DK Shivakumar Profile: ಕಾಂಗ್ರೆಸ್​​ನ ಟ್ರಬಲ್ ಶೂಟರ್, ಗಟ್ಟಿ ನಿಲುವಿನ ರಾಜಕಾರಣಿ ಡಿಕೆ ಶಿವಕುಮಾರ್

ಕಾಂಗ್ರೆಸ್ ಕಾರ್ಯಕರ್ತ, ಶಾಸಕ, ಸಚಿವ, ರಾಜ್ಯ ಘಟಕದ ಅಧ್ಯಕ್ಷ, ಹೀಗೆ ಹಲವು ಜವಾಬ್ದಾರಿಗಳನ್ನು ನಿರ್ವಹಿಸಿರುವ ಡಿಕೆ ಶಿವಕುಮಾರ್ ಅವರು ರಾಜ್ಯಮಟ್ಟದಲ್ಲಿ ಪ್ರಬಲ ವರ್ಚಸ್ಸು ಹೊಂದಿದ್ದಾರೆ.

DK Shivakumar Profile: ಕಾಂಗ್ರೆಸ್​​ನ ಟ್ರಬಲ್ ಶೂಟರ್, ಗಟ್ಟಿ ನಿಲುವಿನ ರಾಜಕಾರಣಿ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
Follow us
Ganapathi Sharma
| Updated By: ರಮೇಶ್ ಬಿ. ಜವಳಗೇರಾ

Updated on: May 18, 2023 | 12:27 PM

ಕರ್ನಾಟಕ ಕಾಂಗ್ರೆಸ್​​ನ ಪ್ರಭಾವಿ ಮತ್ತು ಪ್ರಬಲ ರಾಜಕಾರಣಿಗಳ ಪೈಕಿ ಮುಂಚೂಣಿಯಲ್ಲಿ ಕಂಡುಬರುವ ಹೆಸರು ಡಿಕೆ ಶಿವಕುಮಾರ್ (DK Shivakumar). ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕರಾಗಿ ಕಾರ್ಯನಿರ್ವಹಿಸಿದ ಸಿದ್ದರಾಮಯ್ಯ ಅವರ ಸಮದಂಡಿಯಾಗಿ ಕಾಂಗ್ರೆಸ್​​ನಲ್ಲಿ ನಿಲ್ಲಬಲ್ಲ ಪ್ರಮುಖ ನಾಯಕರೆಂದರೆ ಡಿಕೆ ಶಿವಕುಮಾರ್. ಎಲ್ಲದಕ್ಕಿಂತ ಹೆಚ್ಚಾಗಿ, ಪಕ್ಷವು ಸಂಕಷ್ಟದ ಸ್ಥಿತಿಯಲ್ಲಿದ್ದಾಗ, ಶಾಸಕರು ‘ಆಪರೇಷನ್ ಕಮಲ’ದಂಥ ರಾಜಕೀಯ ದಾಳಗಳಿಗೆ ಸಿಲುಕಿದ ಸಂದರ್ಭದಲ್ಲಿ ಕಾಂಗ್ರೆಸ್​ನ ರಕ್ಷಣೆಗೆ ಟೊಂಕ ಕಟ್ಟಿ ನಿಲ್ಲುವ ಮೂಲಕ ‘ಟ್ರಬಲ್ ಶೂಟರ್’ ಎಂದೇ ಖ್ಯಾತಿ ಪಡೆದವರು. ಈ ಹಿಂದಿನ ಕಾಂಗ್ರೆಸ್​ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಅವರು, ನಂತರ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿದ್ದರ ಜತೆಗೆ ಇದೀಗ ಕಾಂಗ್ರೆಸ್​​ಗೆ ಭಾರೀ ಬಹುಮತ ತಂದುಕೊಡುವಲ್ಲಿಯೂ ಯಶಸ್ವಿಯಾಗಿದ್ದಾರೆ. ಅಲ್ಲದೇ ಈವರೆಗೆ ಶಾಸಕ, ಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿಕೆ ಶಿವಕುಮಾರ್​ಗೆ ಮತ್ತೊಂದು ಕರ್ನಾಟಕ ಉಪಮುಖ್ಯ,ಮಂತ್ರಿ ಹುದ್ದೆ ಒಲಿದುಬಂದಿದೆ.

ಇದನ್ನೂ ಓದಿ: Siddaramaiah Profile: ಕುರಿ ಎಣಿಸುವ ಕುರುಬನಿಗ್ಯಾಕೆ ಹಣಕಾಸು ಖಾತೆ ಎಂದವರು ಮುಖ ಮುಚ್ಚಬೇಕಾಯ್ತು; ಕರ್ನಾಟಕ ರಾಜಕೀಯ ಮಾಸ್ತರ ಸಿದ್ದರಾಮಯ್ಯ, ಹೌದೋ ಹುಲಿಯಾ

ಬೆಂಗಳೂರು ಸಮೀಪದ ಕನಕಪುರದಲ್ಲಿ ಒಕ್ಕಲಿಗ ಸಮುದಾಯಕ್ಕೆ ಸೇರಿದ ಕೆಂಪೇಗೌಡ ಮತ್ತು ಗೌರಮ್ಮ ದಂಪತಿ ಮಗನಾಗಿ ಶಿವಕುಮಾರ್ ಅವರು 1962ರ ಮೇ 15ರಂದು ಜನಿಸಿದರು. ಅವರ ಕಿರಿಯ ಸಹೋದರ ಡಿಕೆ ಸುರೇಶ್ ಕೂಡ ರಾಜಕಾರಣಿಯಾಗಿದ್ದು, ಸಂಸದರು. ಶಿವಕುಮಾರ್ 1993 ರಲ್ಲಿ ಉಷಾ ಅವರನ್ನು ವಿವಾಹವಾದರು. ಐಶ್ವರ್ಯ, ಆಭರಣ ಆಕಾಶ್ ಎಂಬ ಮೂವರು ಮಕ್ಕಳಿದ್ದಾರೆ. ಹಿರಿಯ ಮಗಳು ಕೆಫೆ ಕಾಫಿ ಡೇ ಸಂಸ್ಥಾಪಕ ವಿಜಿ ಸಿದ್ಧಾರ್ಥ ಅವರ ಪುತ್ರ ಅಮರ್ತ್ಯ ಅವರನ್ನು ವಿವಾಹವಾಗಿದ್ದಾರೆ.

ರಾಜಕೀಯದಲ್ಲಿ ಕನಕಪುರದ ಬಂಡೆ ಎಂದೇ ಪ್ರಸಿದ್ಧಿ

ಡಿಕೆ ಶಿವಕುಮಾರ್ ಅವರು 1980ರ ದಶಕದಲ್ಲಿ ವಿದ್ಯಾರ್ಥಿ ನಾಯಕನಾಗುವ ಮೂಲಕ ರಾಜಕೀಯ ಜೀವನದ ಪುಟ್ಟ ಹೆಜ್ಜೆಗಳನ್ನಿಟ್ಟರು. ಕ್ರಮೇಣ ಕಾಂಗ್ರೆಸ್ ಪಕ್ಷದತ್ತ ಆಕರ್ಷಿತರಾಗಿ ಹಂತ ಹಂತವಾಗಿ ರಾಜಕೀಯದಲ್ಲಿ ಮೇಲೇರುತ್ತಾ ಬಂದರು. 1989 ರಲ್ಲಿ ಮೈಸೂರು ಜಿಲ್ಲೆಯ ಸಾತನೂರು ಕ್ಷೇತ್ರದಿಂದ ಚುನಾವಣೆ ಗೆಲ್ಲುವ ಮೂಲಕ ಮೊದಲ ಬಾರಿ ವಿಧಾನಸಭೆಗೆ ಆಯ್ಕೆಯಾದರು. ಆಗ ಅವರಿಗೆ 27 ವರ್ಷ ವಯಸ್ಸಾಗಿತ್ತು. ನಂತರದ 1994, 1999 ಮತ್ತು 2004 ರ ವಿಧಾನಸಭಾ ಚುನಾವಣೆಗಳಲ್ಲಿ ಅದೇ ಕ್ಷೇತ್ರದಿಂದ ಮರುಚುನಾವಣೆಯಲ್ಲಿ ಗೆದ್ದರು. 2008, 2013, 2018 ಹಾಗೂ 2023 ರಲ್ಲಿ ಕನಕಪುರ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ. ಆ ನಂತರ ಕನಕಪುರದ ಬಂಡೇ ಎಂದೇ ಪ್ರಸಿದ್ಧರಾಗಿದ್ದಾರೆ.

ಕಾಂಗ್ರೆಸ್​​ ಪಾಲಿಗೆ ಆಪತ್ಬಾಂಧವ

ವಿಲಾಸ್‌ರಾವ್ ದೇಶಮುಖ್ ಅವರು ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಅವರು 2002 ರಲ್ಲಿ ಅವಿಶ್ವಾಸ ನಿರ್ಣಯವನ್ನು ಎದುರಿಸಬೇಕಾಯಿತು. ಆ ಸಂದರ್ಭದಲ್ಲಿ ಅವರೊಂದಿಗೆ ನಿಕಟವಾಗಿ ಕೆಲಸ ಮಾಡಿದವರು ಡಿಕೆ ಶಿವಕುಮಾರ್. ವಿಶ್ವಾಸಮತದ ದಿನಾಂಕದವರೆಗೆ ಒಂದು ವಾರದವರೆಗೆ ಬೆಂಗಳೂರಿನ ಹೊರವಲಯದಲ್ಲಿರುವ ತಮ್ಮ ರೆಸಾರ್ಟ್‌ನಲ್ಲಿ ಮಹಾರಾಷ್ಟ್ರದ ಶಾಸಕರಿಗೆ ಆತಿಥ್ಯ ನೀಡಿ ದೇಶಮುಖ್ ಸರ್ಕಾರವನ್ನು ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

2017 ರಲ್ಲಿ ಗುಜರಾತ್‌ನಿಂದ ರಾಜ್ಯಸಭೆಗೆ ನಡೆದ ಚುನಾವಣೆ ಸಂದರ್ಭ ಪಕ್ಷದ ಶಾಸಕರನ್ನು ಬಿಜೆಪಿಯ ‘ಆಪರೇಷನ್​ ಕಮಲ’ದಿಂದ ರಕ್ಷಿಸಲು 42 ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿನಲ್ಲಿರುವ ತಮ್ಮ ರೆಸಾರ್ಟ್‌ಗೆ ಸ್ಥಳಾಂತರಿಸಲು ತಮ್ಮ ಪಕ್ಷದ ನಾಯಕತ್ವಕ್ಕೆ ಸಹಾಯ ಮಾಡಿದರು. ಇದು ಅಹ್ಮದ್ ಪಟೇಲ್ ಅವರು ರಾಜ್ಯಸಭೆ ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್​​ಗೆ ಸಹಾಯ ಮಾಡಿತು.

2018 ರ ಚುನಾವಣೆಯ ನಂತರ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸಿದ ಕೀರ್ತಿಯೂ ಡಿಕೆ ಶಿವಕುಮಾರ್ ಅವರಿಗೆ ಸಲ್ಲುತ್ತದೆ.

ಕೆಪಿಸಿಸಿ ಅಧ್ಯಕ್ಷರಾಗಿ ಯಶಸ್ವಿ ಪಯಣ

2020 ರ 2 ಜುಲೈರಂದು ಡಿಕೆ ಶಿವಕುಮಾರ್ ಅವರು ದಿನೇಶ್ ಗುಂಡೂರಾವ್ ಅವರ ಉತ್ತರಾಧಿಕಾರಿಯಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು. ನಂತರ ಅವರು ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸಿದ್ದು, ಬಿಜೆಪಿ ವಿರುದ್ಧ ನಡೆಸಿದ ಪ್ರಚಾರಗಳು ಫಲಕೊಟ್ಟವು. ಜತೆಗೆ ಆಡಳಿತ ವಿರೋಧಿ ಅಲೆಯೂ ಸೇರಿಕೊಂಡು ಕಾಂಗ್ರೆಸ್​ ಪಕ್ಷವು ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಬಹುಮತ ಪಡೆಯುವಂತಾಯಿತು.

ಪಕ್ಷದ ವರಿಷ್ಠ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜತೆ ಕೂಡ ಡಿಕೆ ಶಿವಕುಮಾರ್ ಅವರು ಉತ್ತಮ ಬಾಂಧವ್ಯ ಹೊಂದಿದ್ದಾರೆ.

ಸಾಲು ವಿವಾದಗಳ ಸುಳಿಯಲ್ಲಿ…

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಅವರು ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಯನ್ನೂ ಎದುರಿಸುತ್ತಿದ್ದಾರೆ. ಕೇಂದ್ರೀಯ ತನಿಖಾ ಸಂಸ್ಥೆಗಳಾ ಜಾರಿ ನಿರ್ದೇಶನಾಲಯ (ಇ.ಡಿ), ಸಿಬಿಐ ಡಿಕೆ ಶಿವಕುಮಾರ್ ವಿರುದ್ಧ ಪ್ರಕರಣಗಳನ್ನು ದಾಖಲಿಸಿಕೊಂಡಿವೆ. ಅಕ್ರಮ ಹಣಕಾಸು ವರ್ಗಾವಣೆ ಅಥವಾ ಮನಿ ಲಾಂಡರಿಂಗ್ ಪ್ರಕರಣದಲ್ಲಿ 2019 ರ ಸೆಪ್ಟೆಂಬರ್ 3ರಂದು ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ನಂತರ ಅವರು ಕೆಲವು ದಿನ ತಿಹಾರ್ ಜೈಲಿನಲ್ಲಿದ್ದರು. ಈ ವಿಚಾರವಾಗಿ ಕರ್ನಾಟಕದ ಬಿಜೆಪಿ ಸರ್ಕಾರ ಮಾಡಿರುವ ಆರೋಪಗಳು ಆಧಾರರಹಿತ ಮತ್ತು ರಾಜಕೀಯ ಪ್ರೇರಿತ ಎಂದು ಅವರು ಆಕ್ಷೇಪಿಸಿದ್ದರು. ಪ್ರಸ್ತುತ ಅವರ ವಿರುದ್ಧದ ಒಂದು ಪ್ರಕರಣ ಹೈಕೋರ್ಟ್​ನಲ್ಲಿ ವಿಚಾರಣೆ ಹಂತದಲ್ಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್