ಬೆಂಗಳೂರು: ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಅವರಿಗೆ ಕರ್ನಾಟಕ ಚುನಾವಣಾ ಆಯೋಗವು (Karnataka Election Commission) ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಕಾಂಗ್ರೆಸ್ ಪಕ್ಷದ ವಿರುದ್ಧ ದಿನಪತ್ರಿಕೆಯಲ್ಲಿ ಜಾಹೀರಾತು ಪ್ರಕಟಿಸಿದ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ (Randeep Singh Surjewala) ಅವರು ನೀಡಿದ ದೂರಿನ ಅನ್ವಯ ನೋಟಿಸ್ ಜಾರಿ ಮಾಡಲಾಗಿದ್ದು, ನಾಳೆ ರಾತ್ರಿ 8 ಗಂಟೆಯೊಳಗೆ ವಿವರಣೆ ನೀಡುವಂತೆ ತಾಕೀತು ಮಾಡಲಾಗಿದೆ.
ಇತ್ತೀಚೆಗಷ್ಟೇ ಬಿಜೆಪಿ ಸರ್ಕಾರ ವಿರುದ್ಧ ಭ್ರಷ್ಟಾಚಾರ ಆರೋಪಿಸಿ ಪತ್ರಿಕೆಗಳಲ್ಲಿ ಜಾಹೀರಾತು ಹಾಕಿದ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೂ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿ ದಾಖಲೆ ನೀಡುವಂತೆ ತಾಕೀತು ಮಾಡಿತ್ತು. ಸರ್ಕಾರದ ವಿರುದ್ಧ ಮಾಡಿದ ಆರೋಪಗಳ ಬಗ್ಗೆ ನೈಜ ಸಾಕ್ಷ್ಯಗಳನ್ನು ಮೇ 7ರ ಸಂಜೆ 7 ಗಂಟೆಯೊಳಗೆ ಒದಗಿಸುವಂತೆ ಸೂಚಿಸಿತ್ತು. ಅದರಂತೆ ನಿನ್ನೆ ಅಧಿಕಾರಿಗಳ ಮುಂದೆ ಹಾಜರಾಗಿದ್ದರು.
ಇದನ್ನೂ ಓದಿ: ಕಳೆದ ಒಂದೂವರೆ ತಿಂಗಳು ರಾಜ್ಯದ 224 ಕ್ಷೇತ್ರದ ದರ್ಶನ: ಟ್ರೆಂಡ್ ಹೇಗಿದೆ? ನಳಿನ್ ಕುಮಾರ್ ಕಟೀಲ್ ಹೇಳಿದ್ದಿಷ್ಟು
ನಾನು ಚುನಾವಣಾ ಆಯೋಗಕ್ಕೆ ಉತ್ತರ ಕೊಟ್ಟಿದ್ದೇನೆ. ಚುನಾವಣಾ ಆಯೋಗ ಅಧಿಕಾರಿಗಳು ಈಗ ಆಧಾರ ಕೇಳಿದ್ದಾರೆ. ನನಗೆ ನೋಟಿಸ್ ನೀಡಿದ್ರು, ದಾಖಲೆ ಏನು ಅಂತ. ನಾನು ಚುನಾವಣಾ ಆಯೋಗಕ್ಕೆ ಉತ್ತರ ಕೊಟ್ಟಿದ್ದೀನಿ. ಈಗ ಆಧಾರ ಏನು ಅಂತ ಕೇಳಿದ್ದಾರೆ. ಯತ್ನಾಳ್, ವಿಶ್ವನಾಥ್, ಗೂಳಿಹಟ್ಟಿ ಶೇಖರ್ ಈ ಬಗ್ಗೆ ಹೇಳಿಕೆ ನೀಡಿದ್ದರು. ಬಿಜೆಪಿ ನಾಯಕರ ಹೇಳಿಕೆ ಮೇಲೆಯೇ ಪ್ರಚಾರ ಮಾಡಿದ್ದೇವೆ. ಆದರೆ ಕಾಂಗ್ರೆಸ್ ವಿರುದ್ಧ ಅಮಿತ್ ಶಾ, ಜೆಪಿ ನಡ್ಡಾ ಕಾಂಗ್ರೆಸ್ ಬಂದರೆ ಕೋಮು ಗಲಭೆ ಆಗುತ್ತೆ ಎಂದಿದ್ದಾರೆ. ಇವರಿಗೆ ಏಕೆ ನೋಟಿಸ್ ಕೊಟ್ಟಿಲ್ಲ ಎಂದು ಡಿಕೆ ಶಿವಕುಮಾರ್ ಇಂದು ಪ್ರಶ್ನಿಸಿದ್ದಾರೆ.
ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 9:11 pm, Mon, 8 May 23