ರಾಹುಲ್ ಗಾಂಧಿ ಜಗದೀಶ್ ಶೆಟ್ಟರ್ ನಡುವೆ ಲಿಂಗಾಯತರ ಬಗ್ಗೆ ಬಿಸಿಬಿಸಿ ಚರ್ಚೆ, ಇನ್​ಸೈಡ್ ಸ್ಟೋರಿ ಇಲ್ಲಿದೆ

ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಅವರನ್ನು ಭೇಟಿಯಾದ ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ, ಪ್ರಮುಖವಾಗಿ ಲಿಂಗಾಯತರ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ಬಗ್ಗೆ ಇನ್​ಸೈಡ್ ಸ್ಟೋರಿ ಇಲ್ಲಿದೆ.

ರಾಹುಲ್ ಗಾಂಧಿ ಜಗದೀಶ್ ಶೆಟ್ಟರ್ ನಡುವೆ ಲಿಂಗಾಯತರ ಬಗ್ಗೆ ಬಿಸಿಬಿಸಿ ಚರ್ಚೆ, ಇನ್​ಸೈಡ್ ಸ್ಟೋರಿ ಇಲ್ಲಿದೆ
ಜಗದೀಶ್ ಶೆಟ್ಟರ್ ಭೇಟಿಯಾದ ರಾಹುಲ್ ಗಾಂಧಿ
Follow us
|

Updated on:Apr 23, 2023 | 5:04 PM

ಹುಬ್ಬಳ್ಳಿ: ಬಿಜೆಪಿಯಲ್ಲಿನ ಸುದೀರ್ಘ ಪಯಣಕ್ಕೆ ಇತ್ತೀಚೆಗೆ ಬ್ರೇಕ್ ಹಾಕಿ ಕಾಂಗ್ರೆಸ್ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadish Shettar) ಅವರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಪ್ರಮುಖವಾಗಿ ಲಿಂಗಾಯತರ (Lingayats) ಬಗ್ಗೆ ಚರ್ಚೆ ನಡೆಸಿದ್ದಾರೆ. ಬಿಜೆಪಿಯ (BJP) ಹಿಂದುತ್ವ ಸಿದ್ಧಾಂತ ಮತ್ತು ಬಸವತತ್ವಗಳನ್ನೇ ಮುಂದಿಟ್ಟುಕೊಂಡು ರಾಹುಲ್ ಗಾಂಧಿಯವರು ಶೆಟ್ಟರ್ ಬಳಿಯಿಂದ ಮಹತ್ವದ ಮಾಹಿತಿ ಕಲೆ ಹಾಕಿಕೊಂಡಿದ್ದಾರೆ. ಅಷ್ಟು ಮಾತ್ರವಲ್ಲದೆ, ಶೆಟ್ಟರ್ ಕುಟುಂಬದ ರಾಜಕೀಯ ಇತಿಹಾಸ ತಿಳಿದುಕೊಂಡ ರಾಹುಲ್, ತಾವೇ ಇಡೀ ಉತ್ತರ ಕರ್ನಾಟಕ ಪ್ರವಾಸ ಮಾಡಬೇಕು ಎಂದು ಶೆಟ್ಟರ್​​ಗೆ ಸೂಚಿಸಿದ್ದಾರೆ. ಹಾಗಿದ್ದರೆ ರಾಹುಲ್ ಗಾಂಧಿ ಶೆಟ್ಟರ್​ಗೆ ಏನೆಲ್ಲಾ ಕೇಳಿದ್ದಾರೆ? ಶೆಟ್ಟರ್​ಗೆ ಅವರು ಕೊಟ್ಟ ಸಲಹೆಗಳು ಏನೇನು ಎಂಬ ಇನ್​ಸೈಡ್ ಸ್ಟೋರಿ ಇಲ್ಲಿದೆ ನೋಡಿ.

ಶೆಟ್ಟರ್ ಜೊತೆಗಿನ ಮಾತುಕತೆ ವೇಳೆ, ರಾಮಕೃಷ್ಣ ಹೆಗಡೆ ಕಾಲದಿಂದಲೂ ಲಿಂಗಾಯತರ ನಿಲುವಿನ ಬಗ್ಗೆ ಚೆರ್ಚಿಸಿದರು. ಬಸವ ತತ್ವ ಮತ್ತು ಬಿಜೆಪಿ ತತ್ವ ಬೇರೆ ಬೇರೆ. ಬಸವಣ್ಣನವರ ತತ್ವಗಳಿಗೆ ವಿರುದ್ಧವಾಗಿರುವ ಬಿಜೆಪಿಯನ್ನ ಲಿಂಗಾಯತರು ಯಾಕೆ ಬೆಂಬಲಿಸಿದರು? ಬಿಎಸ್ ಯಡಿಯೂರಪ್ಪ ಅವರ ಕಾರಣಕ್ಕೆ ಲಿಂಗಾಯತರು ಬಿಜೆಪಿ ಪರ‌ ನಿಂತಿದ್ದಾರಾ? ಅಥವಾ ಬೇರೆ ಏನಾದರೂ ಕಾರಣಗಳಿವೆಯಾ? ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳಿದ್ದಾರೆ.

ಕಾಂಗ್ರೆಸ್ ಬಸವ ತತ್ವಗಳ ಪರವಾಗಿದೆ ಎಂದು ಹೇಳಿದ ರಾಹುಲ್ ಗಾಂಧಿ, ಈ ಚುನಾವಣೆಯಲ್ಲಿ ಲಿಂಗಾಯತರ ದೊಡ್ಡ ಬೆಂಬಲ ಕಾಂಗ್ರೆಸ್ ಪಕ್ಷಕ್ಕೆ ಸಿಕ್ಕಿದೆ. ಪ್ರಸಕ್ತ ಚುನಾವಣೆಯಲ್ಲಿ ಕಾಂಗ್ರೆಸ್‌ 50ಕ್ಕೂ ಹೆಚ್ಚು ಲಿಂಗಾಯತ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ‌. ಬಸವ ತತ್ವ, ಬಸವಣ್ಣನವರ ವಿಚಾರಧಾರೆಗಳ‌ ಬಗ್ಗೆ ಕಾಂಗ್ರೆಸ್ ಬಹಳ ನಂಬಿಕೆ ಇರುವಂತ ಪಕ್ಷ ಎಂದು ಹೇಳಿದರು.

ಇದನ್ನೂ ಓದಿ: ರಾಹುಲ್ ಗಾಂಧಿ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಹೆಸರು ಪ್ರಸ್ತಾಪಿಸಿದ ಚಿತ್ತರಗಿ ಶ್ರೀ, ಪೇಚಿಗೆ ಸಿಲುಕಿದ ಸಂಘಟಕರು

ಇದೇ ವೇಳೆ ಶೆಟ್ಟರ್ ಕುಟುಂಬದ ರಾಜಕೀಯ ಇತಿಹಾಸ ತಿಳಿದುಕೊಂಡ ರಾಹುಲ್ ಗಾಂಧಿ, ಜಗದೀಶ್ ಶೆಟ್ಟರ್ ಪಕ್ಷಕ್ಕೆ ಸೇರಿದ್ದು ಉತ್ತರ ಕರ್ನಾಟಕ ಭಾಗದಲ್ಲಿ ಅನುಕೂಲ ಆಗಿದೆ. ತಾವೇ ಇಡೀ ಉತ್ತರ ಕರ್ನಾಟಕ ಪ್ರವಾಸ ಮಾಡಬೇಕು ಬಿಜೆಪಿ ಲಿಂಗಾಯತ ಸಮುದಾಯಕ್ಕೆ ಮಾಡುತ್ತಿರುವ ಅನ್ಯಾಯದ ಬಗ್ಗೆ ಗಟ್ಟಿಯಾಗಿ ಮಾತನಾಡಿ ಎಂದು ಸೂಚಿಸಿದರು. ರಾಹುಲ್ ಜೊತೆಗಿನ ಮಾತುಕತೆಯಲ್ಲಿ ಶಾಸಕ ಪ್ರಸಾದ್ ಅಬ್ಬಯ್ಯ ಕೂಡ ಭಾಗಿಯಾಗಿದ್ದಾರೆ.

ದಿನಗಳ ಹಿಂದೆಯಷ್ಟೇ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದ ರಾಜ್ಯ ಕಾಂಗ್ರೆಸ್​ ಚುನಾವಣಾ ಉಸ್ತುವಾರಿ ರಣದೀಪ್​ ಸಿಂಗ್​ ಸುರ್ಜೆವಾಲಾ, ಲಿಂಗಾಯತ ಮತಗಳನ್ನು ಸೆಳೆಯುವಂತೆ ಸೂಚಿಸಿದ್ದಾರೆ. ಲಿಂಗಾಯತ ನಾಯಕರಿಗೆ ಬಿಜೆಪಿ ಮೋಸ ಮಾಡಿದೆ ಅನ್ನೋದನ್ನ ಬಿಂಬಿಸಿ. ಕೇವಲ ನಿಮ್ಮ ಕ್ಷೇತ್ರವಲ್ಲ ಸುತ್ತ ಮುತ್ತಲಿನ ಕ್ಷೇತ್ರದಲ್ಲೂ ನೀವು ತಂತ್ರ ಹೆಣೆಯಬೇಕು. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೆಸ್​ ಗೆಲ್ಲಲೇಬೇಕು. ಕಳೆದ ಮೂವತ್ತು ವರ್ಷಗಳಿಂದ ಬಿಜೆಪಿ ಭದ್ರಕೋಟೆಯಾಗಿರೋ ಸೆಂಟ್ರಲ್ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್​ ಬಾವುಟ ಹಾರಿಸಬೇಕೆಂದು ಜಗದೀಶ್​ ಶೆಟ್ಟರ್ ಅವರಿಗೆ ಸೂಚನೆ ನೀಡಿದ್ದರು.

ಇತ್ತ, ಶೆಟ್ಟರ್ ಮುಂದಿಟ್ಟುಕೊಂಡು ಬಿಜೆಪಿ ಸೋಲಿಸುವ ಕಾಂಗ್ರೆಸ್ ತಂತ್ರಕ್ಕೆ ಪ್ರತಿತಂತ್ರವಾಗಿ ಹುಬ್ಬಳ್ಳಿ-ಧಾರವಾಡ ಕೇಂದ್ರ ಕ್ಷೇತ್ರದಲ್ಲಿ ಶೆಟ್ಟರ್​ ಸೋಲಿಸಲು ಪ್ರತಿತಂತ್ರ ಹಾಕಿಕೊಂಡಿದೆ. ನಾಗ್ಪುರದಿಂದ ಸುಮಾರು 50 ಆರೆಸ್ಸೆಸ್ ಕಾರ್ಯಕರ್ತರನ್ನು ಹುಬ್ಬಳ್ಳಿಗೆ ಕರೆಸಿಕೊಳ್ಳಲಾಗಿದ್ದು, ಅವರಿಗೆ ವಿವಿಧ ಸಂಘಟನಾ ಜವಾಬ್ದಾರಿಗಳನ್ನು ವಹಿಸಲಾಗಿದೆ ಎಂದು ಹೇಳಲಾಗಿದೆ. ಈ ತಂಡವು ಶೆಟ್ಟರ್ ಮೇಲೆ ನಿಗಾ ಇರಿಸಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:41 pm, Sun, 23 April 23

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್