Karnataka Polls 2023: ಬಂಡಾಯ ಕಾಂಗ್ರೆಸ್ ನಾಯಕರಿಗೆ ಡಿಕೆ ಶಿವಕುಮಾರ್ ಖಡಕ್ ಸೂಚನೆ, ಪತ್ರದಲ್ಲೇನಿದೆ?

ನೀವು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ನೀವು ಚುನಾವಣೆಯಿಂದ ಹಿಂದೆ ಸರಿದು, ಅಧಿಕೃತ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಲು ವಿನಂತಿಸಲಾಗಿದೆ. ಒಂದು ವೇಳೆ ಹಿಂದೆ ಸರಿಯದಿದ್ದರೆ. ನಿಮ್ಮ ವಿರುದ್ಧ ಬಲವಂತವಾಗಿ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಬಂಡಾಯ ಶಾಸಕರಿಗೆ ಡಿಕೆ ಶಿವಕುಮಾರ್ ಖಡಕ್ ಸೂಚನೆ ನೀಡಿದ್ದಾರೆ.

Karnataka Polls 2023: ಬಂಡಾಯ ಕಾಂಗ್ರೆಸ್ ನಾಯಕರಿಗೆ ಡಿಕೆ ಶಿವಕುಮಾರ್ ಖಡಕ್ ಸೂಚನೆ, ಪತ್ರದಲ್ಲೇನಿದೆ?
ಡಿಕೆ ಶಿವಕುಮಾರ್​
Follow us
ಕಿರಣ್ ಹನುಮಂತ್​ ಮಾದಾರ್
|

Updated on:Apr 27, 2023 | 1:48 PM

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ(Karnataka Assembly Election)ಗೆ ಕೇವಲ 13 ದಿನಗಳು ಬಾಕಿ ಇರುವಾಗಲೇ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್(D. K. Shivakumar) ಅವರು ಬಂಡಾಯ ನಾಯಕರು ಚುನಾವಣೆಯಿಂದ ಹಿಂದೆ ಸರಿದು, ಅಧಿಕೃತ ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಒತ್ತಾಯಿಸಿ ಬಹಿರಂಗ ಪತ್ರ ಬರೆದಿದ್ದಾರೆ. ಇಲ್ಲದಿದ್ದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಪಕ್ಷೇತರರಾಗಿ ಸ್ಪರ್ಧಿಸಿರುವ ಪಕ್ಷದ ಮುಖಂಡರಿಗೆ ಕೆಪಿಸಿಸಿ ಮುಖ್ಯಸ್ಥ ಖಡಕ್​ ಎಚ್ಚರಿಕೆ ಕೊಟ್ಟಿದ್ದಾರೆ.

ಟಿಕೆಟ್ ವಂಚಿತ ಕಾಂಗ್ರೆಸ್ ನಾಯಕರು 20ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷೇತರರಾಗಿ ಸ್ಪರ್ಧಿಸಲಿದ್ದು, ಇದರಿಂದ ಮತಗಳು ವಿಭಜನೆಯಾಗುವುದರೊಂದಿಗೆ ಎದುರಾಳಿಗೆ ಸಹಾಯವಾಗುತ್ತದೆ. ಇದೇ ಕಾರಣ ಕಾಂಗ್ರೆಸ್‌ ಚಿಂತೆಗೆ ಕಾರಣವಾಗಿತ್ತು. ಇದೀಗ ಬಂಡಾಯವನ್ನು ಕೊನೆಗೊಳಿಸುವ ಕೊನೆಯ ಪ್ರಯತ್ನದಲ್ಲಿ, ಡಿಕೆ ಶಿವಕುಮಾರ್ ಬಂಡಾಯ ಸ್ವತಂತ್ರ ಅಭ್ಯರ್ಥಿಗಳನ್ನು ಕೈಬಿಟ್ಟು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಕೇಳಿಕೊಂಡಿದ್ದಾರೆ.

ಇದನ್ನೂ ಓದಿ:Karnataka Assembly Polls: ಅಥಣಿಯಲ್ಲಿ ಲಕ್ಷ್ಮಣ ಸವದಿಯನ್ನು ರಾಜಕೀಯವಾಗಿ ಮುಗಿಸಲು ರಮೇಶ್ ಜಾರಕಿಹೊಳಿ ಪಣ

ನಿಮಗೆಲ್ಲರಿಗೂ ತಿಳಿದಿರುವಂತೆ, ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಇದೆ ಮತ್ತು ಭ್ರಷ್ಟ ಬಿಜೆಪಿ ಸರ್ಕಾರದಿಂದ ಜನರು ಬೇಸತ್ತಿದ್ದಾರೆ. ಕಾಂಗ್ರೆಸ್ ಮೇಲೆ ನಂಬಿಕೆ ಇಟ್ಟಿದ್ದಾರೆ. ಪಕ್ಷವನ್ನು ಅಧಿಕಾರಕ್ಕೆ ತರಲು ಕಾಂಗ್ರೆಸ್ ಕಾರ್ಯಕರ್ತರು ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ಶಿವಕುಮಾರ್ ಪತ್ರದಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:41 pm, Thu, 27 April 23

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ