ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ(Karnataka Assembly Election)ಗೆ ಕೇವಲ 13 ದಿನಗಳು ಬಾಕಿ ಇರುವಾಗಲೇ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್(D. K. Shivakumar) ಅವರು ಬಂಡಾಯ ನಾಯಕರು ಚುನಾವಣೆಯಿಂದ ಹಿಂದೆ ಸರಿದು, ಅಧಿಕೃತ ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಒತ್ತಾಯಿಸಿ ಬಹಿರಂಗ ಪತ್ರ ಬರೆದಿದ್ದಾರೆ. ಇಲ್ಲದಿದ್ದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಪಕ್ಷೇತರರಾಗಿ ಸ್ಪರ್ಧಿಸಿರುವ ಪಕ್ಷದ ಮುಖಂಡರಿಗೆ ಕೆಪಿಸಿಸಿ ಮುಖ್ಯಸ್ಥ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.
ಟಿಕೆಟ್ ವಂಚಿತ ಕಾಂಗ್ರೆಸ್ ನಾಯಕರು 20ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷೇತರರಾಗಿ ಸ್ಪರ್ಧಿಸಲಿದ್ದು, ಇದರಿಂದ ಮತಗಳು ವಿಭಜನೆಯಾಗುವುದರೊಂದಿಗೆ ಎದುರಾಳಿಗೆ ಸಹಾಯವಾಗುತ್ತದೆ. ಇದೇ ಕಾರಣ ಕಾಂಗ್ರೆಸ್ ಚಿಂತೆಗೆ ಕಾರಣವಾಗಿತ್ತು. ಇದೀಗ ಬಂಡಾಯವನ್ನು ಕೊನೆಗೊಳಿಸುವ ಕೊನೆಯ ಪ್ರಯತ್ನದಲ್ಲಿ, ಡಿಕೆ ಶಿವಕುಮಾರ್ ಬಂಡಾಯ ಸ್ವತಂತ್ರ ಅಭ್ಯರ್ಥಿಗಳನ್ನು ಕೈಬಿಟ್ಟು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಕೇಳಿಕೊಂಡಿದ್ದಾರೆ.
ಇದನ್ನೂ ಓದಿ:Karnataka Assembly Polls: ಅಥಣಿಯಲ್ಲಿ ಲಕ್ಷ್ಮಣ ಸವದಿಯನ್ನು ರಾಜಕೀಯವಾಗಿ ಮುಗಿಸಲು ರಮೇಶ್ ಜಾರಕಿಹೊಳಿ ಪಣ
ನಿಮಗೆಲ್ಲರಿಗೂ ತಿಳಿದಿರುವಂತೆ, ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಇದೆ ಮತ್ತು ಭ್ರಷ್ಟ ಬಿಜೆಪಿ ಸರ್ಕಾರದಿಂದ ಜನರು ಬೇಸತ್ತಿದ್ದಾರೆ. ಕಾಂಗ್ರೆಸ್ ಮೇಲೆ ನಂಬಿಕೆ ಇಟ್ಟಿದ್ದಾರೆ. ಪಕ್ಷವನ್ನು ಅಧಿಕಾರಕ್ಕೆ ತರಲು ಕಾಂಗ್ರೆಸ್ ಕಾರ್ಯಕರ್ತರು ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ಶಿವಕುಮಾರ್ ಪತ್ರದಲ್ಲಿ ತಿಳಿಸಿದ್ದಾರೆ.
ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:41 pm, Thu, 27 April 23