AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dharwad Election Result: ಕ್ಷೇತ್ರ ಪ್ರವೇಶಕ್ಕೆ ಅನುಮತಿ ಇಲ್ಲದಿದ್ದರೂ ಗೆಲುವಿನ ನಗೆ ಬೀರಿದ ವಿನಯ್​ ಕುಲಕರ್ಣಿ

ರಾಜ್ಯ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಧಾರವಾಡ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ ಪಕ್ಷದ ಅಭ್ಯರ್ಥಿ ವಿನಯ್​ ಕುಲಕರ್ಣಿ ಗೆಲುವಿನ ನಗೆ ಬೀರಿದ್ದಾರೆ.

Dharwad Election Result: ಕ್ಷೇತ್ರ ಪ್ರವೇಶಕ್ಕೆ ಅನುಮತಿ ಇಲ್ಲದಿದ್ದರೂ ಗೆಲುವಿನ ನಗೆ ಬೀರಿದ ವಿನಯ್​ ಕುಲಕರ್ಣಿ
ವಿನಯ್​ ಕುಲಕರ್ಣಿ
Ganapathi Sharma
|

Updated on:May 13, 2023 | 12:28 PM

Share

ಧಾರವಾಡ: ರಾಜ್ಯ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಧಾರವಾಡ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ ಪಕ್ಷದ ಅಭ್ಯರ್ಥಿ ವಿನಯ್​ ಕುಲಕರ್ಣಿ ಗೆಲುವಿನ ನಗೆ ಬೀರಿದ್ದಾರೆ. ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ಕುಲಕರ್ಣಿಗೆ ಕ್ಷೇತ್ರ ಪ್ರವೇಶಕ್ಕೆ ಹೈಕೋರ್ಟ್​ನಿಂದ ನಿರ್ಬಂಧವಿದ್ದರೂ, ಕ್ಷೇತ್ರಕ್ಕೆ ತೆರಳಿ ಪ್ರಚಾರ ಕೈಗೊಳ್ಳದಿದ್ದರೂ ಅವರು ಬಿಜೆಪಿಯ ಅಮೃತ್ ದೇಸಾಯಿ ವಿರುದ್ಧ ಗೆಲುವು ಸಾಧಿಸಿದ್ದಾರೆ.

ವಿನಯ್‌ ಕುಲಕರ್ಣಿ ಪರ ಅವರ ಕುಟುಂಬದವರು ನಿರಂತರ ಪ್ರಚಾರ ನಡೆಸಿದ್ದರು. ನಾಮಪತ್ರ ಕೂಡ ಅವರ ಪರವಾಗಿ ಅವರ ಪತ್ನಿ ಸಲ್ಲಿಸಿದ್ದರು. ನಾಮಪತ್ರ ಸಲ್ಲಿಕೆ ದಿನ ವಿಡಿಯೋ ಕಾಲ್‌ ಮೂಲಕ ಕಾರ್ಯಕರ್ತರ ಜೊತೆ ವಿನಯ್ ಕುಲಕರ್ಣಿ ಮಾತನಾಡಿದ್ದರು.

ಯೋಗೇಶಗೌಡ ಕೊಲೆ ಕೇಸ್​ನಲ್ಲಿ ಆರೋಪಿಯಾಗಿರುವ ವಿನಯ್​ ಕುಲಕರ್ಣಿಗೆ ಕ್ಷೇತ್ರ ಪ್ರವೇಶಕ್ಕೆ ನಿರ್ಬಂಧ ಇದ್ದರೂ ಕಾಂಗ್ರೆಸ್​ ಟಿಕೆಟ್​ ನೀಡಿತ್ತು. 2018 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ವಿನಯ್​ ಕುಲಕರ್ಣಿ ಅವರನ್ನು 20 ಸಾವಿರ ಮತಗಳ ಅಂತರದಿಂದ ಸೋಲಿಸುವ ಮೂಲಕ ಬಿಜೆಪಿ ಅಭ್ಯರ್ಥಿ ಅಮೃತ್​ ದೇಸಾಯಿ ಭರ್ಜರಿ ಜಯ ಗಳಿಸಿದ್ದರು. ಈ ಬಾರಿ ಫಲಿತಾಂಶ ಉಲ್ಟಾ ಆಗಿದೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 12:28 pm, Sat, 13 May 23

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ