AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀತಿ ಸಂಹಿತೆ ಸಿದ್ದತೆಗೆ ಜಿಲ್ಲಾಧಿಕಾರಿಗಳಿಗೆ ತುರ್ತು ಸಂದೇಶ, ಚುನಾವಣೆ ದಿನಾಂಕ ಘೋಷಣೆ ಸುಳಿವು ಕೊಟ್ಟ ಆಯೋಗ

ಕರ್ನಾಟಕ ವಿಧಾನಸಭೆ ಚುನಾವಣೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ರಾಜ್ಯದ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮುಖ್ಯ ಚುನಾವಣಾಧಿಕಾರಿ ಪತ್ರದ ಮೂಲಕ ಸಂದೇಶ ನೀಡಿದ್ದಾರೆ. ಇದರೊಂದಿಗೆ ಚುನಾವಣೆ ದಿನಾಂಕ ಘೋಷಣೆ ಸುಳಿವು ಸಿಕ್ಕಿದೆ.

ನೀತಿ ಸಂಹಿತೆ ಸಿದ್ದತೆಗೆ ಜಿಲ್ಲಾಧಿಕಾರಿಗಳಿಗೆ ತುರ್ತು ಸಂದೇಶ, ಚುನಾವಣೆ ದಿನಾಂಕ ಘೋಷಣೆ ಸುಳಿವು ಕೊಟ್ಟ ಆಯೋಗ
ಭಾರತೀಯ ಚುನಾವಣಾ ಆಯೋಗ
TV9 Web
| Edited By: |

Updated on:Mar 24, 2023 | 10:02 AM

Share

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ (Karnataka Assembly Elections 2023) ದಿನಗಣನೆ ಶುರುವಾಗಿದೆ. ಬಿಜೆಪಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳು ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿವೆ. ಎಎಪಿ, ಕೆಆರ್‌ಪಿಪಿ ಕೂಡ ಕಮಾಲ್‌ ಮಾಡಲು ತಯಾರಿ ನಡೆಸಿದ್ದು, ಏಪ್ರಿಲ್‌ ಅಥವಾ ಮೇನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಇದರ ಬೆನ್ನಲ್ಲೇ ಕರ್ನಾಟಕ ವಿಧಾನಸಭೆ ಚುನಾವಣೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮುಖ್ಯ ಚುನಾವಣಾಧಿಕಾರಿ(Election Commission) ಪತ್ರದ ಮೂಲಕ ತುರ್ತು  ಸೂಚನೆ ನೀಡಿದ್ದಾರೆ. ಚುನಾವಣಾ ನೀತಿ ಸಂಹಿತೆ(Code of Conduct) ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಪತ್ರದಲ್ಲಿ ಸಂದೇಶ ನೀಡಿದ್ದು, ಯಾವುದೇ ಕ್ಷಣಗಳಲ್ಲಿ ಚುನಾವಣೆ ಘೋಷಣೆಯಾಗಬಹುದು. ಹೀಗಾಗಿ ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗಳನ್ನು ಸಿದ್ದವಿಟ್ಟುಕೊಳ್ಳಿ ಎಂದು ಸಂದೇಶ ರವಾನಿಸಲಾಗಿದೆ.

ಇದನ್ನೂ ಓದಿ: Karnataka Assembly Election: ಚುನಾವಣೆ ಹಿನ್ನೆಲೆ ಮತದಾರರಿಗೆ ಆಮಿಷ, ವಾರದಲ್ಲಿ ಕೋಟಿ ಕೋಟಿ ಮೌಲ್ಯದ ವಸ್ತುಗಳು ಜಪ್ತಿ

ಹೌದು…ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಲು ಕೇಂದ್ರ ಚುನಾವಣೆ ಆಯೋಗ ತಯಾರಿ ನಡೆಸಿದ್ದು, ಚುನಾವಣೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ರವಾನಿಸಿದೆ. ಯಾವುದೇ ಕ್ಷಣಗಳಲ್ಲಿ ಚುನಾವಣೆ ಘೋಷಣೆ ಆಗಬಹುದು. ಈ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಮುಖ್ಯ ಚುನಾವಣಾಧಿಕಾರಿ ಕಚೇರಿಯಿಂದ ಪತ್ರ ಹೋಗಿದೆ. ಹೀಗಾಗಿ ಮಾರ್ಚ್​ 27 ಅಥವಾ 28ರಂದು ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿ ದಿನಾಂಕ ಘೋಷಣೆ ಸಾಧ್ಯತೆ ಇದೆ.

ಮುಂದಿನ ವಾರದ ಆರಂಭದಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಬಹುದು ಎಂದು ನವದೆಹಲಿಯ ಮೂಲಗಳು ತಿಳಿಸಿವೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಇತರ ಇಬ್ಬರು ಚುನಾವಣಾ ಆಯುಕ್ತರಾದ ಅನುಪ್ ಚಂದ್ರ ಪಾಂಡೆ ಮತ್ತು ಅರುಣ್ ಗೋಯೆಲ್ ಅವರು ನವದೆಹಲಿಯಲ್ಲಿ ಚುನಾವಣಾ ವೇಳಾಪಟ್ಟಿಯನ್ನು ಘೋಷಣೆ ಮಾಡಲಿದ್ದು, ತಕ್ಷಣ ನೀತಿ ಸಂಹಿತೆ ರಾಜ್ಯಾದ್ಯಂತ ಜಾರಿಗೆ ಬರಲಿದೆ.

ದಿನಾಂಕ ಘೋಷಣೆಗೂ ಮುನ್ನವೇ ರಾಜ್ಯಕ್ಕೆ ಮೋದಿ

ಚುನಾವಣಾ ವರ್ಷವಾದ ಕಾರಣ ಈಗಾಗಲೇ ಎಲೆಕ್ಷನ್‌ ಕಾವು ಏರತೊಡಗಿದೆ. ಇಂತಹ ಸಂದರ್ಭದಲ್ಲಿ ಪ್ರಧಾನಿ ಆಗಮಿಸುತ್ತಿರುವುದಕ್ಕೆ ರಾಜಕೀಯ ಮಹತ್ವ ಸಹಜ. ಆದರೆ, ಚುನಾವಣೆ ಘೋಷಣೆಗೆ ಮೊದಲು ಪ್ರಧಾನಿ ಕೈಗೊಳ್ಳುತ್ತಿರುವ ಪ್ರವಾಸದಲ್ಲಿ ವಿಕಾಸದ ಕಾರ್ಯಸೂಚಿಯೇ ಮುನ್ನೆಲೆಗೆ ಬರಲಿದೆ. ಚುನಾವಣೆಗೆ ದಿನಾಂಕ ಘೋಷಣೆಗೆ ಮೊದಲು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಭೇಟಿ ನೀಡಿ ವಿವಿಧ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಶ್ರೀ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಮತ್ತು ಬೆಂಗಳೂರಿನ ಕೆಆರ್ ಪುರಂ ಮತ್ತು ವೈಟ್‌ಫೀಲ್ಡ್ ನಡುವಿನ ಮೆಟ್ರೋ ಮಾರ್ಗವನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲದೇ ದಾವಣಗೆರೆಯಲ್ಲಿ ಬಿಜೆಪಿ ಆಯೋಜಿಸಿರುವ ಬೃಹತ್​ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಕರ್ನಾಟಕ ವಿಧಾನಸಭೆಗೆ ಸಂಬಂಧಿಸಿದ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 9:57 am, Fri, 24 March 23

ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು