ಡಿಕೆ ಶಿವಕುಮಾರ್ಗೆ ಡಿಸಿಎಂ ಪಟ್ಟ; ಬೇಸರವಿದೆ, ಸಾಗಬೇಕಾದ ಹಾದಿ ಬಹಳಷ್ಟಿದೆ ಎಂದ ಡಿಕೆ ಸುರೇಶ್
ಕರ್ನಾಟಕದ ಉಪಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಆಯ್ಕೆ ಮಾಡಿದ್ದರಿಂದ ಖುಷಿಯಾಗಿಲ್ಲ. ಆದರೆ, ಸಾಗಬೇಕಾದ ಹಾದಿ ಬಹಳಷ್ಟಿದೆ ಎಂದು ಸಂಸದ, ಡಿಕೆ ಶಿವಕುಮಾರ್ ಸಹೋದರನೂ ಆಗಿರುವ ಡಿಕೆ ಸುರೇಶ್ ಪ್ರತಿಕ್ರಿಯಿಸಿದ್ದಾರೆ.
ನವದೆಹಲಿ: ಕರ್ನಾಟಕದ ಉಪಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಆಯ್ಕೆ ಮಾಡಿದ್ದರಿಂದ ಖುಷಿಯಾಗಿಲ್ಲ. ಆದರೆ, ಸಾಗಬೇಕಾದ ಹಾದಿ ಬಹಳಷ್ಟಿದೆ ಎಂದು ಸಂಸದ, ಡಿಕೆ ಶಿವಕುಮಾರ್ ಸಹೋದರನೂ ಆಗಿರುವ ಡಿಕೆ ಸುರೇಶ್ ಪ್ರತಿಕ್ರಿಯಿಸಿದ್ದಾರೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿರುವ ಹೈಕಮಾಂಡ್ ಡಿಕೆ ಶಿವಕುಮಾರ್ಗೆ ಡಿಸಿಎಂ ಪಟ್ಟ ನೀಡಿದೆ. ಈ ಬಗ್ಗೆ ಮಾತನಾಡಿದ ಸುರೇಶ್, ಡಿಕೆ ಶಿವಕುಮಾರ್ಗೆ ಮುಖ್ಯಮಂತ್ರಿ ಸ್ಥಾನ ಸಿಗಬೇಕು ಎಂಬುದು ನಮ್ಮ ಹಾರೈಕೆಯಾಗಿತ್ತು ಎಂದು ಹೇಳಿದ್ದಾರೆ.
ನಿರ್ಧಾರದ ಬಗ್ಗೆ ನನಗೆ ಸಂಪೂರ್ಣ ಸಂತೋಷವಿಲ್ಲ. ಆದರೆ ಕರ್ನಾಟಕದ ಹಿತದೃಷ್ಟಿಯಿಂದ ನಾವು ಬದ್ಧತೆಯನ್ನು ಪೂರೈಸಲು ಬಯಸಿದ್ದೇವೆ. ಅದಕ್ಕಾಗಿಯೇ ಡಿಕೆ ಶಿವಕುಮಾರ್ ಹೈಕಮಾಂಡ್ ನಿರ್ಧಾರವನ್ನು ಒಪ್ಪಿಕೊಳ್ಳಬೇಕಾಯಿತು. ನಾವು ಸಾಕಷ್ಟು ದೂರ ಸಾಗಬೇಕಾಗಿದೆ. ಕಾದು ನೋಡೋಣ ಎಂದು ಡಿಕೆ ಸುರೇಶ್ ಹೇಳಿದ್ದಾರೆ.
ಇದನ್ನೂ ಓದಿ: ಡಿಕೆ ಶಿವಕುಮಾರ್ ಸಿಎಂ ಸ್ಥಾನದ ಪಟ್ಟು ಸಡಿಲಿಸಿದ್ದು ಹೇಗೆ? ಮಧ್ಯರಾತ್ರಿ ವಿಡಿಯೋ ಕಾಲ್ ಮಾಡಿದ ಸೋನಿಯಾ ಗಾಂಧಿ
ಸಿದ್ದರಾಮಯ್ಯ ಅವರನ್ನು ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದ್ದು, ಗುರುವಾರ ಸಂಜೆ ಬೆಂಗಳೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಯಲ್ಲಿ ಈ ಕುರಿತು ಔಪಚಾರಿಕ ಘೋಷಣೆಯನ್ನು ಮಾಡಲಾಗುತ್ತದೆ.
ಮೇ 20 ರಂದು ಬೆಂಗಳೂರಿನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ