ಚಿಕ್ಕಮಗಳೂರು ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ: ಸಿ.ಟಿ ರವಿ ವಿರುದ್ಧ ಬದಲಾವಣೆ ಸಂಕಲ್ಪಯಾತ್ರೆ ಆರಂಭಿಸಿದ ಕಾರ್ಯಕರ್ತರು

|

Updated on: Feb 17, 2023 | 7:30 PM

ಚುನಾವಣೆ ಸಮೀಪಿಸುತ್ತಿದ್ದಂತೆಯೇ ಇತ್ತ ಚಿಕ್ಕಮಗಳೂರು ಜಿಲ್ಲಾ ಬಿಜೆಪಿಯಲ್ಲಿ ಅಸಮಧಾನ ಸ್ಫೋಟಗೊಂಡಿದ್ದು, ಕಾರ್ಯಕರ್ತರು ಹಾಗೂ ಲಿಂಗಾಯತ ಮುಖಂಡರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿಗೆ ಶಾಕ್ ಕೊಟ್ಟಿದ್ದಾರೆ.

ಚಿಕ್ಕಮಗಳೂರು ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ: ಸಿ.ಟಿ ರವಿ ವಿರುದ್ಧ ಬದಲಾವಣೆ ಸಂಕಲ್ಪಯಾತ್ರೆ ಆರಂಭಿಸಿದ ಕಾರ್ಯಕರ್ತರು
ಸಿ.ಟಿ ರವಿ
Follow us on

ಚಿಕ್ಕಮಗಳೂರು:  ವಿಧಾನಸಭೆ ಚುನಾವಣೆ (Karnataka Assembly Elections 2023) ಹೊತ್ತಲ್ಲೇ ಚಿಕ್ಕಮಗಳೂರು ಬಿಜೆಪಿಯಲ್ಲಿ(BJP) ಭಿನ್ನಮತ ಸ್ಫೋಟವಾಗಿದೆ. ನಿನ್ನೆ (ಫೆ.16) ಶಾಸಕ ಸಿ.ಟಿ.ರವಿ(CT Ravi) ಆಪ್ತ ತಮ್ಮಯ್ಯ (HD Tammaiah)ಬಿಜೆಪಿಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ಮತ್ತಷ್ಟು ಮುಖಂಡರು, ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ. ಗುಜರಾತ್‌ ಮಾದರಿಯಲ್ಲಿ ಲಿಂಗಾಯತರಿಗೆ ಟಿಕೆಟ್‌ ನೀಡದ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿದ್ದು, ಹೆಚ್.ಡಿ.ತಮ್ಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್​ ಸೇರಲು  ನಿರ್ಧರಿಸಿದ್ದಾರೆ.

ಇದನ್ನೂ ಓದಿ: Setback for CT Ravi: ಚಿಕ್ಕಮಗಳೂರು ಬಿಜೆಪಿ ಶಾಸಕರ ಆಪ್ತರಾಗಿದ್ದ ಹೆಚ್ ಡಿ ತಮ್ಮಯ್ಯ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ

ಇಂದು(ಫೆಬ್ರವರಿ 17) ಚಿಕ್ಕಮಗಳೂರಿನ ಸನ್‌ರೈಸ್ ಹೋಟೆಲ್ ನಲ್ಲಿ 500ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರು ಹಾಗೂ ಲಿಂಗಾಯತ ಮುಖಂಡ ಸಭೆ ನಡೆಸಿದರು. ಈ ಸಭೆಯಲ್ಲಿ ಸಿ.ಟಿ ರವಿ ವಿರುದ್ಧ ಬದಲಾವಣೆ ಸಂಕಲ್ಪಯಾತ್ರೆಗೆ ನಿರ್ಧರಿಸಿದ್ದು, ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಹೆಚ್.ಡಿ ತಮ್ಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲು ಸಭೆಯಲ್ಲಿ ತೀರ್ಮಾನಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರ ಅತ್ಯಂತ ಆಪ್ತರೆಂದು ಗುರುತಿಸಿಕೊಂಡಿದ್ದ ಮತ್ತು ಚಿಕ್ಕಮಗಳೂರು ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರಾಗಿ ಕೆಲಸ ಮಾಡುತ್ತಿದ್ದ ಹೆಚ್ ಡಿ ತಮ್ಮಯ್ಯ  ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ (primary membership) ರಾಜೀನಾಮೆ ನೀಡಿದ್ದರು.

ನಮಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ ಅವರು ಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಚಿಕ್ಕಮಗಳೂರು ಕ್ಷೇತ್ರದಿಂದ ಟಕೆಟ್ ಗಾಗಿ ಆಗ್ರಹಿಸಿದ್ದರಂತೆ. ಅದು ಸಿಗುವ ಲಕ್ಷಣ ಕಾಣದಿದ್ದರಿಂದ ಪಕ್ಷದಿಂದ ಹೊರನಡೆದಿದ್ದಾರೆ ಎನ್ನಲಾಗಿದೆ. ಇದೀಗ ತಮ್ಮಯ್ಯ ಹಾದಿಯನ್ನೇ ತುಳಿಯಲು 500ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರು ಹಾಗೂ ಲಿಂಗಾಯತ ಮುಖಂಡರು ನಿರ್ಧರಿಸಿದ್ದಾರೆ. ಇದರಿಂದ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಇತ್ತ ಬಿಜೆಪಿಯಲ್ಲಿ ಅಸಮಧಾನ ಸ್ಫೋಟಗೊಂಡಿದ್ದು, ಸಿಟಿ ರವಿಗೆ ಆಘಾತ ಎದುರಾಗಿದೆ.

Published On - 7:30 pm, Fri, 17 February 23