Davanagere North Election Results: ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರ ಚನಾವಣೆ 2023 ಫಲಿತಾಂಶ; ಬಿಜೆಪಿ-ಕಾಂಗ್ರೆಸ್ ಜಿದ್ದಾಜಿದ್ದಿನ ನಡುವೆ ಆಪ್ ಪೈಪೋಟಿ

|

Updated on: May 13, 2023 | 2:44 AM

Davanagere North Assembly Election Results 2023 Live Counting Updates: ದಾವಣಗೆರೆ ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್​ನ ಎಸ್​ಎಸ್ ಮಲ್ಲಿಕಾರ್ಜುನ ಮತ್ತು ಬಿಜೆಪಿಯ ಲೋಕಿಕೆರೆ ನಾಗರಾಜ್ ನಡುವೆ ನೇರ ಪೈಪೋಟಿ ಏರ್ಪಟ್ಟಿದೆ.

Davanagere North Election Results: ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರ ಚನಾವಣೆ 2023 ಫಲಿತಾಂಶ; ಬಿಜೆಪಿ-ಕಾಂಗ್ರೆಸ್ ಜಿದ್ದಾಜಿದ್ದಿನ ನಡುವೆ ಆಪ್ ಪೈಪೋಟಿ
ದಾವಣಗೆರೆ ಉತ್ತರ ವಿಧಾನಸಭಾ ಚನಾವಣೆ ಫಲಿತಾಂಶ
Follow us on

Davanagere North Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಲೋಕಿಕೆರೆ ನಾಗರಾಜ್, ಕಾಂಗ್ರೆಸ್​ನಿಂದ ಶಾಮನೂರು ಶಿವಶಂಕರಪ್ಪ ಅವರ ಪುತ್ರ ಎಸ್​ಎಸ್​ ಮಲ್ಲಿಕಾರ್ಜುನ, ಆಮ್ ಆದ್ಮಿ ಪಕ್ಷದಿಂದ ಶ್ರೀಧರ ಪಾಟೀಲ ಅವರು ಕಣದಲ್ಲಿದ್ದಾರೆ.

2018ರಲ್ಲಿ ನಡೆದ ಚುನಾವಣೆಯಲ್ಲಿ ಉತ್ತರ ಕ್ಷೇತ್ರಕ್ಕೆ ಬಿಜೆಪಿಯ ಎಸ್​ಎ ರವೀಂದ್ರನಾಥ್ ಅವರು ಶಾಸಕರಾಗಿ ಆಯ್ಕೆಯಾಗಿದ್ದರು. ಇವರ ಪ್ರತಿಸ್ಪರ್ಧಿಯಾಗಿದ್ದ ಕಾಂಗ್ರೆಸ್​ನ ಮಲ್ಲಿಕಾರ್ಜುನ ಅವರು 4071 ಮತಗಳ ಅಂತದಲ್ಲಿ ಸೋಲು ಅನುಭವಿಸಿದ್ದರು.

2008ರ ಚುನಾವಣೆಯಲ್ಲಿ ಜೆಡಿಎಸ್​ನ ಸತೀಶ್ ಅವರನ್ನು ಬಿಜೆಪಿಯ ರವೀಂದ್ರನಾಥ್ ಅವರು 53 ಸಾವಿರ ಮತಗಳ ಅಂತದಿಂದ ಸೋಲಿಸಿದ್ದರು. 2013ರ ಚುನಾವಣೆಯಲ್ಲಿ ರವೀಂದ್ರನಾಥ್ ಅವರನ್ನ 57 ಸಾವಿರ ಮತಗಳ ಅಂತರದಿಂದ ಮಲ್ಲಿಕಾರ್ಜುನ ಅವರು ಸೋಲಿಸಿ ಶಾಸಕರಾಗಿ ಆಯ್ಕೆಯಾಗಿದ್ದರು. 2018ರಲ್ಲಿ ಮಲ್ಲಿಕಾರ್ಜುನ ಅವರನ್ನು ರವೀಂದ್ರನಾಥ್ ಅವರು 4 ಸಾವಿರ ಮತಗಳ ಅಂತರದಿಂದ ಸೋಲಿಸಿದ್ದಾರೆ.

2023ರ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಬಿಜೆಪಿ ಲೋಕಿಕೆರೆ ನಾಗರಾಜ್ ಅವರನ್ನು ಕಣಕ್ಕಿಳಿಸಿದ್ದು, ಕಾಂಗ್ರೆಸ್ ಮತ್ತೆ ಮಲ್ಲಿಕಾರ್ಜುನ ಅವರನ್ನೇ ಕಣಕ್ಕಿಳಿಸಿದೆ. ಈ ಬಾರಿ ಆಮ್ ಆದ್ಮಿ ಪಕ್ಷವು ಅದೃಷ್ಟ ಪರೀಕ್ಷೆಗೆ ಇಳಿದಿದ್ದು, ಶ್ರೀಧರ್ ಪಾಟೀಲ್ ಅವರನ್ನು ಕಣಕ್ಕಿಳಿಸಿದೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ