ಭಟ್ಕಳದಲ್ಲಿ ಕಾಂಗ್ರೆಸ್ ಗೆದ್ದ ಬೆನ್ನಲ್ಲೇ ಬಿಜೆಪಿ ಮುಖಂಡನ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು

|

Updated on: May 14, 2023 | 8:12 PM

ಭಟ್ಕಳ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುತ್ತಿದ್ದಂತೆ, ಕೇಸರಿ ಧ್ವಜದ ಪಕ್ಕ ಮುಸ್ಲಿಂ ಧ್ವಜ ಹಾರಾಟ ನಡೆಸಲಾಯಿತು. ಇದೀಗ ಬಿಜೆಪಿ ಮುಖಂಡನ ಮನೆಗೆ ನುಗ್ಗಿ ಹಲ್ಲೆ ನಡೆಸಲಾಗಿದೆ.

ಭಟ್ಕಳದಲ್ಲಿ ಕಾಂಗ್ರೆಸ್ ಗೆದ್ದ ಬೆನ್ನಲ್ಲೇ ಬಿಜೆಪಿ ಮುಖಂಡನ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು
ಭಟ್ಕಳದಲ್ಲಿ ಕಾಂಗ್ರೆಸ್ ಗೆದ್ದ ಬೆನ್ನಲ್ಲೇ ಬಿಜೆಪಿ ಮುಖಂಡನ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು
Follow us on

ಕಾರವಾರ: ಭಟ್ಕಳ (Bhatkal) ಕ್ಷೇತ್ರದಲ್ಲಿ ಕಾಂಗ್ರೆಸ್ (Congress) ಗೆಲುವು ಸಾಧಿಸುತ್ತಿದ್ದಂತೆ, ಕೇಸರಿ ಧ್ವಜದ ಪಕ್ಕ ಮುಸ್ಲಿಂ ಧ್ವಜ ಹಾರಾಟ ನಡೆಸಲಾಯಿತು. ಇದೀಗ ಬಿಜೆಪಿ (BJP) ಮುಖಂಡನ ಮೇಲೆ ಹಲ್ಲೆ ನಡೆಸಲಾಗಿದೆ. ಹೌದು, ಉತ್ತರಕನ್ನಡ‌ (Uttara Kannada) ಜಿಲ್ಲೆಯ ಭಟ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸುತ್ತಿದ್ದಂತೇ ಬಿಜೆಪಿ ಮುಖಂಡನ ಮನೆಗೆ ನುಗ್ಗಿದ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.

ಬಿಜೆಪಿ ಮುಖಂಡನ ಮನೆಗೆ ನುಗ್ಗಿದ ಸುಮಾರು 15 ಮಂದಿ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದು, ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಭಟ್ಕಳ ಮೂಡಶಿರಾಲಿಯ ರಾಮಚಂದ್ರ ನಾಯ್ಕ್, ಹಳೇಕೋಟೆ ಹನುಮಂತ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರಾಗಿದ್ದು, ಇವರ ಪತ್ನಿ, ಮಕ್ಕಳನ್ನು ದೂಡಿ ರಾಮಚಂದ್ರ ನಾಯ್ಕ್ ಹಾಗೂ ಸಂಬಂಧಿಕ ಯುವಕರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ‌ ನಡೆಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​ಗೆ ಬಹುಮತ; ಭಟ್ಕಳದಲ್ಲಿ ಕೇಸರಿ ಧ್ವಜದ ಪಕ್ಕ ಇಸ್ಲಾಂ ಬಾವುಟ ಹಾರಿಸಿದ ಮುಸ್ಲಿಂ ಯುವಕರು

ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಫಲಿತಾಂಶ ಮೇ 13ರಂದು ಹೊರಬಿದ್ದಿದ್ದು, ಭಟ್ಕಳದಲ್ಲಿ ಮಾಂಕಾಳು ವೈದ್ಯ ಅವರು ಬಿಜೆಪಿಯ ಸುನೀಲ್ ನಾಯ್ಕ್ ವಿರುದ್ಧ ಗೆದ್ದಿದ್ದರು. ಈ ವಿಚಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪದೇ ಪದೇ ರಾಮಚಂದ್ರ ಅವರ ಮನೆಯಲ್ಲಿದ್ದ ಸಂಬಂಧಿಕ ಯುವಕರಿಗೆ ಕರೆ ಮಾಡಿ ಕಿರಿಕಿರಿ ಮಾಡುತ್ತಿದ್ದರು. ಈ ವೇಳೆ ಯುವಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಫೋನ್‌ನಲ್ಲಿ ಬೈದಾಡಿಕೊಂಡಿದ್ದರು.

ನಂತರ ರಾಮಚಂದ್ರ ನಾಯ್ಕ್ ಅವರ ಮನೆಗೆ ಹೊಕ್ಕಿದ ಕಾಂಗ್ರೆಸ್ ಕಾರ್ಯಕರ್ತರು ಎಲ್ಲರ ಮೇಲೆ ಹಲ್ಲೆ ನಡೆಸಿದ್ದಾರೆ. ಘಟನೆ ಸಂಬಂಧಿಸಿ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಎರಡೂ ಪಕ್ಷದವರಿಂದ ದೂರು ದಾಖಲಾಗಿದ್ದು, ಎರಡು ಪಕ್ಷದವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ