ಜಾತಿ ಹೆಸರು ಬಳಸಿ ಚುನಾವಣೆ ಭಾಷಣ ಮಾಡಿದ್ದ ಬಿಜೆಪಿ ಅಭ್ಯರ್ಥಿಗೆ ಸಂಕಷ್ಟ

ವಿಧಾನಸಭೆ ಚುನಾವಣೆಗೆ ಆರು ದಿನಗಳು ಬಾಕಿ ಉಳಿದಿದ್ದು, ಉಭಯ ಪಕ್ಷಗಳು ಅಬ್ಬರದ ಪ್ರಚಾರ ಕೈಗೊಂಡಿವೆ. ಅದರಂತೆ ಕ್ಷೇತ್ರದಲ್ಲಿ ಪ್ರಚಾರ ಕೈಗೊಂಡಿದ್ದ ಮೊಳಕಾಲ್ಮೂರು ಬಿಜೆಪಿ ಅಭ್ಯರ್ಥಿ ಎಸ್​.ತಿಪ್ಪೇಸ್ವಾಮಿ ವಿರುದ್ಧ ಇದೀಗ ಜಾತಿ ಹೆಸರು ಬಳಸಿ ಭಾಷಣ ಮಾಡಿದ ಹಿನ್ನಲೆ ಚುನಾವಣಾಧಿಕಾರಿಯಿಂದ ದೂರು ದಾಖಲಾಗಿದೆ.

ಜಾತಿ ಹೆಸರು ಬಳಸಿ ಚುನಾವಣೆ ಭಾಷಣ ಮಾಡಿದ್ದ ಬಿಜೆಪಿ ಅಭ್ಯರ್ಥಿಗೆ ಸಂಕಷ್ಟ
ಬಿಜೆಪಿ ಅಭ್ಯರ್ಥಿ ಎಸ್​.ತಿಪ್ಪೇಸ್ವಾಮಿ
Follow us
ಕಿರಣ್ ಹನುಮಂತ್​ ಮಾದಾರ್
|

Updated on:May 04, 2023 | 9:20 AM

ಚಿತ್ರದುರ್ಗ: ವಿಧಾನಸಭೆ ಚುನಾವಣೆ(Karnataka Assembly Election 2023)ಗೆ ಆರು ದಿನಗಳು ಬಾಕಿ ಉಳಿದಿದ್ದು, ಉಭಯ ಪಕ್ಷಗಳು ಅಬ್ಬರದ ಪ್ರಚಾರ ಕೈಗೊಂಡಿವೆ. ಅದರಂತೆ ಕ್ಷೇತ್ರದಲ್ಲಿ ಪ್ರಚಾರ ಕೈಗೊಂಡಿದ್ದ ಮೊಳಕಾಲ್ಮೂರು (Molakalmuru) ಬಿಜೆಪಿ ಅಭ್ಯರ್ಥಿ ಎಸ್​.ತಿಪ್ಪೇಸ್ವಾಮಿ(S. Thippeswamy) ವಿರುದ್ಧ ಇದೀಗ ಜಾತಿ ಹೆಸರು ಬಳಸಿ ಭಾಷಣ ಮಾಡಿದ ಹಿನ್ನಲೆ ಚುನಾವಣಾಧಿಕಾರಿಯಿಂದ ದೂರು ದಾಖಲಾಗಿದೆ. ಹೌದು ಏಪ್ರಿಲ್ 26ರಂದು ತೆಂಗಿನ ಗೌರಸಮುದ್ರದಲ್ಲಿ ಭಾಷಣ ಮಾಡಿದ್ದ ಎಸ್​.ತಿಪ್ಪೇಸ್ವಾಮಿ, ಜಾತಿಯ ಹೆಸರು ಬಳಸಿ ಭಾಷಣ ಮಾಡಿದ್ದ ಆರೋಪದ ಮೇಲೆ, ಚುನಾವಣಾಧಿಕಾರಿ ನೀತಿಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ದೂರು ದಾಖಲು ಮಾಡಿದ್ದಾರೆ.

ಮಾಹಿತಿ ಕಲೆಹಾಕಿ ದೂರು ದಾಖಲಿಸಿರುವ ಚುನಾವಣಾಧಿಕಾರಿ

ಹೌದು ಏಪ್ರಿಲ್ 26ರಂದು ತೆಂಗಿನ ಗೌರಸಮುದ್ರದಲ್ಲಿ ಭಾಷಣ ಮಾಡಿದ್ದ ತಿಪ್ಪೇಸ್ವಾಮಿ ‘ನಾನು ಮ್ಯಾಸನಾಯಕ, ಕಾಂಗ್ರೆಸ್​​ ಅಭ್ಯರ್ಥಿ ಊರ ನಾಯಕ, ನಮಗೂ ಅವರಿಗೂ ಸಂಬಂಧ ಇಲ್ಲ ಎಂದು ತಿಪ್ಪೇಸ್ವಾಮಿ ಭಾಷಣ ಮಾಡಿದ್ದರು. ಇದರ ಮಾಹಿತಿ ಕಲೆ ಹಾಕಿದ್ದ ಚುನಾವಣಾಧಿಕಾರಿ ಫ್ಲೈಯಿಂಗ್ ಸ್ಕ್ವಾಡ್ ತಿಪ್ಪೇಸ್ವಾಮಿ, ಇದೀಗ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ:ಈ ಕ್ಷೇತ್ರದಲ್ಲಿ ಶುರುವಾಗಿದೆ ದೇಣಿಗೆ ರಾಜಕೀಯ; ಜೆಡಿಎಸ್​ ಅಭ್ಯರ್ಥಿಗೆ ಹೋದಲೆಲ್ಲ ಹರಿದು ಬರ್ತಿದೆ ಹಣ

ಅವಹೇಳನಕಾರಿ ಹೇಳಿಕೆ; ಬಸನಗೌಡ ಪಾಟೀಲ್‌ ಯತ್ನಾಳ್, ಪ್ರಿಯಾಂಕ್ ಖರ್ಗೆಗೆ ಚುನಾವಣಾ ಆಯೋಗ ನೋಟಿಸ್

ಬೆಂಗಳೂರು: ಚುನಾವಣಾ ಪ್ರಚಾರ ಸಭೆಗಳಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ ವಿಚಾರವಾಗಿ ವಿಜಯಪುರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಹಾಗೂ ಚಿತ್ತಾಪುರ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್ ನೀಡಿತ್ತು. ಇದೀಗ ಇಬ್ಬರೂ ನಾಯಕರು ಆಯೋಗಕ್ಕೆ ಕಾರಣ ನೀಡಬೇಕಿದೆ. ಯತ್ನಾಳ್ ಅವರು ಸೋನಿಯಾ ಗಾಂಧಿ ವಿರುದ್ಧ ಅವಹೇಳನಕಾರಿ ಪದ ಬಳಸಿ ಟೀಕಿಸಿದ್ದರೆ ಪ್ರಿಯಾಂಕ್ ಖರ್ಗೆ ಪ್ರಧಾನಿ ಮೋದಿ ವಿರುದ್ಧ ನಿಂದನಾತ್ಮಕ ಪದ ಬಳಸಿ ಟೀಕಿಸಿದ್ದರು.

ಇಂದು(ಮೇ.4) ಸಂಜೆ 5 ಗಂಟೆಯೊಳಗೆ ಉತ್ತರ ನೀಡುವಂತೆ ಇಬ್ಬರಿಗೂ ಆಯೋಗ ಸೂಚಿಸಿದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ನೋಟಿಸ್ ನೀಡಲಾಗಿದೆ. ನೀತಿ ಸಂಹಿತೆ ಪ್ರಕಾರ, ರಾಜಕೀಯ ವಿರೋಧಿಗಳ ವೈಯಕ್ತಿಕ ತೇಜೋವಧೆ ಮಾಡುವಂತಿಲ್ಲ. ಹೀಗಾಗಿ ನಿಮ್ಮ ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು ಎಂದು ಇಬ್ಬರೂ ನಾಯಕರನ್ನು ಆಯೋಗ ಪ್ರಶ್ನಿಸಿದೆ. ಪ್ರಚಾರದ ವೇಳೆ ನಾಯಕರು ಭಾಷೆಯ ಘನತೆಯನ್ನು ಮರೆಯುತ್ತಿರುವುದು ಹಲವು ಬಾರಿ ಕಂಡು ಬಂದಿದೆ ಎಂದು ಮಂಗಳವಾರ ಹೇಳಿದ್ದ ಚುನಾವಣಾ ಆಯೋಗ, ನಾಯಕರ ಅವಹೇಳನಕಾರಿ ಹೇಳಿಕೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಸ್ಟಾರ್ ಪ್ರಚಾರಕರು ಮತ್ತು ಪಕ್ಷಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿತ್ತು.

ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:20 am, Thu, 4 May 23

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ