Fact Check: ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವಿಗೆ ಪಾಕ್ ಪಿಎಂ ಶೆಹಬಾಜ್ ಷರೀಫ್ ಅಭಿನಂದಿಸಿರುವ ಟ್ವೀಟ್ ಫೇಕ್

ಕರ್ನಾಟಕದಲ್ಲಿ ಚುನಾವಣೆ ಗೆದ್ದಿದ್ದಕ್ಕೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಕಾಂಗ್ರೆಸ್ ಅನ್ನು ಅಭಿನಂದಿಸಿದ್ದಾರೆ ಮತ್ತು ರಾಜ್ಯದಲ್ಲಿ ಇಸ್ಲಾಂ ಅನ್ನು ಬಲಪಡಿಸುವ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ಹೇಳುವ ಟ್ವೀಟ್​​ ವೈರಲ್ ಆಗಿದ್ದು ಇದು ಫೇಕ್.

Fact Check: ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವಿಗೆ ಪಾಕ್ ಪಿಎಂ ಶೆಹಬಾಜ್ ಷರೀಫ್ ಅಭಿನಂದಿಸಿರುವ ಟ್ವೀಟ್ ಫೇಕ್
ವೈರಲ್ ಆಗಿರುವ ಫೇಕ್ ಟ್ವೀಟ್
Follow us
ರಶ್ಮಿ ಕಲ್ಲಕಟ್ಟ
|

Updated on: May 15, 2023 | 10:11 PM

ಕರ್ನಾಟಕ ಚುನಾವಣೆಯಲ್ಲಿ (Karnataka Assembly Election) ಕಾಂಗ್ರೆಸ್ ಗೆದ್ದ ನಂತರ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ (Shehbaz Sharif) ಅವರು ಕಾಂಗ್ರೆಸ್ (Congress) ಪಕ್ಷವನ್ನು  ಅಭಿನಂದಿಸಿದ್ದಾರೆ ಎಂಬ ಟ್ವೀಟ್​​​ನ ಸ್ಕ್ರೀನ್​​ಶಾಟ್ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಶನಿವಾರ, ಮೇ 13 ರಂದು, ಕಾಂಗ್ರೆಸ್ ಕರ್ನಾಟಕದಲ್ಲಿ 135 ಸ್ಥಾನಗಳನ್ನು ಗೆದ್ದು ರಾಜ್ಯದಲ್ಲಿ ಸ್ಪಷ್ಟ ಬಹುಮತ ಸಾಧಿಸಿತ್ತು. ಈ ಚುನಾವಣೆಯಲ್ಲಿ ಬಿಜೆಪಿಗೆ 66 ಸ್ಥಾನಗಳು ಸಿಕ್ಕಿದ್ದವು. ಇದೆಲ್ಲದರ ನಡುವೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಕಾಂಗ್ರೆಸ್ ಅನ್ನು ಅಭಿನಂದಿಸಿದ್ದಾರೆ ಮತ್ತು ರಾಜ್ಯದಲ್ಲಿ ಇಸ್ಲಾಂ ಅನ್ನು ಬಲಪಡಿಸುವ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ತೋರಿಸುವ ನಕಲಿ ಟ್ವೀಟ್ ವೈರಲ್ ಆಗಿದೆ.

ವೈರಲ್ ಟ್ವೀಟ್​​ನಲ್ಲಿ ಏನಿದೆ?

ಕಾಂಗ್ರೆಸ್ ಅನ್ನು ಆಯ್ಕೆ ಮಾಡಿದ್ದಕ್ಕಾಗಿ ನಾನು ಕರ್ನಾಟಕದ ಜನರಿಗೆ ಹೃತ್ಪೂರ್ವಕವಾಗಿ ಧನ್ಯವಾದ ಹೇಳಲು ಬಯಸುತ್ತೇನೆ, ನಮ್ಮ ಎಸ್‌ಡಿಪಿಐ (Sustainable Development Policy Institute) ಜೊತೆಗೆ ಕಾಂಗ್ರೆಸ್ ಭಾರತದಲ್ಲಿ ಇಸ್ಲಾಂ ಧರ್ಮ ಮತ್ತು ಕರ್ನಾಟಕದ ಸಾರ್ವಭೌಮತ್ವವನ್ನು ಬಲಪಡಿಸಲು ಕೆಲಸ ಮಾಡುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ಇಂಗ್ಲಿಷ್ ನಲ್ಲಿದೆ. ಮೇ 13 ರಂದು ಉರ್ದು ಭಾಷೆಯಲ್ಲಿ ಶೆಹಬಾಜ್ ಮಾಡಿದರೆನ್ನಲಾದ ಟ್ವೀಟ್​​ನ ಭಾಷಾಂತರ ಇದು ಎಂದು ಹೇಳಲಾಗಿದೆ. ಕಾಂಗ್ರೆಸ್ ಅನ್ನು ಆಯ್ಕೆ ಮಾಡಿದ್ದಕ್ಕಾಗಿ ಕರ್ನಾಟಕದ ಜನರಿಗೆ ಪಾಕಿಸ್ತಾನದ ಪ್ರಧಾನಿ ಅಭಿನಂದನೆ ಎಂಬ ಬರಹದೊಂದಿಗೆ ಹಲವಾರು ನೆಟ್ಟಿಗರು ಇದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಮಾಡಿದ್ದಾರೆ.

ಫ್ಯಾಕ್ಟ್ ಚೆಕ್

ಈ ವೈರಲ್ ಟ್ವೀಟ್ ನ್ನು ಫ್ಯಾಕ್ಟ್ ಚೆಕ್ ಮಾಡಿದ ಬೂಮ್ ಇದು ನಕಲಿ ಟ್ವೀಟ್ ಎಂದು ಕಂಡುಹಿಡಿದಿದೆ. ಶೆಹಬಾಜ್ ಷರೀಫ್ ಅವರು ತಮ್ಮ ಕರ್ನಾಟಕದಲ್ಲಿ ಗೆದ್ದಿದ್ದಕ್ಕಾಗಿ ಕಾಂಗ್ರೆಸ್​​ಗೆ ಅಭಿನಂದನೆ ಸಲ್ಲಿಸಿಲ್ಲ. ಶೆಹಬಾಜ್ ಷರೀಫ್ ಅವರ ಟ್ವಿಟರ್ ಪ್ರೊಫೈಲ್​​ನಲ್ಲಿ ಮೇ 13ರಂದು ಅವರು ಕೇವಲ ಮೂರು ಟ್ವೀಟ್‌ಗಳನ್ನು ಮಾತ್ರ ಮಾಡಿದ್ದಾರೆ. ಅವುಗಳಲ್ಲಿ ಯಾವುದೂ ಕರ್ನಾಟಕ ಚುನಾವಣೆಗೆ ಸಂಬಂಧಿಸಿಲ್ಲ. ಇದಲ್ಲದೆ, ನಾವು ಮೇ 14 ರಂದು ಮಾಡಿದ ಅವರ ಪ್ರೊಫೈಲ್‌ನ ಆರ್ಕೈವ್ ಅನ್ನು ಸಹ ನೋಡಿದ್ದೇವೆ, ಅದರಲ್ಲಿಯೂ ಅಂಥಾ ಟ್ವೀಟ್ ಇರಲಿಲ್ಲ ಎಂದಿದೆ ಬೂಮ್.

ಪಾಕ್ ಪ್ರಧಾನಿ ಮೇ 13ರಂದು ಮಾಡಿದ ಟ್ವೀಟ್​​ಗಳಿವು

ಟ್ವಿಟರ್‌ಗಾಗಿ ಸಾಮಾಜಿಕ ಮಾಧ್ಯಮ ವಿಶ್ಲೇಷಣಾ ಸಾಧನವಾದ TruthNest ಅನ್ನು ಬಳಸುವ ಮೂಲಕ, ಮೇ 13 ರಂದು ಷರೀಫ್ ಅವರ ಖಾತೆಯಿಂದ ಕೇವಲ ಮೂರು ಟ್ವೀಟ್‌ಗಳನ್ನು ಮಾಡಲಾಗಿದೆ ಎಂದು ನಾವು ಖಚಿತಪಡಿಸಲು ಸಾಧ್ಯವಾಯಿತು.

Twitter ನ ಅಡ್ವಾನ್ಸ್ಡ್ ಸರ್ಚ್ ಬಳಸಿ ಯಾವುದಾದರೂ ಅಳಿಸಲಾದ ಟ್ವೀಟ್‌ಗಳಿಗೆ ನೀಡಿದ ರಿಪ್ಲೈ ಇದಾಗಿರಬಹುದೇ ಎಂದು ಹುಡುಕಿದಾಗಲೂ ಆ ರೀತಿಯ ಟ್ವೀಟ್ ಇಲ್ಲ. ಪಾಕ್ ಪ್ರಧಾನಿ ಕಾಂಗ್ರೆಸ್ ಅನ್ನು ಅಭಿನಂದಿಸುತ್ತಿರುವ ಬಗ್ಗೆ ಭಾರತ ಮತ್ತು ಪಾಕಿಸ್ತಾನದ ಮಾಧ್ಯಮಗಳಲ್ಲಿ ಯಾವುದೇ ವರದಿ ಕೂಡಾ ಪತ್ತೆಯಾಗಿಲ್ಲ. ಹಾಗಾಗಿ ಇದೊಂದು ತಿರುಚಿದ ಟ್ವೀಟ್ ಎಂಬುದು ಸ್ಪಷ್ಟವಾಗಿದೆ.

ಮತ್ತಷ್ಟು ಫ್ಯಾಕ್ಟ್ ಚೆಕ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ