ರಾಜ್ಯದಲ್ಲಿ ಮೊದಲ ಬಾರಿಗೆ ಮತಚಲಾಯಿಸುವವರ ಸಂಖ್ಯೆ ಎಷ್ಟು ಗೊತ್ತಾ? ಇಲ್ಲಿದೆ ಓದಿ

ಕರ್ನಾಟಕದಲ್ಲಿ ಒಟ್ಟು 5,21,73,579 ಕೋಟಿ ಮತದಾರರಿದ್ದಾರೆ. ಅವರಲ್ಲಿ 2.62 ಕೋಟಿ ಪುರುಷರು ಮತ್ತು 2.59 ಕೋಟಿ ಮಹಿಳೆಯರು.

ರಾಜ್ಯದಲ್ಲಿ ಮೊದಲ ಬಾರಿಗೆ ಮತಚಲಾಯಿಸುವವರ ಸಂಖ್ಯೆ ಎಷ್ಟು ಗೊತ್ತಾ? ಇಲ್ಲಿದೆ ಓದಿ
ಯುವ ಮತದಾರರು
Follow us
ವಿವೇಕ ಬಿರಾದಾರ
|

Updated on: May 09, 2023 | 8:14 AM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯ (Karnataka Assembly Election 2023) ಮತದಾನದ (Voting) ದಿನಕ್ಕೆ ಒಂದೇ ದಿನ ಬಾಕಿ ಇದೆ. ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬವನ್ನು ನಾವು, ನೀವು ಸಂಭ್ರಮದಿಂದ ಆಚರಿಸೋಣ. ಬುಧವಾರ (ಮೇ.10) ಮತದಾನ ನಡೆಯಲಿದೆ. ಇದು ನೀವು ನಿಮ್ಮ ಜನಪ್ರತಿನಿಧಿಯನ್ನು ಆರಿಸುವ ದಿನವಾಗಿದೆ. ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ನಿಮ್ಮ ಒಂದು ಮತ ಬಹಳ ಮುಖ್ಯವಾಗಿದೆ. ನಿಮ್ಮ ಒಂದು ಮತ ರಾಜ್ಯಕ್ಕೆ ಹಿತ ತರಲಿ. ಹೀಗಾಗಿ ತಪ್ಪದೇ ಮತ ಚಲಾಯಿಸಿ. ಇದು ಟಿವಿ9 ಡಿಜಿಟಲ್​ನ ಕಳಕಳಿ. ಚುನಾವಣಾ ಆಯೋಗದ (Election Commission) ವರದಿ ಪ್ರಕಾರ ರಾಜ್ಯದಲ್ಲಿ 9.17 ಲಕ್ಷ ಜನರು ಮೊದಲ ಬಾರಿಗೆ ಮತದಾನ ಮಾಡಲಿದ್ದಾರೆ ಎಂದು ಹೇಳಿದೆ.

ಚುನಾವಣಾ ಆಯೋಗದ ಪ್ರಕಾರ, ಕರ್ನಾಟಕದಲ್ಲಿ 17 ವರ್ಷಕ್ಕಿಂತ ಮೇಲ್ಪಟ್ಟ 1.25 ಲಕ್ಷಕ್ಕೂ ಹೆಚ್ಚು ಜನರು ಮತದಾರರ ಗುರುತಿನ ಚೀಟಿಗೆ ಅರ್ಜಿ ಸಲ್ಲಿಸಿದ್ದಾರೆ. ಇದರಲ್ಲಿ 41,000 ಅರ್ಜಿದಾರರು ಏಪ್ರಿಲ್ 1ಕ್ಕೆ 18 ವರ್ಷಕ್ಕೆ ಕಾಲಿಟ್ಟಿದ್ದು, ಇವರು ಈ ಬಾರಿ ಮತ ಚಲಾಯಿಸಲು ಅರ್ಹರಾಗಿದ್ದಾರೆ ಎಂದು ತಿಳಿಸಿದೆ.

ಇದನ್ನೂ ಓದಿ: ನಿಮ್ಮ ವೋಟರ್​​ ಐಡಿ ತಿದ್ದುಪಡಿ, ಹೆಸರು ಬದಲಾವಣೆ ಮಾಡಿಸುವುದು ಹೇಗೆ? ಇಲ್ಲಿದೆ ಮಾಹಿತಿ

ಮತದಾರರ ವಿವರ

ಸೋಮವಾರ, ಮೇ 1 ರಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ರಾಜ್ಯದ ಚುನಾವಣಾ ವ್ಯವಸ್ಥೆ ಮತ್ತು ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸಿದ್ದಾರೆ. ಚುನಾವಣಾ ಆಯೋಗದ ಪ್ರಕಾರ, ಕರ್ನಾಟಕದಲ್ಲಿ ಒಟ್ಟು 5,21,73,579 ಕೋಟಿ ಮತದಾರರಿದ್ದಾರೆ. ಅವರಲ್ಲಿ 2.62 ಕೋಟಿ ಪುರುಷರು ಮತ್ತು 2.59 ಕೋಟಿ ಮಹಿಳೆಯರು.

ತೃತೀಯ ಲಿಂಗಿ 4,669, ಶತಾಯುಷಿ 16,976, 80 ವರ್ಷ ಮೇಲ್ಪಟ್ಟವರು 12,15,763, ವಿಶೇಷ ಚೇತನರು 5,55,073, ಸೇವಾ 47,779 ಮತ್ತು 9,17,241 ಮೊದಲ ಬಾರಿಯ ಮತದಾರರಾಗಿದ್ದಾರೆ. ಇದಲ್ಲದೆ, ರಾಜ್ಯಾದ್ಯಂತ ಒಟ್ಟು 58,282 ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ಎಲ್ಲಾ ರಾಜಕೀಯ ಪಕ್ಷಗಳ ಗುರಿಯಾಗಿರುವ ಒಂದು ವರ್ಗದ ಮತದಾರರಿದ್ದಾರೆ, ಅದು ‘ಮೊದಲ ಬಾರಿಗೆ ಮತ ಚಲಾಯಿಸುವವರು’ ಪ್ರತಿ ಸಾರ್ವತ್ರಿಕ ಚುನಾವಣೆಯಲ್ಲೂ ಯುವ ಮತದಾರರು ಪ್ರಮುಖ ಪಾತ್ರ ವಹಿಸುತ್ತಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ