ECI Press Conference: ಇಂದು ಕೇಂದ್ರ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ; ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ

Karnataka Assembly Elections 2023 Schedule: ಇಂದು ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಘೋಷಣೆ ಮಾಡಲಿದೆ. ಬೆಳಗ್ಗೆ 11.30ರ ವೇಳೆಗೆ ಚುನಾವಣಾ ದಿನಾಂಕ ಘೋಷಣೆಯಾಗಲಿದೆ.

ECI Press Conference: ಇಂದು ಕೇಂದ್ರ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ; ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ
ವಿಧಾನಸೌಧ
Follow us
ನಯನಾ ರಾಜೀವ್
| Updated By: Digi Tech Desk

Updated on:Mar 29, 2023 | 9:23 AM

ನವದೆಹಲಿ: ಕೇಂದ್ರ ಚುನಾವಣಾ ಆಯೋಗ (Election commission of India) ಇಂದು(ಮಾರ್ಚ್​ 29) ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದು, ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ದಿನಾಂಕ ಘೋಷಣೆ ಮಾಡಲಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಇಂದು ಬೆಳಗ್ಗೆ 11.30ಕ್ಕೆ ನವದೆಹಲಿಯ ವಿಜ್ಞಾನ ಭವನದಲ್ಲಿ  ಪತ್ರಿಕಾಗೋಷ್ಠಿ ನಡೆಸಲಿದ್ದು, ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳಿಗೆ ಮತದಾನದ ದಿನಾಂಕ, ಫಲಿತಾಂಶದ ಡೇಟ್​ ಜೊತೆಗೆ ನೀತಿ ಸಂಹಿತೆ ಬಗ್ಗೆ ವಿವರಣೆ ನೀಡಲಿದ್ದಾರೆ. 2018 ರ ವಿಧಾನಸಭಾ ಚುನಾವಣೆಯು ಮೇ 12, 2018 ರಂದು ನಡೆದಿತ್ತು. ಮತ್ತು ಪ್ರಸ್ತುತ ವಿಧಾನಸಭೆಯ ಅವಧಿಯು ಮೇ 24, 2023 ರಂದು ಮುಕ್ತಾಯಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ಇಂದು ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಘೋಷಣೆ ಮಾಡಲಿದೆ.  ವೇಳಾಪಟ್ಟಿ ಪ್ರಕಟವಾದ ನಂತರ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ.

ಚುನಾವಣಾ ಸಿದ್ಧತೆಗಳನ್ನು ಪೂರ್ಣಗೊಳಿಸುವಂತೆ ರಾಜ್ಯ ಚುನಾವಣಾ ಆಯೋಗವು ಇತ್ತೀಚೆಗೆ ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿತ್ತು. ಚುನಾವಣಾ ಕಾರ್ಯದಲ್ಲಿ ತೊಡಗಿರುವ ಎಲ್ಲ ಅಧಿಕಾರಿಗಳ ವರ್ಗಾವಣೆಯನ್ನು ನಿಲ್ಲಿಸುವಂತೆಯೂ ಇಸಿಐ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು.

ಈ ತಿಂಗಳ ಆರಂಭದಲ್ಲಿ ಮುಖ್ಯ ಚುನಾವಣಾ ಆಯುಕ್ತರು ಕರ್ನಾಟಕಕ್ಕೆ ಭೇಟಿ ನೀಡಿ ರಾಜ್ಯದಲ್ಲಿ ಚುನಾವಣಾ ಸಿದ್ಧತೆಗಳನ್ನು ಪರಿಶೀಲಿಸಿದ್ದರು.

ಕರ್ನಾಟಕ ಸರ್ಕಾರವು ಕಳೆದ ವಾರ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಸೇರಿದಂತೆ ಹಲವು ನಿರ್ಣಾಯಕ ಘೋಷಣೆಗಳನ್ನು ಮಾಡಿತ್ತು.

ಸುದ್ದಿಯನ್ನು ಇಂಗ್ಲಿಷ್​ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:11 am, Wed, 29 March 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್