AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಲ್​ ಸಂತೋಷ್ ವಿರುದ್ಧ ಅವಹೇಳನಕಾರಿ ಪೋಸ್ಟ್; ಓರ್ವ ಅರೆಸ್ಟ್

"ನಾವು ಹಿಂದುತ್ವದಲ್ಲಿ ಮುಂದುವರಿಯುತ್ತೇವೆ, ನಮಗೆ ಲಿಂಗಾಯತರ ಅಗತ್ಯವಿಲ್ಲ- ಬಿಎಲ್ ಸಂತೋಷ್" ಎಂದು ಪೋಸ್ಟ್ ಮಾಡಿ ವೈರಲ್ ಮಾಡಿದವರ ವಿರುದ್ಧ ಬೆಂಗಳೂರಿನ ಉತ್ತರ ವಿಭಾಗ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬಿಎಲ್​ ಸಂತೋಷ್ ವಿರುದ್ಧ ಅವಹೇಳನಕಾರಿ ಪೋಸ್ಟ್; ಓರ್ವ ಅರೆಸ್ಟ್
ಬಿಎಲ್​ ಸಂತೋಷ್ ವಿರುದ್ಧ ಅವಹೇಳನಕಾರಿ ಪೋಸ್ಟ್ ವೈರಲ್ ಮಾಡಿದ ಕಾಂಗ್ರೆಸ್ ಮುಖಂಡರ ವಿರುದ್ಧ ದೂರು ದಾಖಲು
Rakesh Nayak Manchi
Rakesh Nayak Manchi|

Updated on:May 06, 2023 | 10:04 PM

Share

ಬೆಂಗಳೂರು: ಬಿಎಲ್ ಸಂತೋಷ್ (BL Santhosh) ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿ ವೈರಲ್ ಮಾಡಿದ್ದ ಪ್ರಕರಣ ಸಂಬಂಧ ಮೈಸೂರು ನಗರ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಲಿಂಗಾಯತರ ವಿರುದ್ಧ ಸಂತೋಷ್ ಹೇಳಿಕೆ ನೀಡಿದ ರೀತಿ ಸುದ್ದಿ ಪತ್ರಿಕಾ ವರದಿ ಸೃಷ್ಟಿ ಮಾಡಿದ್ದ ದಿಲೀಪ್ ಗೌಡ  ಬಂಧಿತ ಆರೋಪಿಯಾಗಿದ್ದಾನೆ. ವೈರಲ್ ಪೋಸ್ಟ್ ಸಂಬಂಧ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ ತನಿಖೆ ನಡೆಸಿದ ಪೊಲೀಸರು ದಿಲೀಪ್​ನನ್ನು ಬಂಧಿಸಿದ್ದಾರೆ. ಇನ್ನೊಂದೆಡೆ, ಬೆಂಗಳೂರಿನ ಉತ್ತರ ವಿಭಾಗ ಸೈಬರ್ ಪೊಲೀಸ್ ಠಾಣೆಯಲ್ಲೂ ಪ್ರಕರಣ ದಾಖಲಾಗಿದೆ. ಆರೋಪಿಗಳಾದ ಬೈರಪ್ಪ ಹರೀಶ್ ಕುಮಾರ್, ಹೇಮಂತ್ ಕುಮಾರ್, ದಿನೇಶ್ ಅಮಿನ್ ಮಟ್ಟು, ಬಿಂದು ಗೌಡ, ದಿಲೀಪ್ ಗೌಡ ವಿರುದ್ಧ ಬಿಜೆಪಿ ಕಾನೂನು ಘಟಕದ ಯಶವಂತ ಅವರು ದೂರು ನೀಡಿದ್ದಾರೆ.

ವೈರಲ್ ಪೋಸ್ಟ್​ ಬಗ್ಗೆ ಸ್ಪಷ್ಟನೆ ನೀಡಿದ ಬಿಎಲ್ ಸಂತೋಷ್, ಇದು ಫೋಟೋಶಾಪ್​ನಲ್ಲಿ ತಿರುಚಲಾದ ವರದಿ ಎಂದು ಹೇಳಿದ್ದಾರೆ. ಕಾಂಗ್ರೆಸ್​ಗೆ ಚರ್ಚಿಸಲು ಯಾವುದೇ ವಿಚಾರಗಳಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ಸುನಾಮಿಯಿಂದ ದಿಕ್ಕೆಟ್ಟ ಕಾಂಗ್ರೆಸ್ ನಾಯಕರಲ್ಲಿ ವಿಚಾರಗಳಿಗೂ ಕೊರತೆಯಿದೆ. ಕಾಂಗ್ರೆಸ್​ನ ನಾಯಕರು ಮತ್ತು ಉಸ್ತುವಾರಿಗಳು ಫೋಟೋಶಾಪ್ ಕೂಲಿಗಳಾಗಿ ಹೋಗಿದ್ದಾರೆ. ಅವರ ಟ್ರೋಲ್ ಸೈನ್ಯ ಸಹ ಅಂತಹದ್ದೇ ನಕಾರಾತ್ಮಕ ಮನಸ್ಥಿತಿಯನ್ನು ಹೊಂದಿದೆ ಎಂದು ಆಕ್ರೋಶ ಹೊರಹಾಕಿದ್ದರು.

ಇದನ್ನೂ ಓದಿ: ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಜಾಹೀರಾತು: ಡಿಕೆ ಶಿವಕುಮಾರ್​ಗೆ ನೋಟಿಸ್

ವೈರಲ್ ಪೋಸ್ಟ್​ನಲ್ಲೇನಿದೆ?

ಬೆಂಗಳೂರಿನ ಖಾಸಗಿ ಹೋಟೆಲೊಂದರಲ್ಲಿ ನಡೆದ ರಾಜ್ಯ, ಹೋಬಳಿ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಬಿಎಲ್ ಸಂತೋಷ್ ಹೇಳಿಕೆ ಎಂದು ಹೇಳಲಾಗಿರುವ ಪತ್ರಿಕಾ ವರದಿ ವೈರಲ್ ಆಗುತ್ತಿದೆ. “ಬಿಜೆಪಿ ನಂಬಿಕೆ ಇಟ್ಟಿರುವುದು ಹಿಂದುತ್ವದ ಆಧಾರದ ಮೇಲೆ ಹೊರತು ಯಾವುದೊ ನಾಯಕನ ಜಾತಿಯ ಮೇಲಲ್ಲ. ಕಾರ್ಯಕರ್ತರು ಹಿಂದುತ್ವದ ಮೇಲೆ ನಂಬಿಕೆ ಇಡಬೇಕೇ ಹೊರತು ಯಾವುದೋ ವ್ಯಕ್ತಿಯ ಮೇಲಲ್ಲ” ಎಂದು ಹೇಳಿದ್ದಾಗಿ ವರಿದಿಯಲ್ಲಿದೆ. ರಾಜ್ಯದಲ್ಲಿ ಲಿಂಗಾಯತರ ಮತಗಳು ಕೈತಪ್ಪಿ ಹೋದರೆ ಪಕ್ಷಕ್ಕೆ ಭಾರಿ ಹೊಡೆತ ಎಂದು ಸಭೆಯಲ್ಲಿ ದನಿ ಎತ್ತಿದ ಕಾರ್ಯಕರ್ತರ ಮಾತಿಗೆ ಸಿಡಿಮಿಡಿಗೊಂಡು ಉತ್ತರಿಸಿ ಬಿಜೆಪಿಗೆ ಲಿಂಗಾಯತರ ಅಗತ್ಯವಿಲ್ಲ ಎಂದು ಹೇಳಿದ್ದಾಗಿ ವರದಿಯಲ್ಲಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:31 pm, Sat, 6 May 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ