ಕೊನೆಗೂ ದೆಹಲಿಯತ್ತ ಡಿಕೆ ಶಿವಕುಮಾರ್: ಇಂದೇ ಫೈನಲ್​, ಯಾರಾಗುತ್ತಾರೆ ಸಿಎಂ? ಎಲ್ಲರ ಚಿತ್ತ ದಿಲ್ಲಿಯತ್ತ

ಕರ್ನಾಟಕ ಸಿಎಂ ಯಾರಾಗುತ್ತಾರೆ ಎನ್ನುವ ಗೊಂದಲ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದು, ವರಿಷ್ಠರು ಇಂದೇ ಸಿಎಂ ಯಾರು ಎನ್ನುವುದನ್ನು ಘೋಷಣೆ ಮಾಡುವ ಸಾಧ್ಯತೆಗಳಿವೆ. ಹೀಗಾಗಿ ಎಲ್ಲರ ಚಿತ್ತ ದೆಹಲಿಯತ್ತ ನೆಟ್ಟಿದೆ.

ಕೊನೆಗೂ ದೆಹಲಿಯತ್ತ ಡಿಕೆ ಶಿವಕುಮಾರ್: ಇಂದೇ ಫೈನಲ್​, ಯಾರಾಗುತ್ತಾರೆ  ಸಿಎಂ? ಎಲ್ಲರ ಚಿತ್ತ ದಿಲ್ಲಿಯತ್ತ
ಡಿಕೆ ಶಿವಕುಮಾರ್
Follow us
ರಮೇಶ್ ಬಿ. ಜವಳಗೇರಾ
|

Updated on: May 16, 2023 | 7:23 AM

ಬೆಂಗಳೂರು/ನವದೆಹಲಿ: ಭಾರಿ ಬಹುಮತದೊಂದಿಗೆ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆ. ಫಲಿತಾಂಶ ಪ್ರಕಟಗೊಂಡು ಎರಡು ದಿನಗಳು ಕಳೆದಿವೆ. ಆದ್ರೆ, ಸಿಎಂ ಯಾರು ಎನ್ನುವುದೇ ತಿಳಿಯುತ್ತಿಲ್ಲ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿ ಹುದ್ದೆಗೆ ಹಿಡಿದಿರುವ ಬಿಗಿ ಪಟ್ಟನ್ನು ದಿನ ಕಳೆದಂತೆ ಮತ್ತಷ್ಟು ಬಿಗಿಯಾಗುತ್ತಿದೆ. ಹೀಗಾಗಿ ಕರ್ನಾಟಕದ ಮುಂದಿನ ಸಿಎಂ ಯಾರು ಎನ್ನುವ ಫೈಟ್, ಈಗ ದಿಲ್ಲಿಗೆ ಶಿಫ್ಟ್ ಆಗಿದ್ದು, ಕಗ್ಗಂಟು ಬಗೆಹರಿಸುವ ಹೊಣೆ ವರಿಷ್ಠರಾದ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಅವರ ಹೆಗಲೇರಿದೆ. ಹೀಗಾಗಿ ಎಲ್ಲರ ಚಿತ್ತ ಈಗ ದೆಹಲಿಯತ್ತ ನೆಟ್ಟಿದೆ. ಸಿದ್ದರಾಮಯ್ಯ ಸೈಲೆಂಟಾಗೇ ದೆಹಲಿಯ ಗೂಡು ಸೇರಿದ್ದರೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೊಟ್ಟೆ ನೋವಿನ ಕಾರಣ ಹೇಳಿ ಬೆಂಗಳೂರಲ್ಲೇ ಉಳಿದಿದ್ದಾರೆ. ಇದೀಗ ಮತ್ತೆ ಡಿಕೆ ಶಿವಕುಮಾರ್​ ಇಂದು(ಮೇ 16) ಬೆಳಗ್ಗೆ ದೆಹಲಿಗೆ ತೆರಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಮುಖ್ಯಮಂತ್ರಿ ಯಾರು ಎನ್ನುವುದು ಇಂದೇ ಅಂತಿಮಗೊಳ್ಳುವ ಎಲ್ಲಾ ಸಾಧ್ಯತೆಗಳಿವೆ.

ಇದನ್ನೂ ಓದಿ: ಸಿಎಂ ಹುದ್ದೆ ತಿಕ್ಕಾಟ ನಡುವೆಯೇ ಸಚಿವ ಸ್ಥಾನಕ್ಕಾಗಿ ಭರ್ಜರಿ ಲಾಬಿ: ಹೊಸ ಸಿಎಂಗೆ ಸಂಪುಟ ರಚನೆ ದೊಡ್ಡ ಸವಾಲ್‌

ಹೌದು…ಇಂದು ಬೆಳಗ್ಗೆ ಡಿಕೆ ಶಿವಕುಮಾರ್​ ನವದೆಹಲಿಗೆ ತೆರಳಿ ಸೋನಿಯಾ ಗಾಂಧಿ ಭೇಟಿಯಾಗಲಿದ್ದಾರೆ. ಶಿಮ್ಲಾದಿಂದ ಸೋನಿಯಾ ಗಾಂಧಿ ಬರುವ ವೇಳೆಗೆ ದೆಹಲಿ ತಲುಪಲು ಡಿಕೆ ಶಿವಕುಮಾರ್ ಪ್ಲಾನ್ ಮಾಡಿದ್ದಾರೆ. ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲೇ ಬೀಡು ಬಿಟ್ಟಿದ್ದಾರೆ. ಯಾವುದೇ ಕ್ಷಣದಲ್ಲಾದರೂ ಮುಂದಿನ ಸಿಎಂ ಯಾರು ಎನ್ನುವ ಘೋಷಣೆ ಹೊರ ಬೀಳುವ ಸಾಧ್ಯತೆಯಿದೆ.

ಅಂತಿಮವಾಗದ ಸಿಎಂ ಆಯ್ಕೆ

ರಾಜ್ಯದಿಂದ ವರದಿ ಕೊಂಡೊಯ್ದಿರುವ ಎಐಸಿಸಿ ವೀಕ್ಷಕರು ದೆಹಲಿಯಲ್ಲಿ ಖರ್ಗೆ ನಿವಾಸದಲ್ಲಿ ಸಭೆ ನಡೆಸಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ, ಕೆ.ಸಿ.ವೇಣುಗೋಪಾಲ್, ಎಐಸಿಸಿ ವೀಕ್ಷಕರಾದ ಜಿತೇಂದ್ರ ಸಿಂಗ್, ಬಬಾರಿಯಾ ಸೇರಿ ಇತರರು ಭಾಗಿಯಾಗಿದ್ರು. ಖರ್ಗೆ ನಿವಾಸದಲ್ಲಿ ಮೂರು ಗಂಟೆಗೂ ಹೆಚ್ಚು ಕಾಲ ವೀಕ್ಷಕರು ಹಾಗೂ ರಣದೀಪ್ ಸಿಂಗ್ ಸುರ್ಜೇವಾಲ, ವೇಣುಗೋಪಾಲ್ ಚರ್ಚೆ ನಡೆಸಿದ್ದಾರೆ. ವೀಕ್ಷಕರು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ವರದಿಯನ್ನು ಸಲ್ಲಿಸಿದ್ದಾರೆ. ಆದ್ರೆ ಸಿಎಂ ಆಯ್ಕೆ ಬಗ್ಗೆ ಅಂತಿಮ‌ ನಿರ್ಧಾರ ತೆಗೆದುಕೊಂಡಿಲ್ಲ.

ಸಿಎಂ ಆಯ್ಕೆ ಬಗ್ಗೆ ಹೈಕಮಾಂಡ್‌ನಲ್ಲೇ ಗೊಂದಲ!

ಸಿಎಂ ಆಯ್ಕೆ ವಿಚಾರದಲ್ಲಿ ಹೈಕಮಾಂಡ್ ನಾಯಕರಲ್ಲೇ ಗೊಂದಲ ಸೃಷ್ಟಿಯಾಗಿದೆ ಎನ್ನಲಾಗಿದೆ. ಸಿದ್ದರಾಮಯ್ಯಗೆ ಸಿಎಂ ಸ್ಥಾನ ನೀಡಲು ರಾಹುಲ್ ಗಾಂಧಿ ಒಲವು ತೋರಿಸಿದ್ದಾರೆ ಎನ್ನಲಾಗಿದೆ. ಶಾಸಕರು, ಸಮುದಾಯಗಳ ಬೆಂಬಲ ಆಧರಿಸಿ ರಾಹುಲ್ ಸಿದ್ದರಾಮಯ್ಯ ಪರ ಒಲವು ತೋರಿದ್ದಾರೆ ಎನ್ನಲಾಗಿದೆ. ಆದ್ರೆ ಕಾಂಗ್ರೆಸ್ ಭವಿಷ್ಯದ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಯೋಚಿಸಿದ್ದು, ಸಿದ್ದರಾಮಯ್ಯಗೆ ಸಿಎಂ ಸ್ಥಾನ ನೀಡುವುದರಿಂದ ಆಗುವ ಲಾಭವೇನು? ಸಿದ್ದರಾಮಯ್ಯ ಸಕ್ರಿಯ ರಾಜಕೀಯದಿಂದ ಹಿಂದೆ ಸರಿಯಲಿದ್ದಾರೆ. ಮುಂದಿನ ಚುನಾವಣೆ ಗೆಲ್ಲುವ ನಾಯಕತ್ವ ಬೆಳೆಸುವ ವಾದ ಮುಂದಿಟ್ಟಿದ್ದಾರೆ ಎನ್ನಲಾಗಿದೆ. ಇನ್ನು ಇಂದು ರಾಜ್ಯ ಕಾಂಗ್ರೆಸ್‌ ನಾಯಕರ ಜೊತೆ ವರಿಷ್ಠರು ಸಭೆ ನಡೆಸಲಿದ್ದಾರೆ. ಸಭೆ ಬಳಿಕ ಯಾರು ಸಿಎಂ ಆಗುತ್ತಾರೆಂದು ತೀರ್ಮಾನವಾಗಲಿದೆ.

ಡಿಕೆಶಿಗೆ ರಾಜಸ್ಥಾನ ಮಾದರಿ ಭಯ!

ಅಧಿಕಾರ ಹಂಚಿಕೆ ವಾದವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿರಾಕರಿಸಿದ್ದಾರೆ ಎನ್ನಲಾಗಿದೆ. ಛತ್ತೀಸ್​ಗಢ, ರಾಜಸ್ಥಾನದ ಉದಾಹರಣೆಯನ್ನು ಡಿ.ಕೆ.ಶಿವಕುಮಾರ್ ನೀಡ್ತಿದ್ದಾರೆ ಎನ್ನಲಾಗಿದೆ. ಎರಡು ರಾಜ್ಯಗಳಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ನಡೆದಿತ್ತು. ಆದ್ರೆ ಸಿಎಂ ಸ್ಥಾನ ಬಿಟ್ಟುಕೊಡದ ಅಶೋಕ್ ಗೆಹ್ಲೋಟ್, ಭೂಪೇಶ್ ಶಾಸಕರ ಬೆಂಬಲದಿಂದ ಇನ್ನೂ ಮುಂದುವರಿದಿದ್ದಾರೆ. ಇದೇ ಆತಂಕ ರಾಜ್ಯದಲ್ಲೂ ಡಿಕೆಶಿಗೆ ಕಾಡ್ತಿದೆ ಎನ್ನಲಾಗಿದೆ. ಶಾಸಕರ ಬೆಂಬಲದೊಂದಿಗೆ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಯಬಹುದು ಅನ್ನೋ ಅನ್ನೋ ಆತಂಕ ಡಿಕೆಶಿಯದ್ದು ಎನ್ನಲಾಗುತ್ತಿದೆ.

ಒಟ್ಟಾರೆ ನಿಚ್ಚಳ ಬಹುಮತ ಪಡೆದಿರುವ ಕಾಂಗ್ರೆಸ್‌ಗೆ ಸಿಎಂ ಸ್ಥಾನದ ಆಯ್ಕೆ ಕಗ್ಗಂಟಾಗಿದೆ. ಶಾಸಕರ ಬೆಂಬಲ ಇದ್ದವರನ್ನೇ ಹೈಕಮಾಂಡ್ ಅಂತಿಮವಾಗಿ ಸಿಎಂ ಸ್ಥಾನಕ್ಕೆ ಆಯ್ಕೆ ಮಾಡುವ ಸಾಧ್ಯತೆಯಿದೆ. ಸಿದ್ದರಾಮಯ್ಯ, ಡಿಕೆಶಿ ಇಬ್ಬರನ್ನು ಜೊತೆಗೆ ಕೂರಿಸಿ ವರಿಷ್ಠರು ಮಾತನಾಡಿಸುವ ಸಾಧ್ಯತೆಯಿದೆ. ಎಲ್ಲವೂ ಅಂದುಕೊಂಡಂತೆ ಆದ್ರೆ ಮೂಲಗಳ ಪ್ರಕಾರ ಇಂದೇ ಸಿಎಂ ಯಾರು ಎನ್ನುವ ಗೊಂದಲಗಳಿಗೆ ತೆರೆ ಬೀಳಲಿದ್ದು, ಇನ್ನೆರಡು ದಿನದಲ್ಲಿ ಸರ್ಕಾರ ರಚನೆಯಾಗುವ ಸಾಧ್ಯತೆಯಿದೆ ಎನ್ನಾಲಾಗಿದೆ.

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ