ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣಾ(Karnataka Assembly Election) ಕಣ ರಂಗೇರುತ್ತಿದೆ. ಅದರಂತೆ ಉಭಯ ಪಕ್ಷಗಳ ನಾಯಕರುಗಳು ಅಬ್ಬರದ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಅದರಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ‘ಕಾಂಗ್ರೆಸ್(Congress) ಹಾಗೂ ಸಿಪಿಐ(CPI) ಎರಡೂ ಪಕ್ಷಗಳ ನಡುವೆ ಸಿದ್ಧಾಂತದಲ್ಲಿ ಸ್ವಲ್ಪ ವ್ಯತ್ಯಾಸ ಇರಬಹುದು, ಆದರೆ ನಮ್ಮ ಗುರಿ ಮಾತ್ರ ಬಡವರ ಪರ ನ್ಯಾಯ ನೀಡುವುದು. ರಾಜ್ಯದ 7 ಕ್ಷೇತ್ರಗಳಲ್ಲಿ ಸಿಪಿಐ ಪಕ್ಷದ ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದಾರೆ. ಉಳಿದ ಕ್ಷೇತ್ರಗಳಲ್ಲಿ ಕಾಂಗ್ರೆಸ್ಗೆ ಸಿಪಿಐ ಬೆಂಬಲ ನೀಡಲಿದೆ. ಇದು ತುಂಬಾ ಕಾಂಗ್ರೆಸ್ಗೆ ಸಹಾಯ ಆಗುತ್ತೆ. ಈ ಮೂಲಕ ಒಟ್ಟಿಗೆ ಬಿಜೆಪಿ ವಿರುದ್ಧ ಹೋರಾಟ ಮಾಡುತ್ತೇವೆ ಎಂದಿದ್ದಾರೆ.
ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಣದೀಪ್ ಸುರ್ಜೇವಾಲ ‘ ಸಿಪಿಐ ಪಕ್ಷಕ್ಕೆ ಬಹುದೊಡ್ಡ ಇತಿಹಾಸ ಇದೆ. ಕಾರ್ಮಿಕ, ಬಡವರು ಪರ ಹೋರಾಟ ಮಾಡಿದ್ದಾರೆ. ನಮ್ಮ ಗುರಿ ಒಂದೇ ಬಸವರಾಜ ಬೊಮ್ಮಾಯಿ 40% ಸರ್ಕಾರ ವಿರುದ್ದ ಹೋರಾಟ ಮಾಡುವುದು. ಅದು 80 ಲಕ್ಷ ಹಣ ನೀಡಿ ಸಬ್ ಇನ್ಸ್ಪೆಕ್ಟರ್ ಹುದ್ದೆ ಖರೀದಿಸಲು ಅಲ್ಲ. ಭ್ರಷ್ಟಾಚಾರ, ಲೂಟಿ ಹೊಡೆಯುತ್ತಿರುವ ಬಿಜೆಪಿ ವಿರುದ್ಧ ಹೋರಾಟ. ಸಂವಿಧಾನದ ರಕ್ಷಣೆ, ಸಮಾನತೆ, ಸಾಮಾಜಿಕ ನ್ಯಾಯ ಕೊಡಿಸಲು, ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ವಿರುದ್ಧ ನಮ್ಮ ಹೋರಾಟ ಎಂದರು.
ಇದನ್ನೂ ಓದಿ:Yadagatta: ರಾಜಕೀಯ ದ್ವೇಷ ಹಿನ್ನೆಲೆ ಗುಂಪು ಘರ್ಷಣೆ: ಪಕ್ಷೇತರ ಹಾಗೂ ಬಿಜೆಪಿ ಅಭ್ಯರ್ಥಿ ಬೆಂಬಲಿಗರ ಮಧ್ಯೆ ಗಲಾಟೆ
ಲಿಂಗಾಯತ ಸಿಎಂಗಳ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ವಿಚಾರ; ಬೆಂಬಲಕ್ಕೆ ನಿಂತ ರಣದೀಪ್ ಸಿಂಗ್ ಸುರ್ಜೇವಾಲ
ಲಿಂಗಾಯತ ಸಿಎಂಗಳ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು ‘ಲಿಂಗಾಯತ ಸಮುದಾಯದ ನಾಯಕರನ್ನು ಹೊರಹಾಕಿದ್ದು ನಾವಲ್ಲ. ಮುಖ್ಯಮಂತ್ರಿ ಆಗಿದ್ದ ಜಗದೀಶ್ ಶೆಟ್ಟರ್ರನ್ನು ಹೊರಹಾಕಿದ್ದು ನಾವಲ್ಲ. ಲಿಂಗಾಯತ ಮಾಜಿ ಸಿಎಂ, ಡಿಸಿಎಂಗೆ ಅವಮಾನ ಮಾಡಿದ್ದು ನಾವಲ್ಲ. ಬಿಜೆಪಿ ಯಾಕೆ ಲಿಂಗಾಯತ ಸಮುದಾಯಕ್ಕೆ ಅವಮಾನ ಮಾಡುತ್ತಿದೆ ಎನ್ನುವ ಮೂಲಕ ಬಿಜೆಪಿಗೆ ಟಾಂಗ್ ನೀಡಿದ್ದಾರೆ.
ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ