AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KH Muniyappa: ರಾಜ್ಯ ರಾಜಕಾರಣಕ್ಕೆ ಮೊದಲ ಬಾರಿಗೆ ಪ್ರವೇಶ: ಒಲಿಯಿತು ಸಚಿವ ಸ್ಥಾನ

ಕರ್ನಾಟಕ ರಾಜಕೀಯ ರಂಗದ ಅತ್ಯಂತ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾಗಿರುವ ಕೆ.ಹೆಚ್‌.ಮುನಿಯಪ್ಪನವರು ಸುದೀರ್ಘ ರಾಜಕೀಯ ಜೀವನದ ಅನುಭವವನ್ನು ಹೊಂದಿದ್ದಾರೆ. 1960ರಲ್ಲಿ ತಮ್ಮ ರಾಜಕೀಯ ಜೀವನಕ್ಕೆ ಮುನ್ನುಡಿ ಬರೆದ ಅವರು ಇಲ್ಲಿಯವರೆಗೂ ಸಕ್ರಿಯ ರಾಜಕಾರಣದಲ್ಲಿ ಮುಂದುವರೆದಿದ್ದಾರೆ.

KH Muniyappa: ರಾಜ್ಯ ರಾಜಕಾರಣಕ್ಕೆ ಮೊದಲ ಬಾರಿಗೆ ಪ್ರವೇಶ: ಒಲಿಯಿತು ಸಚಿವ ಸ್ಥಾನ
ಕೆ ಹೆಚ್ ಮುನಿಯಪ್ಪ
ವಿವೇಕ ಬಿರಾದಾರ
|

Updated on:May 20, 2023 | 12:55 PM

Share

ಕರ್ನಾಟಕ ರಾಜಕೀಯ ರಂಗದ ಅತ್ಯಂತ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾಗಿರುವ ಕೆ.ಹೆಚ್‌.ಮುನಿಯಪ್ಪನವರು ಸುದೀರ್ಘ ರಾಜಕೀಯ ಜೀವನದ ಅನುಭವವನ್ನು ಹೊಂದಿದ್ದಾರೆ. 1960ರಲ್ಲಿ ತಮ್ಮ ರಾಜಕೀಯ ಜೀವನಕ್ಕೆ ಮುನ್ನುಡಿ ಬರೆದ ಅವರು ಇಲ್ಲಿಯವರೆಗೂ ಸಕ್ರಿಯ ರಾಜಕಾರಣದಲ್ಲಿ ಮುಂದುವರೆದಿದ್ದಾರೆ. ಕೆ.ಹೆಚ್. ಮುನಿಯಪ್ಪನವರು ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಕಂಬದಹಳ್ಳಿ ಗ್ರಾಮದಲ್ಲಿ ಮಾರ್ಚ್‌ 07, 1948ರಲ್ಲಿ ಜನಿಸಿದ್ದು, ಇದೀಗ ಇವರಿಗೆ 75 ವರ್ಷ ವಯಸ್ಸಾಗಿದೆ. ಇವರು ಮೊದಲು ವಕೀಲರಾಗಿ ಕಾರ್ಯನಿರ್ವಹಿಸಿದ್ದು, ಸಾಮಾಜಿಕ ಕಾರ್ಯಕರ್ತರಾಗಿಯೂ ಸೇವೆ ಸಲ್ಲಿಸಿದ್ದಾರೆ. ಇವರ ತಂದೆ ಹನುಮಪ್ಪ, ತಾಯಿ ಶ್ರೀಮತಿ ವೆಂಕಟಮ್ಮ ದಿವಂಗತರಾಗಿದ್ದಾರೆ. ಪತ್ನಿ ನಾಗರತ್ನಮ್ಮನವರು. ಇವರಿಗೆ ಓರ್ವ ಮಗ ಹಾಗೂ 4 ಪುತ್ರಿಯರಿದ್ದಾರೆ. ಮಗ ಐಎಫ್​​ಎಸ್ ಅಧಿಕಾರಿ, ಮಗಳು ಕೆಜಿಎಫ್ ಶಾಸಕಿಯಾಗಿದ್ದಾರೆ.

ಕೆ.ಹೆಚ್​ ಮುನಿಯಪ್ಪ ಅವರು 1978-83 ರಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಳಘಟ್ಟದ ತಾಲೂಕು ವ್ಯವಸಾಯ ಸೇವಾ ಸಹಕಾರಿ ಬೋರ್ಡ್​ನ ಉಪಧ್ಯಾಕ್ಷರಾಗಿ ಆಯ್ಕೆಯಾಗಿದ್ದರು. ನಂತರ 1991 ರಿಂದ ಕೋಲಾರ ಲೋಕಸಭಾ ಕ್ಷೇತ್ರದ ಮೇಲೆ ಪ್ರಬಲ ಹಿಡಿತ ಸಾಧಿಸಿರುವ ಮುನಿಯಪ್ಪ ಅಂದಿನಿಂದ ಇಲ್ಲಿಯವರೆಗೆ ಸತತವಾಗಿ ಏಳು ಬಾರಿ ಸಂಸದರಾಗಿ ಆಯ್ಕೆಯಾಗುವ ಮೂಲಕ ದಾಖಲೆ ಮಾಡಿದ್ದಾರೆ.

1991ರಲ್ಲಿ ಲೋಕಸಭಾ ಚುನಾವಣೆಯಲ್ಲಿ ರಾಜೀವ್ ಗಾಂಧಿಯವರ ಸಾವಿನ ಅನುಕಂಪದ ಅಲೆಯಲ್ಲಿ ಭರ್ಜರಿ ಜಯಗಳಿಸಿದ ಕೆ.ಹೆಚ್​ ಮುನಿಯಪ್ಪನವರು ಮತ್ತೆ ಹಿಂದೆ ತಿರುಗಿ ನೋಡಲೇ ಇಲ್ಲ. ಸತತವಾಗಿ ಆಯ್ಕೆಯಾಗುತ್ತಲೆ ಬಂದಿದ್ದಾರೆ. ಕ್ಷೇತ್ರದಲ್ಲಿ ಸತತ ಏಳುಬಾರಿ ಗೆಲುವನ್ನು ಸಾಧಿಸಿ ಸೋಲಿಲ್ಲದ ಸರದಾರನಾಗಿರುವ ಕೆ.ಹೆಚ್. ಮುನಿಯಪ್ಪನವರು, 2004 ರ ಲೋಕಸಭಾ ಚುನಾವಣೆಯಲ್ಲಿ 5ನೇ ಬಾರಿಗೆ ಕೋಲಾರದಿಂದ ಗೆಲುವನ್ನು ಸಾಧಿಸಿ ಯುಪಿಎ ಸರ್ಕಾರದಲ್ಲಿ ಮೊದಲ ಬಾರಿಗೆ ಕೇಂದ್ರ ರಸ್ತೆ ಹಾಗೂ ಹೆದ್ದಾರಿ ರಾಜ್ಯ ಸಚಿವರಾಗಿ, 15ನೇ ಚುನಾವಣೆಯಲ್ಲಿ 6ನೇ ಬಾರಿ ಗೆಲುವು ದಾಖಲಿಸಿ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

ನಂತರದಲ್ಲಿ ಸಣ್ಣ, ಸೂಕ್ಷ್ಮ ಹಾಗೂ ಮಧ್ಯಮ ಕೈಗಾರಿಕೆ ಸಚಿವರಾಗಿ ಕೂಡಾ ಕೆಲಸ ಮಾಡಿದ್ದಾರೆ. 16ನೇ ಲೋಕಸಭಾ ಚುನಾವಣೆಯಲ್ಲಿ ಗೆದ್ದ ನಂತರ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿತ್ತು. ಅದಾದ ನಂತರ ಕೆಹೆಚ್​ ಮುನಿಯಪ್ಪ ಅವರು 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಸೋಲನ್ನು ಕಂಡರು.

ಇದಾದ ನಂತರ ಕೆಹಚ್​ ಮುನಿಯಪ್ಪ ಅವರ ರಾಜಕೀಯ ಇತಿಹಾಸದಲ್ಲಿ ಮೊದಲ ಬಾರಿಗೆ ರಾಜ್ಯ ರಾಜಕಾರಣ ಪ್ರವೇಶ ಮಾಡಿ ದೇವನಹಳ್ಳಿ ಕ್ಷೇತ್ರದಲ್ಲಿ ಸ್ಪರ್ಧಿಸಿ ಜಯಭೇರಿ ಭಾರಿಸಿದ್ದಾರೆ. ಸದ್ಯ ಕೆಹೆಚ್​ ಮುನಿಯಪ್ಪ ಅವರು ಕಾಂಗ್ರೇಸ್ ಪಕ್ಷದ ಹಿರಿಯ ಮುಖಂಡ ಜೊತೆಗೆ ಪರಿಶಿಷ್ಟ ಜಾತಿ ಎಡಗೈ ಸಮುದಾಯದ ಪ್ರಮುಖ ಮುಖಂಡರಾಗಿ ಸಿದ್ದರಾಮಯ್ಯ ಕ್ಯಾಬಿನೆಟ್​ನಲ್ಲಿ ಸ್ಥಾನ ಪಡೆದಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:54 pm, Sat, 20 May 23

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ