ಸಿಟಿ ರವಿ ನನ್ನನ್ನು ಬಿಜೆಪಿಯಿಂದ ಹೊರ ಕಳಿಸಿದರು, ಈಗ ಜನ ಅವರನ್ನು ಕ್ಷೇತ್ರದಿಂದಲೇ ಹೊರಕಳಿಸಿದ್ದಾರೆ: ಎಂಪಿ ಕುಮಾರಸ್ವಾಮಿ ವ್ಯಂಗ್ಯ

ಮೂಡಿಗೆರೆ ಕ್ಷೇತ್ರದಲ್ಲಿ ಬಿಜೆಪಿಗೆ ಜೀವ ತುಂಬಿದ್ದೇ ನಾನು. ಸಿ.ಟಿ.ರವಿ ನನ್ನನ್ನು ಬಿಜೆಪಿಯಿಂದ ಹೊರ ಕಳಿಸಿದರು. ಆದರೆ ಸಿ.ಟಿ.ರವಿಯನ್ನು ಕ್ಷೇತ್ರದಿಂದಲೇ ಜನ ಹೊರಕಳಿಸಿದ್ದಾರೆ.

ಸಿಟಿ ರವಿ ನನ್ನನ್ನು ಬಿಜೆಪಿಯಿಂದ ಹೊರ ಕಳಿಸಿದರು, ಈಗ ಜನ ಅವರನ್ನು ಕ್ಷೇತ್ರದಿಂದಲೇ ಹೊರಕಳಿಸಿದ್ದಾರೆ: ಎಂಪಿ ಕುಮಾರಸ್ವಾಮಿ ವ್ಯಂಗ್ಯ
ಎಂಪಿ ಕುಮಾರಸ್ವಾಮಿ, ಸಿ.ಟಿ. ರವಿ
Follow us
ಆಯೇಷಾ ಬಾನು
|

Updated on:May 15, 2023 | 10:40 AM

ಚಿಕ್ಕಮಗಳೂರು: ಬಿಜೆಪಿಯ ಭದ್ರಕೋಟೆ, ಹಿಂದುತ್ವದ ಕಿಚ್ಚಿನ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಿಜೆಪಿಗೆ ಹೀನಾಯ ಸೋಲಾಗಿದೆ. ಹಿಂದುತ್ವದ ಫೈಯರ್ ಬ್ರಾಂಡ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದಶಿ ಸಿ.ಟಿ. ರವಿ(CT Ravi) ಸೇರಿದಂತೆ ಹಾಲಿ ನಾಲ್ಕು ಶಾಸಕರನ್ನ ಸೋಲಿಸುವ ಮೂಲಕ ಬಿಜೆಪಿ ಕೋಟೆಯನ್ನ ಕಾಂಗ್ರೆಸ್ ಕಬ್ಜ ಮಾಡಿದೆ. ಮತ್ತೊಂದೆಡೆ ಸಿ.ಟಿ.ರವಿ ಸೋಲಿನ ಬಗ್ಗೆ ಮೂಡಿಗೆರೆ ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ(MP Kumaraswamy) ವ್ಯಂಗ್ಯವಾಡಿದ್ದಾರೆ.

ಮೂಡಿಗೆರೆ ಕ್ಷೇತ್ರದಲ್ಲಿ ಬಿಜೆಪಿಗೆ ಜೀವ ತುಂಬಿದ್ದೇ ನಾನು. ಸಿ.ಟಿ.ರವಿ ನನ್ನನ್ನು ಬಿಜೆಪಿಯಿಂದ ಹೊರ ಕಳಿಸಿದರು. ಆದರೆ ಸಿ.ಟಿ.ರವಿಯನ್ನು ಕ್ಷೇತ್ರದಿಂದಲೇ ಜನ ಹೊರಕಳಿಸಿದ್ದಾರೆ. ಚಿಕ್ಕಮಗಳೂರು ಇನ್ಮುಂದೆ ವೀರಶೈವ-ಲಿಂಗಾಯತರ ಕ್ಷೇತ್ರ. ಸಿ.ಟಿ.ರವಿ ದತ್ತಮಾಲೆ, ಅಹಿತಕರ ಘಟನೆ ಮುಂದಿಟ್ಟು ಪ್ರಚಾರ ನಡೆಸಿದ್ರು. ಇನ್ಮುಂದೆ ಸಿ.ಟಿ.ರವಿಯ ಈ ವಿಚಾರಗಳು ಕೆಲಸ ಮಾಡುವುದಿಲ್ಲ. ಮಾಜಿ ಸಿಎಂ ಯಡಿಯೂರಪ್ಪ ಮೊಬೈಲ್ ಸ್ವಿಚ್​​​ ಆಫ್ ಮಾಡಲಿಲ್ಲ. ಫೋನ್ ಸ್ವಿಚ್​​​ ಆಫ್ ಮಾಡಿದ್ರೆ ಬಿಜೆಪಿಗೆ 50 ಸೀಟ್ ಅಷ್ಟೇ ಬರುತ್ತಿತ್ತು ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಪಾಕಿಸ್ತಾನ ಪರ ಘೋಷಣೆ: ಸ್ವಯಂಪ್ರೇರಿತ ದೂರು ದಾಖಲು

ನನ್ನನ್ನು ಬಿಟ್ಟಿದ್ದಕ್ಕೆ 5 ಕ್ಷೇತ್ರ ಹೋಗುತ್ತೆ ಅಂತ ಜನರೇ ಹೇಳಿದ್ದರು. ಜೆಡಿಎಸ್​ನಲ್ಲಿ ಬೂತ್​ ಕಮಿಟಿ, ಪಕ್ಷ ಸಂಘಟನೆ ಇರಲಿಲ್ಲ. ಹಾಗಾಗಿ ನನಗೆ ಸೋಲುಂಟಾಗಿದೆ. ಎಲ್ಲವನ್ನೂ ಸರಿಮಾಡಿಕೊಂಡು ಜೆಡಿಎಸ್​ ಪಕ್ಷ ಸಂಘಟನೆ ಮಾಡುವೆ. ಮುಂಬರುವ ಜಿ.ಪಂ., ತಾ.ಪಂ. ಚುನಾವಣೆಯಲ್ಲಿ ಪಕ್ಷ ಗೆಲ್ಲಿಸಲು ಶ್ರಮ ವಹಿಸುವೆ ಎಂದು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯಲ್ಲಿ ಎಂ.ಪಿ.ಕುಮಾರಸ್ವಾಮಿ ತಿಳಿಸಿದರು.

20 ವರ್ಷದ ಭದ್ರಕೋಟೆಯನ್ನು ವಶಪಡಿಸಿಕೊಂಡ ಕೈ

ಚಿಕ್ಕಮಗಳೂರು ಜಿಲ್ಲೆಯ ಪಂಚ ಕ್ಷೇತ್ರಗಳನ್ನ ತನ್ನ ಹಿಡಿತದಲ್ಲಿ ಇಟ್ಟುಕೊಂಡಿಂದ ಬಿಜೆಪಿಗೆ ಚುನಾವಣೆಯ ಫಲಿತಾಂಶ ಕೆಂಡದಂತೆ ಸುಡ ತೊಡಗಿದೆ. 20 ವರ್ಷಗಳಿಂದ ಬಿಜೆಪಿ ಭದ್ರಕೋಟೆಯಾಗಿದ್ದ ಚಿಕ್ಕಮಗಳೂರು ಕ್ಷೇತ್ರವನ್ನ ಕಬ್ಜಾ ಮಾಡಿದ್ದ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಸೋಲು ಸೇರಿದಂತೆ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿಯ ಹಾಲಿ ಶಾಸಕರು ಮನೆಯ ದಾರಿ ಹಿಡಿದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ವಿಧಾನಸಭಾ ಚುನಾವಣೆಯ ಸಂಪೂರ್ಣ ಜವಾಬ್ದಾರಿಯನ್ನ ವಹಿಸಿಕೊಂಡಿದ್ದ ಸಿ.ಟಿ ರವಿಯನ್ನ ಟಾರ್ಗೆಟ್‌ ಮಾಡಿದ್ದ ಕಾಂಗ್ರೆಸ್ ಲಿಂಗಾಯತ ಮುಖಂಡರು ಸಿಟಿ ರವಿಯ ಒಂದು ಕಾಲದ ಆಪ್ತ ಎಚ್.ಡಿ ತಮ್ಮಯ್ಯನನ್ನ ಕಣಕ್ಕಿಳಿಸುವ ಮೂಲಕ ಲಿಂಗಾಯತ ಅಸ್ತ್ರ ಪ್ರಯೋಗ ಮಾಡಿತ್ತು‌.

ಕಾಂಗ್ರೆಸ್ ಜೊತೆಗೆ ಜೆಡಿಎಸ್ ಕೈ ಜೋಡಿಸಿ ಜೆ.ಡಿಎಸ್ ಅಭ್ಯರ್ಥಿ ಇದ್ರು ಬಹಿರಂಗವಾಗಿ ಕಾಂಗ್ರೆಸ್ ಬೆಂಬಲಿಸುವಂತೆ ಎಚ್.ಡಿ.ಕುಮಾರಸ್ವಾಮಿ ಪರಮಾಪ್ತ MLC SL ಭೋಜೇಗೌಡ ಕಣಕ್ಕಿಳಿದಿದ್ರು. ಕಾಂಗ್ರೆಸ್ ಜೆಡಿಎಸ್ ಜೊತೆ ದಲಿತ ಸಂಘಟನೆಗಳು ಒಂದಾಗಿ ನಾಲ್ಕು ಬಾರಿ ಶಾಸಕನಾಗಿ ಐದನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದ ಸಿ.ಟಿ ರವಿಯನ್ನ ಸೋಲಿಸುವ ಮೂಲಕ ಚಿಕ್ಕಮಗಳೂರು ಜಿಲ್ಲೆಯ ಐದು ಕ್ಷೇತ್ರವನ್ನ ಕಾಂಗ್ರೆಸ್ ವಶಪಡಿಸಿಕೊಂಡಿದೆ. ಚಿಕ್ಕಮಗಳೂರು ಜಿಲ್ಲೆಯ ಐದು ಕ್ಷೇತ್ರದ ಬಿಜೆಪಿ ಸೋಲಿಗೆ ಹೊಣೆ ಹೊತ್ತಿರುವ ಸಿ.ಟಿ ರವಿ ನಮ್ಮ ಸೋಲಿಗೆ ಅವಲೋಕನ ಮಾಡುತ್ತೇವೆ, ಜನರ ತೀರ್ಪಿಗೆ ಗೌರವಿಸುತ್ತೇವೆ. ನನ್ನ ಸೋಲಿಸಲು ಜೆಡಿಎಸ್ ಟಾರ್ಗೆಟ್ ಮಾಡಿ ಕಾಂಗ್ರೆಸ್ ಬೆಂಬಲಿಸಿದ್ದೆ ಕಾರಣ ಎಂದಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:39 am, Mon, 15 May 23

ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?