ಕಾಂಗ್ರೆಸ್ ವಿರುದ್ಧ ಜಾಹೀರಾತು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ಗೆ ಚುನಾವಣಾ ಆಯೋಗದಿಂದ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ವಿರುದ್ಧ ದಿನಪತ್ರಿಕೆ ಜಾಹೀರಾತು ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ಗೆ ಕರ್ನಾಟಕ ಚುನಾವಣಾ ಆಯೋಗವು ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ಕಾಂಗ್ರೆಸ್ ವಿರುದ್ಧ ಜಾಹೀರಾತು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ಗೆ ಚುನಾವಣಾ ಆಯೋಗದಿಂದ ಶೋಕಾಸ್ ನೋಟಿಸ್
ನಳಿನ್ ಕುಮಾರ್ ಕಟೀಲ್
Follow us
|

Updated on:May 08, 2023 | 9:14 PM

ಬೆಂಗಳೂರು: ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಅವರಿಗೆ ಕರ್ನಾಟಕ ಚುನಾವಣಾ ಆಯೋಗವು (Karnataka Election Commission) ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಕಾಂಗ್ರೆಸ್ ಪಕ್ಷದ ವಿರುದ್ಧ ದಿನಪತ್ರಿಕೆಯಲ್ಲಿ ಜಾಹೀರಾತು ಪ್ರಕಟಿಸಿದ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ (Randeep Singh Surjewala) ಅವರು ನೀಡಿದ ದೂರಿನ ಅನ್ವಯ ನೋಟಿಸ್ ಜಾರಿ ಮಾಡಲಾಗಿದ್ದು, ನಾಳೆ ರಾತ್ರಿ 8 ಗಂಟೆಯೊಳಗೆ ವಿವರಣೆ ನೀಡುವಂತೆ ತಾಕೀತು ಮಾಡಲಾಗಿದೆ.

ಇತ್ತೀಚೆಗಷ್ಟೇ ಬಿಜೆಪಿ ಸರ್ಕಾರ ವಿರುದ್ಧ ಭ್ರಷ್ಟಾಚಾರ ಆರೋಪಿಸಿ ಪತ್ರಿಕೆಗಳಲ್ಲಿ ಜಾಹೀರಾತು ಹಾಕಿದ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೂ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿ ದಾಖಲೆ ನೀಡುವಂತೆ ತಾಕೀತು ಮಾಡಿತ್ತು. ಸರ್ಕಾರದ ವಿರುದ್ಧ ಮಾಡಿದ ಆರೋಪಗಳ ಬಗ್ಗೆ ನೈಜ ಸಾಕ್ಷ್ಯಗಳನ್ನು ಮೇ 7ರ ಸಂಜೆ 7 ಗಂಟೆಯೊಳಗೆ ಒದಗಿಸುವಂತೆ ಸೂಚಿಸಿತ್ತು. ಅದರಂತೆ ನಿನ್ನೆ ಅಧಿಕಾರಿಗಳ ಮುಂದೆ ಹಾಜರಾಗಿದ್ದರು.

ಇದನ್ನೂ ಓದಿ: ಕಳೆದ ಒಂದೂವರೆ ತಿಂಗಳು ರಾಜ್ಯದ 224 ಕ್ಷೇತ್ರದ ದರ್ಶನ: ಟ್ರೆಂಡ್ ಹೇಗಿದೆ? ನಳಿನ್ ಕುಮಾರ್ ಕಟೀಲ್ ಹೇಳಿದ್ದಿಷ್ಟು

ನಾನು ಚುನಾವಣಾ ಆಯೋಗಕ್ಕೆ ಉತ್ತರ ಕೊಟ್ಟಿದ್ದೇನೆ. ಚುನಾವಣಾ ಆಯೋಗ ಅಧಿಕಾರಿಗಳು ಈಗ ಆಧಾರ ಕೇಳಿದ್ದಾರೆ. ನನಗೆ ನೋಟಿಸ್ ನೀಡಿದ್ರು, ದಾಖಲೆ ಏನು ಅಂತ. ನಾನು ಚುನಾವಣಾ ಆಯೋಗಕ್ಕೆ ಉತ್ತರ ಕೊಟ್ಟಿದ್ದೀನಿ. ಈಗ ಆಧಾರ ಏನು ಅಂತ ಕೇಳಿದ್ದಾರೆ. ಯತ್ನಾಳ್​, ವಿಶ್ವನಾಥ್​, ಗೂಳಿಹಟ್ಟಿ ಶೇಖರ್​ ಈ ಬಗ್ಗೆ ಹೇಳಿಕೆ ನೀಡಿದ್ದರು. ಬಿಜೆಪಿ ನಾಯಕರ ಹೇಳಿಕೆ ಮೇಲೆಯೇ ಪ್ರಚಾರ ಮಾಡಿದ್ದೇವೆ. ಆದರೆ ಕಾಂಗ್ರೆಸ್ ವಿರುದ್ಧ ಅಮಿತ್ ಶಾ, ಜೆಪಿ ನಡ್ಡಾ ಕಾಂಗ್ರೆಸ್ ಬಂದರೆ ಕೋಮು ಗಲಭೆ ಆಗುತ್ತೆ ಎಂದಿದ್ದಾರೆ. ಇವರಿಗೆ ಏಕೆ ನೋಟಿಸ್ ಕೊಟ್ಟಿಲ್ಲ ಎಂದು ಡಿಕೆ ಶಿವಕುಮಾರ್ ಇಂದು ಪ್ರಶ್ನಿಸಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:11 pm, Mon, 8 May 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ