ಕಾಂಗ್ರೆಸ್ ಎರಡನೇ ಪಟ್ಟಿ; ಆಕಾಂಕ್ಷಿಗಳ ಅಸಮಾಧಾನ ಸ್ಫೋಟ, ಕಾಂಗ್ರೆಸ್ ಗೆಲ್ಲಲ್ಲ ಎಂದ ರಘು ಆಚಾರ್

| Updated By: Ganapathi Sharma

Updated on: Apr 06, 2023 | 5:45 PM

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್​ ಅಭ್ಯರ್ಥಿಗಳ ಎಡನೇ ಪಟ್ಟಿ ಪ್ರಕಟವಾದ ಬೆನ್ನಲ್ಲೇ ಹಲವು ಕಡೆಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ ಸ್ಫೋಟಗೊಂಡಿದೆ.

ಕಾಂಗ್ರೆಸ್ ಎರಡನೇ ಪಟ್ಟಿ; ಆಕಾಂಕ್ಷಿಗಳ ಅಸಮಾಧಾನ ಸ್ಫೋಟ, ಕಾಂಗ್ರೆಸ್ ಗೆಲ್ಲಲ್ಲ ಎಂದ ರಘು ಆಚಾರ್
ರಘು ಆಚಾರ್
Follow us on

ಚಿತ್ರದುರ್ಗ: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಕಾಂಗ್ರೆಸ್​ ಅಭ್ಯರ್ಥಿಗಳ ಎಡನೇ ಪಟ್ಟಿ ಪ್ರಕಟವಾದ ಬೆನ್ನಲ್ಲೇ ಹಲವು ಕಡೆಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ ಸ್ಫೋಟಗೊಂಡಿದೆ. ಚಿತ್ರದುರ್ಗದಿಂದ ಕೆ.ಸಿ.ವಿರೇಂದ್ರ ಪಪ್ಪಿಗೆ ಟಿಕೆಟ್ ಘೋಷಣೆ ಹಿನ್ನೆಲೆಯಲ್ಲಿ ಕೋಟೆನಾಡಿನಲ್ಲಿ ಭಿನ್ನಮತ ಸ್ಪೋಟಗೊಂಡಿದೆ. ಮಾಜಿ ಎಂಎಲ್​ಸಿ ರಘು ಆಚಾರ್ ನಾಯಕತ್ವದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ, ರಘು ಆಚಾರ್ ಜೆಡಿಎಸ್ ಸೇರಲು ಸಿದ್ಧತೆ ನಡೆಸಿದ್ದಾರೆ ಎಂದೂ ವರದಿಯಾಗಿದೆ. ಸಿದ್ದರಾಮಯ್ಯ ಅವರೇ ನನಗೆ ಸ್ಪರ್ಧಿಸುವಂತೆ ಹೇಳಿದ್ದರು. ಎಂಎಲ್​ಸಿ ಬೇಡ, ಶಾಸಕ ಸ್ಥಾನಕ್ಕೆ ಸ್ಪರ್ಧಿಸಿ ಎಂದು ಕೈ ನಾಯಕರು ಹೇಳಿದ್ದರು. ಈಗ ಅರ್ಧ ದಾರಿಯಲ್ಲೇ ಕತ್ತು ಕೊಯ್ದಿದ್ದಾರೆ ಎಂದು ರಘು ಆಚಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಾತಿ, ಮತ ಬಲ ಇಲ್ಲವೆಂಬ ಸಣ್ಣ ಕಾರಣಕ್ಕೆ ಈ ರೀತಿ ಮಾಡಿದ್ದಾರೆ. ಈ ಜಿಲ್ಲೆಯ ಜನ ಇದಕ್ಕೆ ಉತ್ತರ ನೀಡುತ್ತಾರೆ. ನನಗೊಬ್ಬನಿಗೆ ಅಲ್ಲ, ಮಡಿವಾಳ ಸಮುದಾಯದ, ತರೀಕೆರೆ ಕ್ಷೇತ್ರದ ಆಕಾಂಕ್ಷಿ ಆಗಿದ್ದ ಗೋಪಿಕೃಷ್ಣ ಅವರಿಗೂ ಅನ್ಯಾಯ ಮಾಡಲಾಗಿದೆ.

ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ; ರಘು ಆಚಾರ ಗುಡುಗು

ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ. 197 ಸಣ್ಣ ಸಮುದಾಯಗಳಿಗೆ ಕಾಂಗ್ರೆಸ್ ಒಂದು ಸ್ಥಾನ ನೀಡಿಲ್ಲ. ಆ ಸಮುದಾಯಗಳ ಬಗ್ಗೆ ಕೆಪಿಸಿಸಿ ಅಧ್ಯಕ್ಷರಿಗೆ ಗೌರವ ಇದೆಯೊ, ಇಲ್ಲವೊ ಗೊತ್ತಿಲ್ಲ ಎಂದು ಡಿಕೆ ಶಿವಕುಮಾರ್ ವಿರುದ್ಧ ರಘು ಆಚಾರ್ ಅಸಮಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: Karnataka Assembly Elections 2023: ಕಾಂಗ್ರೆಸ್​ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ: ಯಾರ್ಯಾರಿಗೆ ಸಿಕ್ತು ಟಿಕೆಟ್? ಇಲ್ಲಿದೆ​​

ಕಾಂಗ್ರೆಸ್ ಪಕ್ಷಕ್ಕೆ ತನು, ಮನ, ಧನ ಸಹಾಯ ಮಾಡಿದ್ದೇನೆ. ಆದರೆ, ನನಗೆ ನಂಬಿಸಿ ಮೋಸ ಮಾಡಿದರು. ಸಾಮಾಜಿಕ ನ್ಯಾಯ ಮರೆತು ಕಾಂಗ್ರೆಸ್ ಅಭ್ಯರ್ಥ ಘೋಷಣೆ ಮಾಡಿದೆ. ಇಡೀ ರಾಜ್ಯದಲ್ಲಿ ವಿಶ್ವಕರ್ಮ ಸಮಾಜ ಕಾಂಗ್ರೆಸ್​​ಗೆ ಮತ ಹಾಕಲ್ಲ. ಮಾರ್ಚ್ 17 ರಂದು ಚಿತ್ರದುರ್ಗದಿಂದ ನಾಮಪತ್ರ ಸಲ್ಲಿಸುತ್ತೇನೆ. ಬೆಂಬಲಿಗರ ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಅವರು ಹೇಳಿದ್ದಾರೆ.

ನಾಗರಾಜ್ ಛಬ್ಬಿ ರಾಜೀನಾಮೆ ಸಾಧ್ಯತೆ

ಕಲಘಟಗಿ ಕ್ಷೇತ್ರದಲ್ಲಿ ಸಂತೋಷ್ ಲಾಡ್‌ಗೆ ಕಾಂಗ್ರೆಸ್‌ ಟಿಕೆಟ್ ನೀಡಿರುವುದರಿಂದ ಅಸಮಾಧಾನಗೊಂಡಿರುವ ನಾಗರಾಜ್ ಛಬ್ಬಿ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಕಲಘಟಗಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ನಾಗರಾಜ್ ಛಬ್ಬಿ ಇಂದು ರಾತ್ರಿ ಆಪ್ತರ ಸಭೆ ಕರೆದಿದ್ದಾರೆ. ದೆಹಲಿಯಿಂದ ಹುಬ್ಬಳ್ಳಿಗೆ ಆಗಮಿಸುತ್ತಿರುವ ನಾಗರಾಜ್ ಛಬ್ಬಿ, ಆಪ್ತರ ಜೊತೆ ಚರ್ಚಿಸಿ ರಾಜೀನಾಮೆ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ. ಖರ್ಗೆ, ಡಿಕೆಶಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಛಬ್ಬಿ, ಬಹುತೇಕ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.

ಕರ್ನಾಟಕ ವಿಧಾನಸಭಾ ಚುನಾಚವಣೆಯ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ