2019ರಲ್ಲಿ ಮೋದಿ ಸರ್​​ನೇಮ್ ಹೇಳಿಕೆ ನೀಡಿದ್ದ ಕೋಲಾರದಿಂದಲೇ ಕರ್ನಾಟಕ ಚುನಾವಣೆ ಪ್ರಚಾರ ಆರಂಭಿಸಲಿದ್ದಾರೆ ರಾಹುಲ್​​ ಗಾಂಧಿ

ರಾಹುಲ್ ಗಾಂಧಿ ಅವರು ಕೋಲಾರಕ್ಕೆ ಬಂದು ತಮ್ಮ ಸತ್ಯಮೇವ ಜಯತೇ ರ್ಯಾಲಿ ಆರಂಭಿಸಲಿದ್ದಾರೆ. ಇಲ್ಲಿಂದಲೇ ಚುನಾವಣಾ ಯಾತ್ರೆ ಆರಂಭಿಸುವಂತೆ ಮನವಿ ಮಾಡಿದ್ದೆವು. ಅವರು ಹೇಳಿಕೆ ನೀಡಿದ್ದ ಜಾಗ ಅದು. ಅವರು ಇಲ್ಲಿಂದಲೇ ಮೆಗಾ ರ್ಯಾಲಿ ಆರಂಭಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

2019ರಲ್ಲಿ ಮೋದಿ ಸರ್​​ನೇಮ್ ಹೇಳಿಕೆ ನೀಡಿದ್ದ ಕೋಲಾರದಿಂದಲೇ ಕರ್ನಾಟಕ ಚುನಾವಣೆ ಪ್ರಚಾರ ಆರಂಭಿಸಲಿದ್ದಾರೆ ರಾಹುಲ್​​ ಗಾಂಧಿ
ರಾಹುಲ್ ಗಾಂಧಿ
Follow us
ರಶ್ಮಿ ಕಲ್ಲಕಟ್ಟ
|

Updated on: Mar 29, 2023 | 9:38 PM

ಬೆಂಗಳೂರು: ಮೇ 10 ರಂದು ನಡೆಯಲಿರುವ ರಾಜ್ಯ ಚುನಾವಣೆಗಾಗಿ ಕಾಂಗ್ರೆಸ್‌ನ ರಾಹುಲ್ ಗಾಂಧಿ(Rahul Gandhi) ಕರ್ನಾಟಕದಲ್ಲಿ (Karnataka Election) ತಮ್ಮ ಪ್ರಚಾರವನ್ನು ಮುಂದಿನ ತಿಂಗಳು ಪ್ರಾರಂಭಿಸಲಿದ್ದಾರೆ. ಪ್ರತಿಭಟನೆಯ ಸಂಕೇತವಾಗಿ ಏಪ್ರಿಲ್ 5 ರಂದು ರಾಹುಲ್ ಗಾಂಧಿ ಅವರು ಮೋದಿ ಸರ್​​ನೇಮ್ (Modi Surname) ಹೇಳಿಕೆ ನೀಡಿದ್ದ ಸ್ಥಳವಾದ ಕೋಲಾರದಲ್ಲಿ ರ್ಯಾಲಿ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿಯವರ ಸರ್​​ನೇಮ್ ಹೇಳಿಕೆ ವಿಚಾರದಲ್ಲಿ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಇದರಿಂದಾಗಿ ರಾಹುಲ್ ಸಂಸದ ಸ್ಥಾನದಿಂದ ಅನರ್ಹರಾಗಿದ್ದರು.

ರಾಹುಲ್ ಗಾಂಧಿ ಅವರು ಕೋಲಾರಕ್ಕೆ ಬಂದು ತಮ್ಮ ಸತ್ಯಮೇವ ಜಯತೇ ರ್ಯಾಲಿ ಆರಂಭಿಸಲಿದ್ದಾರೆ. ಇಲ್ಲಿಂದಲೇ ಚುನಾವಣಾ ಯಾತ್ರೆ ಆರಂಭಿಸುವಂತೆ ಮನವಿ ಮಾಡಿದ್ದೆವು. ಅವರು ಹೇಳಿಕೆ ನೀಡಿದ್ದ ಜಾಗ ಅದು. ಅವರು ಇಲ್ಲಿಂದಲೇ ಮೆಗಾ ರ್ಯಾಲಿ ಆರಂಭಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

2019 ರ ಚುನಾವಣೆಗೆ ಪೂರ್ವಭಾವಿಯಾಗಿ ಕೋಲಾರದಲ್ಲಿ ನಡೆದ ರ್ಯಾಲಿಯಲ್ಲಿ, ಪರಾರಿಯಾದ ಉದ್ಯಮಿಗಳಾದ ಲಲಿತ್ ಮೋದಿ ಮತ್ತು ನೀರವ್ ಮೋದಿಯನ್ನು ಉಲ್ಲೇಖಿಸಿ ಎಲ್ಲಾ ಕಳ್ಳರಿಗೂ ಮೋದಿ ಎಂಬ ಸರ್ ನೇಮ್ ಯಾಕಿದೆ ಎಂದು ರಾಹುಲ್ ಕೇಳಿದ್ದರು.

ಆದರೆ ಇದು ಇತರೆ ಹಿಂದುಳಿದ ವರ್ಗಗಳಿಗೆ ಮಾಡಿದ ಅವಮಾನ ಎಂದು ಬಿಜೆಪಿ ಪರಿಗಣಿಸಿದ್ದು, ಗುಜರಾತ್‌ನ ಪಕ್ಷದ ನಾಯಕ ಪೂರ್ಣೇಶ್ ಮೋದಿ ಪ್ರಕರಣ ದಾಖಲಿಸಿದ್ದರು. ತಮ್ಮ ಹೇಳಿಕೆಗೆ ಕ್ಷಮೆಯಾಚಿಸಲು ರಾಹುಲ್ ನಿರಾಕರಿಸಿದ್ದರು. ಶುಕ್ರವಾರ, ಅವರು ಲೋಕಸಭೆಯಿಂದ ಅನರ್ಹಗೊಂಡರು, ಇದು ಭಾರಿ ಪ್ರತಿಪಕ್ಷಗಳ ಆಕ್ರೋಶಕ್ಕೆ ಕಾರಣವಾಯಿತು.

18 ವಿರೋಧ ಪಕ್ಷಗಳ ನಾಯಕರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇತ್ತ ಕಾಂಗ್ರೆಸ್ ಈ ಬೆಳವಣಿಗೆಯನ್ನು ಬೆಳ್ಳಿ ರೇಖೆ ಎಂದು ನೋಡುತ್ತಿದ್ದು, ಮುಂದಿನ ವರ್ಷದ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ಪ್ರತಿಪಕ್ಷಗಳನ್ನು ಒಗ್ಗೂಡಿಸಲು ಇದು ಅಸ್ತ್ರದಂತಾಗಿದೆ. ಬುಧವಾರ ಬೆಳಗ್ಗೆ ಚುನಾವಣಾ ಆಯೋಗವು ಕರ್ನಾಟಕಕ್ಕೆ ಚುನಾವಣಾ ದಿನಾಂಕವನ್ನು ಘೋಷಿಸಿತು. ಅಲ್ಲಿ ಆಡಳಿತಾರೂಢ ಬಿಜೆಪಿ ಸತತ ಎರಡನೇ ಅವಧಿಗೆ ಅಧಿಕಾರವೇರುವ ನಿರೀಕ್ಷೆಯಲ್ಲಿದೆ.

ಇದನ್ನೂ ಓದಿ:ನೋಟು ಎಸೆದ ಪ್ರಕರಣ; ಡಿಕೆ ಶಿವಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

2018ರಲ್ಲಿ ಎಚ್‌ಡಿ ಕುಮಾರಸ್ವಾಮಿ ಅವರ ಜನತಾದಳ ಸೆಕ್ಯುಲರ್‌ನೊಂದಿಗೆ ಕರ್ನಾಟಕದಲ್ಲಿ ಸರ್ಕಾರ ರಚಿಸಿದ್ದ ಕಾಂಗ್ರೆಸ್ ಒಂದು ವರ್ಷದ ನಂತರ ಅಧಿಕಾರದಿಂದ ಹೊರಗುಳಿಯಿತು. ಹಲವಾರು ಶಾಸಕರು ಕೈಬಿಟ್ಟ ಕಾರಣ ಮೈತ್ರಿ ಸರ್ಕಾರ ಪತನವಾಯಿತು. ಸರ್ಕಾರ ಬೀಳಲು ಬಿಜೆಪಿಯೇ ಕಾರಣ ಎಂದು ಎರಡೂ ಪಕ್ಷಗಳು ಆರೋಪಿಸಿದ್ದವು.

ಈ ಬಾರಿಯೂ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸುತ್ತಿದೆ. ಅತಂತ್ರ ಅಸೆಂಬ್ಲಿ ವೇಳೆ ಕುಮಾರಸ್ವಾಮಿಯವರ ಜೆಡಿಎಸ್ ಜೊತೆ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುತ್ತದೆಯೇ ಎಂಬ ಪ್ರಶ್ನೆಗೆ, ಡಿಕೆ ಶಿವಕುಮಾರ್ ಅತಂತ್ರ ಅಸೆಂಬ್ಲಿ ಪ್ರಶ್ನೆಯೇ ಇಲ್ಲ, ಏಕೈಕ ದೊಡ್ಡ ಪಕ್ಷ ಅಸ್ತಿತ್ವದಲ್ಲಿದೆ ಎಂದು ಎನ್ ಡಿಟಿವಿಗೆ ಹೇಳಿದ್ದಾರೆ.

ಮತ್ತಷ್ಟು ಚುನಾವಣಾ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ