ಕಾಂಗ್ರೆಸ್ ಸಿದ್ದರಾಮಯ್ಯ ಅವರನ್ನ ಸಿಎಂ ಮಾಡಲ್ಲ – ಮೋದಿ ನಾಯಕತ್ವಕ್ಕೆ ಹಿಂದುಳಿದ ವರ್ಗದವರು ಪ್ರಾಧಾನ್ಯತೆ ನೀಡುತ್ತಿದ್ದಾರೆ – ಪ್ರಲ್ಹಾದ್ ಜೋಶಿ

ಪ್ರಧಾನಿ ಮೋದಿ ನಾಯಕತ್ವಕ್ಕೆ ದೇಶದಾದ್ಯಂತ ಹಿಂದುಳಿದ ವರ್ಗದವರು ಮನ್ನಣೆ ನೀಡಿದ್ದಾರೆ. ಹಿಂದುಳಿದ ವರ್ಗಗಳ ಮೇಲೆ ಮೋದಿ ಕಾಳಜಿ ಹೊಂದಿದ್ದು ಹಲವು ಯೋಜನೆಗಳನ್ನ ಅವರ ಅಭಿವೃದ್ದಿಗೆ ನೀಡಿದ್ದಾರೆ. ಹೀಗಾಗಿ ಕರ್ನಾಟಕದಲ್ಲೂ ಹಿಂದುಳಿದ ವರ್ಗದರು ಬಿಜೆಪಿ ಬೆಂಬಲಿಸುತ್ತಿದ್ದಾರೆ -ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ

ಕಾಂಗ್ರೆಸ್ ಸಿದ್ದರಾಮಯ್ಯ ಅವರನ್ನ ಸಿಎಂ ಮಾಡಲ್ಲ - ಮೋದಿ ನಾಯಕತ್ವಕ್ಕೆ ಹಿಂದುಳಿದ ವರ್ಗದವರು ಪ್ರಾಧಾನ್ಯತೆ ನೀಡುತ್ತಿದ್ದಾರೆ - ಪ್ರಲ್ಹಾದ್ ಜೋಶಿ
ಮೋದಿ ನಾಯಕತ್ವಕ್ಕೆ ಹಿಂದುಳಿದ ವರ್ಗದವರು ಪ್ರಾಧಾನ್ಯತೆ ನೀಡುತ್ತಿದ್ದಾರೆ - ಪ್ರಲ್ಹಾದ್ ಜೋಶಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on:May 06, 2023 | 7:57 PM

ಕಾಂಗ್ರೆಸ್ ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ (Siddaramaiah) ಅವರನ್ನ ಸಿಎಂ ಮಾಡೊದಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹೇಳಿದ್ದಾರೆ. ಮುಂದಿನ ವಾರ ನಡೆಯಲಿರುವ ಅಸೆಂಬ್ಲಿ ಚುನಾವಣೆ ಹಿನ್ನೆಲೆಯಲ್ಲಿ (Karnataka Assembly Elections 2023) ಧಾರವಾಡದಲ್ಲಿ ಇಂದು ಬಿಜೆಪಿ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ ನಡೆಸಿದ ಜೋಶಿ ಜೆ.ಎಸ್.ಎಸ್. ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಮಾತನಾಡುತ್ತಿದ್ದರು.

ಸಿದ್ದರಾಮಯ್ಯ ಅವರನ್ನ ಈ ಬಾರಿ ರಾಜ್ಯದ ಹಿಂದುಳಿದ ವರ್ಗದವರು ನಂಬುವ ಸ್ಥಿತಿಯಲಿಲ್ಲ. ಏಕಂದ್ರೆ ಸಿದ್ದರಾಮಯ್ಯ ಅವರನ್ನ ಕಾಂಗ್ರೆಸ್ ಸಿಎಂ ಮಾಡಲ್ಲ ಎಂದು ಜೋಶಿ ಹೇಳಿದರು. ಈಗಾಗಲೇ ಡಿ.ಕೆ ಶಿವಕುಮಾರ್ ಜೊತೆ ರಾಹುಲ್ ಗಾಂಧಿ ಒಪ್ಪಂದ ಮಾಡಿಕೊಂಡಿದ್ದಾರೆ. ಹೀಗಾಗಿ ರಾಜ್ಯದ ಹಿಂದುಳಿದ ವರ್ಗದವರು (Backward Class) ಬಿಜೆಪಿ (BJP) ಬೆಂಬಲಿಸುತ್ತಿದ್ದಾರೆ ಎಂದು ಜೋಶಿ ವಿಶ್ಲೇಷಿಸಿದರು.

ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವಕ್ಕೆ ದೇಶದಾದ್ಯಂತ ಹಿಂದುಳಿದ ವರ್ಗದವರು ಮನ್ನಣೆ ನೀಡಿದ್ದಾರೆ. ಹಿಂದುಳಿದ ವರ್ಗಗಳ ಮೇಲೆ ಮೋದಿ ಅವರು ಕಾಳಜಿ ಹೊಂದಿದ್ದು ಹಲವು ಯೋಜನೆಗಳನ್ನ ಹಿಂದುಳಿದ ವರ್ಗದವರ ಅಭಿವೃದ್ದಿಗೆ ನೀಡಿದ್ದಾರೆ. ಹೀಗಾಗಿ ಕರ್ನಾಟಕದಲ್ಲೂ ಹಿಂದುಳಿದ ವರ್ಗದರು ಬಿಜೆಪಿ ಬೆಂಬಲಿಸುತ್ತಿದ್ದಾರೆ ಎಂದರು.

ಸಿದ್ದರಾಮಯ್ಯ ಅವರ ಅಹಿಂದ ರಾಜಕಾರಣ ಈ ಬಾರಿಯ ಚುನಾವಣೆಯಲ್ಲಿ ಫಲಿಸಲ್ಲ. ಏಕೆಂದರೆ ಅಹಿಂದ ವರ್ಗದವರಿಗೆ ಸಿದ್ದರಾಮಯ್ಯ ಅವರು ಸಿಎಂ ಆಗಿ ಮಾಡಿದ್ದೇನು ಇಲ್ಲ. ನೈಜವಾಗಿ ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ದಿಗೆ ಯೋಜನೆಗಳನ್ನ ಹಾಕಿ ಕೆಲಸ ಮಾಡಿದ್ದು ಬಿಜೆಪಿ ಸರ್ಕಾರ. ಸಿದ್ದರಾಮಯ್ಯ ಅವರನ್ನ ಈ ಬಾರಿ ಕಾಂಗ್ರೆಸ್ ಸಿಎಂ ಮಾಡಲ್ಲ ಅನ್ನೋದು ಹಿಂದುಳಿದ ವರ್ಗದವರು ಚೆನ್ನಾಗಿ ಅರ್ಥಮಾಡಿಕೊಂಡಿದ್ದಾರೆ. ಸಬ್ ಕಾ ಸಾಥ್.. ಸಬ್ ಕಾ ವಿಕಾಸ್.. ಬಿಜೆಪಿಯ ಗುರಿಯಾಗಿದೆ. ಎಲ್ಲ ಸಮುದಾಯದವರನ್ನ ಒಟ್ಟಿಗೆ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಪಕ್ಷ ಬಿಜೆಪಿ. ಹೀಗಾಗಿ ಬಿಜೆಪಿ ಅಭ್ಯರ್ಥಿಗಳನ್ನ ಬೆಂಬಲಿಸುವಂತೆ ಪ್ರಲ್ಹಾದ್ ಜೋಶಿ ಇದೇ ವೇಳೆ ರಾಜ್ಯದ ಮತದಾರರಲ್ಲಿ ಮನವಿ ಮಾಡಿದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:52 pm, Sat, 6 May 23

ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ