ಬಿಜೆಪಿ, ಜೆಡಿಎಸ್​ನ 25 ನಾಯಕರು ಕಾಂಗ್ರೆಸ್​ಗೆ ಬರುತ್ತಾರೆ: ಡಿಕೆ ಶಿವಕುಮಾರ್

ಲಕ್ಷ್ಮಣ ಸವದಿ, ಪುಟ್ಟಣ್ಣ ಸೇರಿ ಹಲವರು ಕಾಂಗ್ರೆಸ್​ಗೆ ಬಂದಿದ್ದಾರೆ. ಬಿಜೆಪಿ, JDS​ನಿಂದ ಇನ್ನೂ 25 ನಾಯಕರು ಕಾಂಗ್ರೆಸ್​ಗೆ ಬರಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಹೇಳಿದರು.

ಬಿಜೆಪಿ, ಜೆಡಿಎಸ್​ನ 25 ನಾಯಕರು ಕಾಂಗ್ರೆಸ್​ಗೆ ಬರುತ್ತಾರೆ: ಡಿಕೆ ಶಿವಕುಮಾರ್
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
Follow us
ಗಂಗಾಧರ​ ಬ. ಸಾಬೋಜಿ
|

Updated on:Apr 14, 2023 | 5:18 PM

ನೆಲಮಂಗಲ: ಲಕ್ಷ್ಮಣ ಸವದಿ, ಪುಟ್ಟಣ್ಣ ಸೇರಿ ಹಲವರು ಕಾಂಗ್ರೆಸ್​ಗೆ ಬಂದಿದ್ದಾರೆ. ಬಿಜೆಪಿ, JDS​ನಿಂದ ಇನ್ನೂ 25 ನಾಯಕರು ಕಾಂಗ್ರೆಸ್​ಗೆ ಬರಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar)​ ಹೇಳಿದರು. ಬೆಂಗಳೂರು ಗ್ರಾಮಾಂತರ ನೆಲಮಂಗಲದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ 60, ಜೆಡಿಎಸ್​ 24ಕ್ಕಿಂತ ಹೆಚ್ಚು ಸೀಟ್ ಪಡೆಯಲು ಆಗಲ್ಲ. ಕಾಂಗ್ರೆಸ್​ 141ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂದು ಹೇಳಿದರು. ಇವರು ಯಾರು ಕೇವಲ ಗ್ರಾಮ ಪಂಚಾಯಿತಿ ಸದಸ್ಯರಲ್ಲ. ರಾಜಕೀಯದ ಎಲ್ಲಾ ಆಯಾಮಗಳನ್ನ ತಿಳಿದವರು. ಜನರ ಶಕ್ತಿ ಮುಂದೆ ಬೇರೆ ಯಾವ ಶಕ್ತಿ ಇಲ್ಲ. ಬಹಳಷ್ಟು ನಾಯಕರು ಇಲ್ಲಿ ಇದ್ದರು. ಒಂದಷ್ಟು ಸರ್ವೆ ಬಳಿಕ ಶ್ರೀನಿವಾಸ್ ಅವರನ್ನ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದೇವೆ ಎಂದು ಹೇಳಿದರು.

ಸಂವಿಧಾನ, ರಾಷ್ಟ್ರ ಧ್ವಜ ಕಾಂಗ್ರೆಸ್ ಕೊಟ್ಟ ಕೊಡುಗೆ

ನೀವು ಯಾರು ನಿಮ್ಮ ಮತದ ಮಾರಾಟ ಮಾಡಿಕೊಳ್ಳಬೇಡಿ. ಬೆಲೆ ಏರಿಕೆ ಗಗನದಲ್ಲಿ ಆದಾಯ ಪಾತಾಳದಲ್ಲಿದೆ. ನಾವೆಲ್ಲ ಸೇರಿ ನಿಮಗೆ ನಾಲ್ಕು ಗ್ಯಾರಂಟಿ ಘೋಷಣೆ ಮಾಡಿದ್ದೇವೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಜೂನ್ ತಿಂಗಳಿನಿಂದ ಈ ಎಲ್ಲಾ ಯೋಜನೆಗಳು ಜಾರಿಯಾಗಲಿವೆ. ಸಂವಿಧಾನದ ಮುಖಾಂತರ ನಮಗೆಲ್ಲ ರಕ್ಷಣೆ ಸಿಗುತ್ತಿದೆ. ಸಂವಿಧಾನ, ರಾಷ್ಟ್ರ ಧ್ವಜ ಕಾಂಗ್ರೆಸ್ ಕೊಟ್ಟ ಕೊಡುಗೆ ಎಂದರು.

ಇದನ್ನೂ ಓದಿ: Hassan: ಜೆಡಿಎಸ್ ಟಿಕೆಟ್ ಫೈಟ್; ಅಭ್ಯರ್ಥಿ ಘೋಷಣೆಗೂ ಮುನ್ನವೇ ಸ್ವರೂಪ್​ಗೆ ಬಿ ಫಾರಂ ನೀಡಿದ ಕುಮಾರಸ್ವಾಮಿ

ಸಂವಿಧಾನ ವಿರೋಧಿ ಬಿಜೆಪಿಗೆ ಮತ ನೀಡಬೇಡಿ: ಸಿದ್ದರಾಮಯ್ಯ 

ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ಸಂವಿಧಾನ ವಿರೋಧಿ ಬಿಜೆಪಿಗೆ ಮತ ನೀಡಬೇಡಿ. ನಮ್ಮ ಅಭ್ಯರ್ಥಿ ಈಗಾಗಲೇ ಘೋಷಣೆ ಮಾಡಿದ್ದೇವೆ. ನಮ್ಮ ಅಂಜನಾಮೂರ್ತಿ ಸಾವನ್ನಪ್ಪಿರುವುದು ನನಗೆ ಆಶ್ಚರ್ಯ ಆಯ್ತು. ಅವರು ಸಾವು ನನ್ನ ಕನಸಿನಲ್ಲೂ ಊಹಿಸಿರಲಿಲ್ಲ. ಅವರು ಇದ್ದಿದ್ದರೆ ಅವರೇ ಅಭ್ಯರ್ಥಿ ಆಗಿರುತ್ತಿದ್ದರು. ಈ ಕ್ಷೇತ್ರ ಕಾಂಗ್ರೆಸ್‌ನ ಭದ್ರಕೋಟೆ. ಈ ಭಾರಿ ಶ್ರೀನಿವಾಸ್‌ಅವರನ್ನ ಗೆಲ್ಲಿಸುತ್ತೇವೆ.

ಇದನ್ನೂ ಓದಿ: Pralhad Joshi: ಜಗದೀಶ್ ಶೆಟ್ಟರ್​ಗೆ ಟಿಕೆಟ್ ಸಿಗುತ್ತೆ ಅನ್ನೋ ವಿಶ್ವಾಸವಿದೆ -ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಈ ಬಾರಿ ಕಾಂಗ್ರೆಸ್ 100ಕ್ಕೆ ನೂರು ಅಧಿಕಾರಕ್ಕೆ ಬರುತ್ತದೆ. ಜನರ ಬಿಜೆಪಿಯರನ್ನ ನೋಡಿ ಬೇಸತ್ತಿದ್ದಾರೆ. ಕೊಟ್ಟ ಮಾತಿನಂತೆ ನಡೆಸುಕೊಳ್ಳುತ್ತೇವೆ. ನಡೆದುಕೊಂಡಿಲ್ಲ ಅಂದರೆ ಒಂದು ಕ್ಷಣಾನು ಅಧಿಕಾರದಲ್ಲಿ ಇರುವುದಿಲ್ಲ ಎಂದು ಹೇಳಿದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:18 pm, Fri, 14 April 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್