Model Code Of Conduct: ಚುನಾವಣಾ ನೀತಿ ಸಂಹಿತೆ ಎಂದರೇನು? ನಿಯಮಗಳು ಇಲ್ಲಿವೆ

ಭಾರತದ ಚುನಾವಣಾ ಆಯೋಗ(Election Commission Of India)ವು ಇಂದು ಕರ್ನಾಟಕ ವಿಧಾನಸಭೆ ಚುನಾವಣೆ(Karnataka Assembly Elections 2023) ಗೆ ದಿನಾಂಕವನ್ನು ಘೋಷಣೆ ಮಾಡಿದೆ. ತಕ್ಷಣದಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದೆ.

Model Code Of Conduct: ಚುನಾವಣಾ ನೀತಿ ಸಂಹಿತೆ ಎಂದರೇನು? ನಿಯಮಗಳು ಇಲ್ಲಿವೆ
ಚುನಾವಣಾ ನೀತಿ ಸಂಹಿತೆImage Credit source: The Sentinel Assam
Follow us
|

Updated on: Mar 29, 2023 | 12:07 PM

ಭಾರತದ ಚುನಾವಣಾ ಆಯೋಗ(Election Commission Of India)ವು ಇಂದು ಕರ್ನಾಟಕ ವಿಧಾನಸಭೆ ಚುನಾವಣೆ(Karnataka Assembly Elections 2023) ಗೆ ದಿನಾಂಕವನ್ನು ಘೋಷಣೆ ಮಾಡಿದೆ. ತಕ್ಷಣದಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದೆ. ನೀತಿ ಸಂಹಿತೆಯ ಅವಧಿಯಲ್ಲಿ ಎಲ್ಲಾ ಪಕ್ಷಗಳು ಚುನಾವಣಾ ಆಯೋಗದ ಪ್ರತಿಯೊಂದು ನಿರ್ಧಾರವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾಗುತ್ತದೆ. ಚುನಾವಣಾ ಆಯೋಗದ ಆದೇಶವನ್ನು ಪಾಲಿಸದಿದ್ದರೆ ಸಂಬಂಧಪಟ್ಟ ಮುಖಂಡರ ವಿರುದ್ಧ ಕ್ರಮ ಕೈಗೊಳ್ಳುವ ಹಕ್ಕು ಆಯೋಗಕ್ಕೆ ಇರುತ್ತದೆ. ಈಗ ಅಂತಹ ಪರಿಸ್ಥಿತಿಯಲ್ಲಿ ಈ ಚುನಾವಣಾ ನೀತಿ ಸಂಹಿತೆ ಎಂದರೇನು ಎಂಬುದನ್ನು ತಿಳಿಯುವ ಅಗತ್ಯವಿರುತ್ತದೆ. ಕರ್ನಾಟಕದಲ್ಲಿ ಮೇ 10 ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಫಲಿತಾಂಶ ಹೊರಬೀಳಲಿದೆ.

ಇಂದಿನಿಂದಲೇ ಕರ್ನಾಟಕದಲ್ಲಿ ನೀತಿ ಸಂಹಿತೆ ಜಾರಿಗೆ ಬರಲಿದೆ, ಮುಖ್ಯಮಂತ್ರಿ ಸೇರಿದಂತೆ ಸಚಿವರು ಸರ್ಕಾರಿ ಸೌಲಭ್ಯವನ್ನು ಬಳಸುವಂತಿಲ್ಲ, ಸರ್ಕಾರಿ ವಾಹನ ಸೇರಿದಂತೆ ಇತರೆ ಸವಲತ್ತುಗಳನ್ನು ಬಳಸುವಹಾಗಿಲ್ಲ. ಸರ್ಕಾರ ಯಾವುದೇ ಯೋಜನೆಯನ್ನು ಘೋಷಣೆ ಮಾಡುವಂತಿಲ್ಲ, ಯಾವುದೇ ಅಭಿವೃದ್ಧಿ ಕಾರ್ಯಗಳಲ್ಲಿ ಭಾಗಿಯಾಗುವಂತಿಲ್ಲ. ಆದರೆ ಮುಖ್ಯಮಂತ್ರಿ, ಸಚಿವರು ಹಾಗೂ ಶಾಸಕರಿಗೆ ಎಂದಿನಂತೆ ಭದ್ರತೆ ಇರುತ್ತದೆ, ಎಸ್ಕಾರ್ಟ್​ ಸೇರಿದಮತೆ ಎಲ್ಲಾ ರೀತಿಯ ಭದ್ರತೆ ಮುಂದುವರೆಯಲಿದೆ.

ಮತ್ತಷ್ಟು ಓದಿ: ECI Press Conference: ಇಂದು ಕೇಂದ್ರ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ; ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ

ಚುನಾವಣಾ ನೀತಿ ಸಂಹಿತೆ ಎಂದರೇನು? ಚುನಾವಣೆ ಸಂದರ್ಭದಲ್ಲಿ ಎಲ್ಲಾ ಪಕ್ಷದ ನಾಯಕರು ನೀತಿ ಸಂಹಿತೆಯನ್ನು ಪಾಲಿಸಲೇಬೇಕಾಗುತ್ತದೆ. ವಾಸ್ತವವಾಗಿ, ಚುನಾವಣಾ ದಿನಾಂಕಗಳನ್ನು ಘೋಷಿಸಿದ ತಕ್ಷಣ, ರಾಜಕಾರಣಿಗಳಿಗೆ ತಕ್ಷಣವೇ ಮಾರ್ಗಸೂಚಿಗಳನ್ನು ನೀಡಲಾಗುತ್ತದೆ. ಚುನಾವಣಾ ಪ್ರಕ್ರಿಯೆಯಲ್ಲಿ ಅವರು ಏನು ಮಾಡಬೇಕು ಮತ್ತು ಏನು ಮಾಡಬಾರದು. ಆಯೋಗವು ಹೊರಡಿಸಿದ ಮಾರ್ಗಸೂಚಿಗಳನ್ನು ಚುನಾವಣಾ ಅಭ್ಯರ್ಥಿಗಳು ತಮ್ಮ ಭಾಷಣಗಳಲ್ಲಿ ಮಾತ್ರವಲ್ಲದೆ ಎಲ್ಲಾ ರೀತಿಯ ಚುನಾವಣಾ ಪ್ರಚಾರಗಳಲ್ಲಿ ಮತ್ತು ಅವರ ಪ್ರಣಾಳಿಕೆಗಳಲ್ಲಿಯೂ ಅನುಸರಿಸಬೇಕು.

1- ನೀತಿ ಸಂಹಿತೆ ಜಾರಿಯಾದ ನಂತರ ಯಾವುದೇ ಅಭ್ಯರ್ಥಿ ಮತದಾರರನ್ನು ಯಾವುದೇ ರೀತಿಯಲ್ಲಿ ಪ್ರೇರೇಪಿಸಲು ಪ್ರಯತ್ನಿಸುವಂತಿಲ್ಲ. ಯಾವುದೇ ಅಭ್ಯರ್ಥಿಯು ತನ್ನ ಮತದಾರರಿಗೆ ಮದ್ಯ ಅಥವಾ ಯಾವುದೇ ರೀತಿಯ ಲಂಚ ನೀಡುವ ಬಗ್ಗೆ ಮಾತನಾಡುವಂತಿಲ್ಲ. ಅವರು ಯಾವುದೇ ಮತದಾರರನ್ನು ಬೆದರಿಸಲು ಸಹ ಸಾಧ್ಯವಿಲ್ಲ. ಈ ರೀತಿ ಮಾಡಿ ಸಿಕ್ಕಿಬಿದ್ದರೆ ಚುನಾವಣಾ ಆಯೋಗ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬಹುದು.

2- ಯಾವುದೇ ಅಭ್ಯರ್ಥಿಯು ಧಾರ್ಮಿಕ ಅಥವಾ ಜಾತಿ ಭಾವನೆಗಳಿಗೆ ನೋವುಂಟು ಮಾಡುವ ಅಥವಾ ಪ್ರಚೋದಿಸುವ ಪ್ರಯತ್ನವೆಂದು ಪರಿಗಣಿಸಬಹುದಾದಂತಹ ಕೆಲಸವನ್ನು ಮಾಡಬಾರದು. ಈ ಸಂದರ್ಭದಲ್ಲಿ ಯಾರ ವಿರುದ್ಧವೂ ಅಶ್ಲೀಲ ಭಾಷೆ ಬಳಸುವಂತಿಲ್ಲ. ಯಾವುದೇ ರಾಜಕೀಯ ಪಕ್ಷ ಅಥವಾ ನಾಯಕರು ತಮ್ಮ ಜಾತಿ ಅಥವಾ ಧರ್ಮದ ಆಧಾರದ ಮೇಲೆ ಮತಕ್ಕಾಗಿ ಮತದಾರರಲ್ಲಿ ಮನವಿ ಮಾಡುವಂತಿಲ್ಲ.

3- ಚುನಾವಣೆಯ ಸಂದರ್ಭದಲ್ಲಿ ಸರ್ಕಾರಿ ವಾಹನ ಅಥವಾ ಸರ್ಕಾರಿ ವಿಮಾನವನ್ನು ಯಾವುದೇ ರೀತಿಯಲ್ಲಿ ಚುನಾವಣಾ ಪ್ರಚಾರಕ್ಕೆ ಬಳಸುವಂತಿಲ್ಲ. ನೀತಿ ಸಂಹಿತೆ ಜಾರಿಯಾದ ನಂತರ ಯಾವುದೇ ರೀತಿಯ ಸರ್ಕಾರಿ ಘೋಷಣೆಗಳು, ಉದ್ಘಾಟನೆ, ಶಂಕುಸ್ಥಾಪನೆ ಅಥವಾ ಭೂಮಿಪೂಜೆ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ.

4- ಪಕ್ಷಗಳು ಯಾವುದೇ ಸಭೆ ಅಥವಾ ಕೂಟವನ್ನು ನಡೆಸಬೇಕಾದರೆ, ಅದಕ್ಕಾಗಿ ಆ ಪ್ರದೇಶದ ಸ್ಥಳೀಯ ಪೊಲೀಸರಿಗೆ ಅದರ ಬಗ್ಗೆ ತಿಳಿಸಬೇಕಾಗುತ್ತದೆ ಮತ್ತು ಇದಕ್ಕಾಗಿ ಸಂಬಂಧಪಟ್ಟ ಅಧಿಕಾರಿಯ ಅನುಮತಿ ಕೂಡ ಅಗತ್ಯ.

5- ಚುನಾವಣಾ ಆಯೋಗದಿಂದ ಮಾನ್ಯವಾದ ಪಾಸ್ ಹೊಂದಿರುವ ಮತದಾರರು ಮಾತ್ರ ಮತಗಟ್ಟೆ ಪ್ರವೇಶಿಸಬಹುದು.

6- ಚುನಾವಣಾ ಆಯೋಗವು ಪ್ರತಿ ಮತಗಟ್ಟೆಯ ಹೊರಗೆ ನಿರೀಕ್ಷಕರನ್ನು ನಿಯೋಜಿಸುತ್ತದೆ ಇದರಿಂದ ಯಾರಾದರೂ ನೀತಿ ಸಂಹಿತೆ ಉಲ್ಲಂಘಿಸಿದರೆ ಅವರಿಗೆ ದೂರು ನೀಡಬಹುದು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ಮೇಲ್ಮನೆ ಮತ್ತು ಕೆಳಮನೆಗೆ ಯೋಗ್ಯ ಪ್ರತಿಪಕ್ಷ ನಾಯಕರ ಅಯ್ಕೆಯಾಗಲಿ:ತೇಜಸ್ವಿನಿ
ಮೇಲ್ಮನೆ ಮತ್ತು ಕೆಳಮನೆಗೆ ಯೋಗ್ಯ ಪ್ರತಿಪಕ್ಷ ನಾಯಕರ ಅಯ್ಕೆಯಾಗಲಿ:ತೇಜಸ್ವಿನಿ
ಮಂಗಳೂರಿನಲ್ಲಿ ಮಳೆ ಅವಾಂತರ: ರಾಜಕಾಲುವೆಯ ತಡೆಗೋಡೆ ಕುಸಿದು ರಸ್ತೆ ಬಂದ್
ಮಂಗಳೂರಿನಲ್ಲಿ ಮಳೆ ಅವಾಂತರ: ರಾಜಕಾಲುವೆಯ ತಡೆಗೋಡೆ ಕುಸಿದು ರಸ್ತೆ ಬಂದ್
ಜಿಯೋ ಬಳಿಕ ಏರ್​ಟೆಲ್ ರೀಚಾರ್ಜ್ ಪ್ಲ್ಯಾನ್​ ಬೆಲೆಯಲ್ಲಿ ಹೆಚ್ಚಳ
ಜಿಯೋ ಬಳಿಕ ಏರ್​ಟೆಲ್ ರೀಚಾರ್ಜ್ ಪ್ಲ್ಯಾನ್​ ಬೆಲೆಯಲ್ಲಿ ಹೆಚ್ಚಳ
ಕಲರ್​ ಬಳಸಿದ್ದ ಕಬಾಬ್, ಚಿಕನ್ ತಂದೂರಿ, ಗೋಬಿ ಸೀಜ್ ಮಾಡಿದ ಅಧಿಕಾರಿಗಳು
ಕಲರ್​ ಬಳಸಿದ್ದ ಕಬಾಬ್, ಚಿಕನ್ ತಂದೂರಿ, ಗೋಬಿ ಸೀಜ್ ಮಾಡಿದ ಅಧಿಕಾರಿಗಳು
ಮುಳುಗಡೆಯಾಗಿರುವ ಸೇತುವೆ ಮೇಲೆ ಪ್ರಾಣದೊಂದಿಗೆ ಬೈಕರ್ಸ್ ಚೆಲ್ಲಾಟ
ಮುಳುಗಡೆಯಾಗಿರುವ ಸೇತುವೆ ಮೇಲೆ ಪ್ರಾಣದೊಂದಿಗೆ ಬೈಕರ್ಸ್ ಚೆಲ್ಲಾಟ