AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಷ್ಟದಲ್ಲಿ ನನ್ನ ಪಾರು ಮಾಡಿದ ಅಜ್ಜಯ್ಯನಿಗೆ ಮೊದಲ ಭೇಟಿ; ಡಿಕೆ ಶಿವಕುಮಾರ್​

ವಿಧಾನಸಭೆ ಚುನಾವಣಾ ಫಲಿತಾಂಶ ನಿನ್ನೆ(ಮೇ.13) ಹೊರಬಿದ್ದಿದ್ದು, ರಾಜ್ಯದಲ್ಲಿ ಸಂಪೂರ್ಣ ಬಹುಮತದಿಂದ ಕಾಂಗ್ರೆಸ್​ ಗೆಲುವು ಸಾಧಿಸಿದೆ. ಈ ಹಿನ್ನಲೆ ಮಾತನಾಡಿದ ಡಿ.ಕೆ ಶಿವಕುಮಾರ್ ‘ಎಲ್ಲಿ ಶ್ರಮವಿದೆಯೋ ಅಲ್ಲಿ ಪ್ರತಿಫಲ ಇದೆ. ಈ ಹಿಂದೆಯೇ ನಾನು 136 ನಂಬರ್​ ಬರುತ್ತೆ ಎಂದು ಹೇಳಿದ್ದೆ ಎಂದಿದ್ದಾರೆ.

ಕಷ್ಟದಲ್ಲಿ ನನ್ನ ಪಾರು ಮಾಡಿದ ಅಜ್ಜಯ್ಯನಿಗೆ ಮೊದಲ ಭೇಟಿ; ಡಿಕೆ ಶಿವಕುಮಾರ್​
ಡಿಕೆ ಶಿವಕುಮಾರ್​
ಕಿರಣ್ ಹನುಮಂತ್​ ಮಾದಾರ್
|

Updated on:May 14, 2023 | 10:01 AM

Share

ಬೆಂಗಳೂರು: ವಿಧಾನಸಭೆ ಚುನಾವಣಾ ಫಲಿತಾಂಶ(Karnataka Assembly Elections 2023 Result)ನಿನ್ನೆ(ಮೇ.13) ಹೊರಬಿದ್ದಿದ್ದು, ರಾಜ್ಯದಲ್ಲಿ ಸಂಪೂರ್ಣ ಬಹುಮತದಿಂದ ಕಾಂಗ್ರೆಸ್​ ಗೆಲುವು ಸಾಧಿಸಿದೆ. ಈ ಹಿನ್ನಲೆ ಮಾತನಾಡಿದ ಡಿ.ಕೆ ಶಿವಕುಮಾರ್ ‘ಎಲ್ಲಿ ಶ್ರಮವಿದೆಯೋ ಅಲ್ಲಿ ಪ್ರತಿಫಲ ಇದೆ. ಈ ಹಿಂದೆಯೇ ನಾನು 136 ನಂಬರ್​ ಬರುತ್ತೆ ಎಂದು ಹೇಳಿದ್ದೆ, ಕುತೂಹಲ ಪಡಬೇಕಿಲ್ಲ, ಯಾರೂ ಟೆನ್ಷನ್ ಮಾಡಿಕೊಳ್ಳಬೇಡಿ. ಎಲ್ಲಿ ಭಕ್ತಿ ಇದೆಯೋ ಅಲ್ಲಿ ಭಗವಂತ ಇದ್ದಾನೆ. ನಾನು ನಂಬಿರುವ ಶಕ್ತಿ ನನಗೆ ಮಾರ್ಗದರ್ಶನ ಕೊಟ್ಟಿದೆ. ಕಷ್ಟದಲ್ಲಿ ನನ್ನ ಪಾರು ಮಾಡಿದ ನೊಣವಿನಕೆರೆ ಅಜ್ಜಯ್ಯನ ಭೇಟಿಗೆ ನಾನು ಹೋಗುತ್ತಿದ್ದೇನೆ, ಒಂದು ಗಂಟೆಗೆ ವಾಪಾಸ್​ ಬರುತ್ತೇನೆ ಎಂದರು.

ಕನಕಪುರದಲ್ಲಿ ಭಾರಿ ಮತಗಳ ಅಂತರದಿಂದ ಗೆಲುವು ಸಾಧಿಸಿದ ಡಿಕೆ ಶಿವಕುಮಾರ್

ನಿನ್ನೆ(ಮೇ.13)ಹೊರಬಿದ್ದ ಫಲಿತಾಂಶದಲ್ಲಿ ರಾಜ್ಯದಲ್ಲಿ ಅತೀ ಹೆಚ್ಚು ಅಂತರದಿಂದ ಗೆದ್ದ ಅಭ್ಯರ್ಥಿ ಡಿಕೆ ಶಿವಕುಮಾರ್, ಹೌದು ಇವರ ವಿರುದ್ಧ ಬಿಜೆಪಿ ಎಷ್ಟೇ ರಣತಂತ್ರ ರೂಪಿಸಿದರೂ ಯಾವುದೇ ಪ್ರಯೋಜನವಾಗಿಲ್ಲ, ಡಿಕೆ ಶಿವಕುಮಾರ್ ಆರ್ ಅಶೋಕ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.  ಅಶೋಕ್ ಮುಂದಾಳತ್ವದಲ್ಲೇ ಕನಕಪುರ ಕೋಟೆ ಗೆಲ್ಲಲು ಬಿಜೆಪಿ ಸಿದ್ಧವಾಗಿತ್ತು. ಹೀಗಾಗಿ 2023ರ ಚುನಾವಣೆಯಲ್ಲಿ ದೆಹಲಿಯಲ್ಲೇ ಕನಕಪುರ ರಾಜಕೀಯ ಲೆಕ್ಕಾಚಾರ ಹಾಕಲಾಗಿತ್ತು. ಮೇ 10ರಂದು ನಡೆದ ಮತದಾನದ ದಿನ ರಾಜ್ಯದ 37,777 ಪ್ರದೇಶದಲ್ಲಿ ಹಾಕಲಾಗಿದ್ದ 58,545 ಮತಗಟ್ಟೆಗಳಲ್ಲಿ ಮತದಾನ ನಡೆದಿತ್ತು. ರಾಜ್ಯದ 224 ಕ್ಷೇತ್ರಗಳ ಮತ ಯಂತ್ರಗಳನ್ನು ಚುನಾವಣಾ ಸಿಬ್ಬಂದಿ ಭದ್ರವಾಗಿ ಇಟ್ಟಿದ್ದು, ಸ್ಟ್ರಾಂಗ್‌ ರೂಂಗಳಲ್ಲಿ ಮೂರನೇ ಹಂತದ ಭದ್ರತೆಯನ್ನು ಮತ ಯಂತ್ರಗಳಿಗೆ ಒದಗಿಸಲಾಗಿತ್ತು.

ಇದನ್ನೂ ಓದಿ:‘ಕೈ’ ಗೆ ಬಂದ ತುತ್ತು ಬಾಯಿಗೆ ಬರಲಿಲ್ಲ! ಕೊನೆಗೂ ಜಯನಗರ ಕ್ಷೇತ್ರದ ಫಲಿತಾಂಶ ಪ್ರಕಟ, ಬಿಜೆಪಿಗೆ ಗೆಲುವು – ನಡುರಾತ್ರಿ ಕಣ್ಣೀರು ಹಾಕಿದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ

224 ಕ್ಷೇತ್ರಗಳ ಮತ ಎಣಿಕೆ ಕಾರ್ಯ 36 ಕೇಂದ್ರಗಳಲ್ಲಿ ಏಕಕಾಲದಲ್ಲಿ ನಡೆದಿದ್ದು, ಸಾವಿರಾರು ಸಿಬ್ಬಂದಿ ಚುನಾವಣಾ ಎಣಿಕೆ ವೇಳೆ ಕಾರ್ಯ ನಿರ್ವಹಿಸಿದ್ದರು. ಮೇ 10ರಂದು ರಾಮನಗರ ಜಿಲ್ಲೆಯಲ್ಲಿ ಶೇ.85ರಷ್ಟು ಮತದಾನವಾಗಿತ್ತು. ಈ ಪೈಕಿ ಕನಕಪುರ ಕ್ಷೇತ್ರದಲ್ಲಿ ಶೇ.84.52ರಷ್ಟು ಮತದಾನ ನಡೆದಿತ್ತು. ಕನಕಪುರ ಕ್ಷೇತ್ರದಲ್ಲಿ ಚುನಾವಣೆಗೆ ನಿಂತಿದ್ದ ಆರ್ ಅಶೋಕ್ ವಿರುದ್ಧ ಡಿಕೆ ಶಿವಕುಮಾರ್ ಅವರು ಬರೋಬ್ಬರಿ 1 ಲಕ್ಷ ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದು, ಆ ಮೂಲಕ ಡಿಕೆಶಿ ವಿರುದ್ಧ ತೊಡೆ ತಟ್ಟಿದ್ದ ಬಿಜೆಪಿ ಹೈಕಮಾಂಡ್‌ಗೆ ಕನಕಪುರ ಕ್ಷೇತ್ರದ ಜನರೇ ಆ ಕಡೆ ತಲೆಯೂ ಹಾಕದಂತೆ ಸೋಲಿನ ರುಚಿ ತೋರಿಸಿದ್ದಾರೆ.

ಒಟ್ಟು 2,20,391 ಮತದಾರರನ್ನು ಹೊಂದಿರುವ ಕನಕಪುರ ಕ್ಷೇತ್ರದಲ್ಲಿ 1,09, 876 ಪುರುಷರು, 1,10,500 ಮಹಿಳಾ ಮತದಾರದ್ದರೆ, ಜಾತಿ ಲೆಕ್ಕಾಚಾರದಲ್ಲಿ ಒಕ್ಕಲಿಗರ 99,567 ವೋಟ್ ಇಲ್ಲಿದೆ. ದಲಿತ ಸಮುದಾಯದ 44 ಸಾವಿರ ಮತಗಳು, ಮುಸ್ಲಿಮರ 22,500, ಲಿಂಗಾಯತರ 18,500 ಮತಗಳು ಇವೆ. ಇನ್ನುಳಿದಂತೆ ಕುರುಬರು 5,600, ತಿಗಳರು 10,500, ಕ್ರೈಸ್ತರು 2,507, ಬೆಸ್ತರು 6000 ಹಾಗೂ ಇತರೆ ಸಮುದಾಯದ 9400 ಮತದಾರರಿದ್ದಾರೆ.

ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:01 am, Sun, 14 May 23

Daily Devotional: ಗುಳಿ ಕೆನ್ನೆಯವರು ನಿಜಕ್ಕೂ ಅದೃಷ್ಟವಂತರಾ ತಿಳಿಯಿರಿ
Daily Devotional: ಗುಳಿ ಕೆನ್ನೆಯವರು ನಿಜಕ್ಕೂ ಅದೃಷ್ಟವಂತರಾ ತಿಳಿಯಿರಿ
Daily Horoscope: ಅನ್ಯರ ಸಮಸ್ಯೆಯನ್ನು ನಿಮ್ಮ ಸಮಸ್ಯೆ ಎಂದುಕೊಳ್ಳುವಿರಿ
Daily Horoscope: ಅನ್ಯರ ಸಮಸ್ಯೆಯನ್ನು ನಿಮ್ಮ ಸಮಸ್ಯೆ ಎಂದುಕೊಳ್ಳುವಿರಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?