ಕೋಲಾರಕ್ಕೆ ಆಗಮಿಸಿದ ರಾಹುಲ್ ಗಾಂಧಿ ಹೆಲಿಕಾಪ್ಟರ್ ಇಂಚಿಂಚು ಪರಿಶೀಲಿಸಿದ ಚುನಾವಣಾಧಿಕಾರಿಗಳು

ಕಾಂಗ್ರೆಸ್ ಆಯೋಜಿಸಿರುವ ಜೈ ಭಾರತ ಸಮಾವೇಶದಲ್ಲಿ ಭಾಗಿಯಾಗಲು ಕೋಲಾರಕ್ಕೆ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್ ಅನ್ನು ಚುನಾವಣಾ ಅಧಿಕಾರಿಗಳು ಪರಿಶೀಲನೆ ನಡೆಸಿದರು.

ಕೋಲಾರಕ್ಕೆ ಆಗಮಿಸಿದ ರಾಹುಲ್ ಗಾಂಧಿ ಹೆಲಿಕಾಪ್ಟರ್ ಇಂಚಿಂಚು ಪರಿಶೀಲಿಸಿದ ಚುನಾವಣಾಧಿಕಾರಿಗಳು
ರಾಹುಲ್ ಗಾಂಧಿ
Follow us
Rakesh Nayak Manchi
|

Updated on:Apr 16, 2023 | 5:34 PM

ಕೋಲಾರ: ಕಾಂಗ್ರೆಸ್ ಆಯೋಜಿಸಿರುವ ಜೈ ಭಾರತ ಸಮಾವೇಶದಲ್ಲಿ ಭಾಗಿಯಾಗಲು ಕೋಲಾರಕ್ಕೆ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ಹೆಲಿಕಾಪ್ಟರ್ ಅನ್ನು ಚುನಾವಣಾ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಚುನಾವಣೆ ನೀತಿ ಸಂಹಿತಿ ಜಾರಿಯಲ್ಲಿರುವ (Model Code Of Conduct) ಹಿನ್ನೆಲೆ ಕೋಲಾರದ ಅರ್.ಎಲ್. ಜಾಲಪ್ಪ ಆಸ್ಪತ್ರೆ ಆವರಣದಲ್ಲಿನ ಹೆಲಿಪ್ಯಾಡ್​ನಲ್ಲಿ ಹೆಲಿಕಾಪ್ಟರ್ ಅನ್ನು ಇಂಚಿಂಚು ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಅಧಿಕಾರಿಗಳೊಂದಿಗೆ ಫೈಲೆಟ್ ಮಾತನಾಡಿದರು. ಸಮಾವೇಶದಲ್ಲಿ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ (Randeep Singh Surjewala), ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar), ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಭಾಗಿಯಾಗಿದ್ದಾರೆ. ಸಮಾವೇಶಕ್ಕೆ ಆಗಮಿಸಿದ ರಾಹುಲ್ ಗಾಂಧಿಗೆ ಕೆ.ಎಚ್. ಮುನಿಯಪ್ಪ ಹಾಗೂ ಬಿಕೆ ಹರಿಪ್ರಸಾದ್ ಅವರು ಹೂ ಗುಚ್ಚ ಕೊಟ್ಟು ಸ್ವಾಗತ ಮಾಡಿದರು. ಈ ವೇಳೆ ಕೆ.ಹೆಚ್​.ಮುನಿಯಪ್ಪ, ಸಲೀಂ ಅಹ್ಮದ್​ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಸಮಾವೇಶವನ್ನು ದೀಪ ಬೆಳಗುವ ಮೂಲಕ ಚಾಲನೆ ನೀಡಲಾಯಿತು.

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಅಧಿಕಾರಿಗಳು ರಾಜಕಾರಣಿಗಳ ಚಲನವಲನಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಇತ್ತೀಚೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರ ಹೆಲಿಕಾಪ್ಟರ್ ಅನ್ನು ಪರಿಶೀಲನೆ ನಡೆಸಲಾಗಿತ್ತು. ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಸಿಎಂ ಬೊಮ್ಮಾಯಿ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಟೆಂಪಲ್ ರನ್ ನಡೆಸಿದ್ದರು. ಈ ವೇಳೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಅಧಿಕಾರಿಗಳ ತಂಡ ಬೊಮ್ಮಾಯಿ ಅವರ ಹೆಲಿಕಾಪ್ಟರ್​ ಪರಿಶೀಲನೆ ನಡೆಸಲಾಗಿತ್ತು. ಹೆಲಿಕಾಪ್ಟರ್, ಸೂಟ್​ಕೇಸ್​ ಅನ್ನು ಅಧಿಕಾರಿಗಳು ಪರಿಶೀಲಿಸಿದ್ದರು.

ಇದನ್ನೂ ಓದಿ: ಮುಖ್ಯಮಂತ್ರಿ ಪಟ್ಟ ನನಗೆ ಬೇಡ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ

ಮಾತ್ರವಲ್ಲದೆ, ಕೋಲಾರಕ್ಕೆ ಆಗಮಿಸಿದ್ದ ಹೆಚ್ ಡಿ ಕುಮಾರಸ್ವಾಮಿ ಅವರ ಹೆಲಿಕಾಪ್ಟರ್ ಅನ್ನು ಕೂಡ ಪರಿಶೀಲನೆ ನಡೆಸಲಾಗಿತ್ತು. ಪಂಚರತ್ನ ಯಾತ್ರೆ ಸಂಬಂಧ ಜಿಲ್ಲೆಯ ಮುಳಬಾಗಿಲು ತಾಲೂಕಿನ ಶಿನಗೇನಹಳ್ಳಿ ಹೆಲಿಪ್ಯಾಡ್​ಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಹೆಚ್​. ಡಿ ಕುಮಾರಸ್ವಾಮಿಯವರ ಹೆಲಿಕಾಪ್ಟರ್​​​ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ಮಾಡಿದ್ದರು.

ಭಾರತದ ಚುನಾವಣಾ ಆಯೋಗ ಮಾರ್ಚ್ 29 ರಂದು ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಗೆ ದಿನಾಂಕವನ್ನು ಘೋಷಣೆ ಮಾಡಿತ್ತು. ಆ ಕ್ಷಣದಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದೆ. ಹಾಗಾಗಿ ರಾಜಕೀಯ ನಾಯಕರ ವಾಹನ, ಹೆಲಿಕಾಪ್ಟರ್​ಗಳನ್ನು ತಪಾಸಣೆ ನಡೆಸಲಾಗುತ್ತಿದೆ. ರಾಜ್ಯದಲ್ಲಿ ಮೇ 10 ರಂದು ಮತದಾನ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:34 pm, Sun, 16 April 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ