ಸೆಳೆಯಲು ವಿಶೇಷ ಆಧ್ಯತೆ
  • ಮಹಿಳೆಯರಿಗೆ ಕಡಿಮೆ ಬಡ್ಡಿ ಸಾಲದ ಯೋಜನೆಗೆ ಒತ್ತು
  • ಇಂದಿರಾ ಕ್ಯಾಂಟೀನ್ ‌ಎಲ್ಲಿ ಮುಚ್ಚಿದ್ದಾರೋ ಅಲ್ಲಿ ಮರುಸ್ಥಾಪನೆ
  • ಬೆಂಗಳೂರಿನ ಟ್ರಾಫಿಕ್ ನಿರ್ವಹಣೆ ಬಗ್ಗೆ ಭರವಸೆ
  • ಬೀದಿ ಬದಿ ವ್ಯಾಪರಸ್ಥರು, ಆಟೋ ಚಾಲಕರನ್ನ ಸೆಳೆಯಲು ಭರವಸೆ ಘೋಷಣೆ
  • ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಿ, 2,500 ಕೋಟಿ ಮೀಸಲು
  • ಮಂಗಳೂರಿನಲ್ಲಿ ಐಟಿ ಮತ್ತು ಗಾರ್ಮೆಂಟ್‌ ಇಂಡಸ್ಟ್ರಿ ಪಾರ್ಕ್ ಸ್ಥಾಪನೆ
  • ಪ್ರತಿಯೊಬ್ಬ ಮೀನುಗಾರರಿಗೆ ತಲಾ 10 ಲಕ್ಷ ರೂ. ಮೊತ್ತದ ವಿಮಾ ಯೋಜನೆ.
  • ಮೀನುಗಾರ ಮಹಿಳೆಯರಿಗೆ 1 ಲಕ್ಷ ರೂ. ತನಕ ಬಡ್ಡಿ ರಹಿತ ಸಾಲ.
  • ಮೀನುಗಾರಿಕೆ ದೋಣಿಗಳನ್ನು ಖರೀದಿಸಲು ಶೇ.25 ಸಬ್ಸಿಡಿಯೊಂದಿಗೆ 25 ಲಕ್ಷ ರೂ.ವರೆಗೆ ಸಾಲ. ಡೀಸೆಲ್‌ ಮೇಲಿನ ಸಬ್ಸಿಡಿಯನ್ನು ಲೀ.ಗೆ 10.71 ರೂ.ನಿಂದ 25ಕ್ಕೆ ಹೆಚ್ಚಳ ಹಾಗೂ ದಿನಕ್ಕೆ 300 ಲೀ.ನಿಂದ 500 ಲೀ.ಗೆ ಏರಿಕೆ.
  • ಮಲ್ಪೆ ಮೀನುಗಾರಿಕಾ ಬಂದರು, ಗಂಗೊಳ್ಳಿ ಮೀನುಗಾರಿಕಾ ಬಂದರು ಮತ್ತು ಮಂಗಳೂರು ಮೀನುಗಾರಿಕೆ ಬಂದರಿನ ಹೂಳೆತ್ತುವುದು.
  • ಶ್ರೀ ನಾರಾಯಣಗುರು ಅಭಿವೃದ್ಧಿ ಮಂಡಳಿ ಸ್ಥಾಪಿಸಿ ವಾರ್ಷಿಕ 250 ಕೋಟಿ ರೂ.ನಂತೆ ಐದು ವರ್ಷಗಳಲ್ಲಿ 1,250 ಕೋಟಿ ರೂ. ಅನುದಾನ
  • ಬಂಟ್ಸ್‌ ಅಭಿವೃದ್ಧಿ ಮಂಡಳಿ ಸ್ಥಾಪಿಸಿ, 5 ವರ್ಷಕ್ಕೆ 1,250 ಕೋಟಿ ಅನುದಾನ
  • ಅಲ್ಪಸಂಖ್ಯಾತರ ಅಭಿವೃದ್ಧಿ ಯೋಜನೆಗೆ ಮೀಸಲಿಟ್ಟಿದ್ದ 3,150 ಕೋಟಿ ರೂ. ಮೊತ್ತದ ಯೋಜನೆ ಮರುಸ್ಥಾಪನೆ

ಹೀಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಕೆಲವು ಯೋಜನೆಗಳನ್ನು ಘೋಷಿಸಲು ಸಿದ್ಧತೆ ನಡೆಸಿದೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:25 am, Mon, 1 May 23

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ