Dharwad Election Result: ಧಾರವಾಡ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಕ್ಷೇತ್ರಕ್ಕೆ ಕಾಲಿಡದೇ ಜಯಗಳಿಸಿದ ವಿನಯ್​ ಕುಲಕರ್ಣಿ

Dharwad Assembly Election Result 2023 Live Counting Updates: ಧಾರವಾಡ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಅಮೃತ್ ದೇಸಾಯಿ, ಕಾಂಗ್ರೆಸ್​ನಿಂದ​ ವಿನಯ್​ ಕುಲಕರ್ಣಿ ಹಾಗೂ ಜೆಡಿಎಸ್​ನಿಂದ ಮಂಜುನಾಥ್​ ಲಕ್ಷ್ಮಣ್​ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಮತ ಎಣಿಕೆಯ ವಿವರ ಇಲ್ಲಿದೆ.

Dharwad Election Result: ಧಾರವಾಡ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಕ್ಷೇತ್ರಕ್ಕೆ ಕಾಲಿಡದೇ ಜಯಗಳಿಸಿದ ವಿನಯ್​ ಕುಲಕರ್ಣಿ
ಪ್ರಾತಿನಿಧಿಕ ಚಿತ್ರ

Updated on: May 13, 2023 | 8:55 PM

Dharwad Assembly Election Result 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ರಾಜ್ಯ ವಿಧಾನಸಭಾ ಚುನಾವಣೆಗೆ ಧಾರವಾಡ ಜಿಲ್ಲೆಯ ಏಳು ಕ್ಷೇತ್ರಗಳಿಂದ 92 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದರು. ಧಾರವಾಡ ವಿಧಾನಸಭಾ ಕ್ಷೇತ್ರದಿಂದ (Dharwad Assembly Constituency) ಹು-ಧಾರವಾಡ ಗ್ರಾಮೀಣ ಭಾಗದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ವಿನಯ್ ಕುಲಕರ್ಣಿ ಗೆಲುವು ಸಾಧಿಸಿದ್ದಾರೆ. 18,144 ಮತಗಳ ಅಂತರದಿಂದ ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಅಮೃತ್​ ದೇಸಾಯಿ ವಿರುದ್ಧ ಜಯಗಳಿಸಿದ್ದಾರೆ. ಕ್ಷೇತ್ರಕ್ಕೆ ಅವರು ಕಾಲಿಡದೇ ಗೆದ್ದಿರುವುದು ಇನ್ನೊಂದು ವಿಶೇಷ.

ಜೆಡಿಎಸ್​ ಪಕ್ಷದ ಅಭ್ಯರ್ಥಿಯಾಗಿ ಮಂಜುನಾಥ್​ ಲಕ್ಷ್ಮಣ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

ಯೋಗೇಶಗೌಡ ಕೊಲೆ ಕೇಸ್​ನಲ್ಲಿ ಆರೋಪಿಯಾಗಿರುವ ವಿನಯ್​ ಕುಲಕರ್ಣಿಗೆ ಕ್ಷೇತ್ರ ಪ್ರವೇಶಕ್ಕೆ ನಿರ್ಬಂಧ ಹೇರಿದ್ದರು ಕಾಂಗ್ರೆಸ್​ ಟಿಕೆಟ್​ ನೀಡಿತ್ತು. ಹೀಗಾಗಿ ಧಾರವಾಡ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್​ ಮಧ್ಯೆ ಜಿದ್ದಾಜಿದ್ದಿಗೆ ಕಾರಣವಾಗಿತ್ತು.

2018 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ವಿನಯ್​ ಕುಲಕರ್ಣಿ ಅವರನ್ನು 20 ಸಾವಿರ ಮತಗಳ ಅಂತರದಿಂದ ಸೋಲಿಸುವ ಮೂಲಕ ಬಿಜೆಪಿ ಅಭ್ಯರ್ಥಿ ಅಮೃತ್​ ದೇಸಾಯಿ ಭರ್ಜರಿ ಜಯ ಗಳಿಸಿದ್ದರು. ಈ ಬಾರಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳ ನಡುವೆ ಪೈಪೋಟಿ ಏರ್ಪಟ್ಟಿತ್ತು.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 2:40 am, Sat, 13 May 23

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us