Sumalatha Ambareesh: ರಾಜ್ಯ ರಾಜಕಾರಣಕ್ಕೆ ಸುಮಲತಾ ಅಂಬರೀಶ್ ಬರಲೇ ಬೇಕೆಂದು ಬೆಂಬಲಿಗರ ಸಭೆಯಲ್ಲಿ ತೀರ್ಮಾನ: ಯಾವ ಪಕ್ಷ, ಯಾವ ಕ್ಷೇತ್ರ?

ಮಂಡ್ಯದ ಕರ್ನಾಟಕ ಸಂಘದಲ್ಲಿ ನಡೆದ ಬೆಂಬಲಿಗರ ಸಭೆಯಲ್ಲಿ ರಾಜ್ಯ ರಾಜಕಾರಣಕ್ಕೆ ಸುಮಲತಾ ಅಂಬರೀಶ್ ಬರಲೇ ಬೇಕೆಂದು ತೀರ್ಮಾನಕೈಗೊಳ್ಳಲಾಗಿದೆ. ಆದ್ರೆ, ಯಾವ ಪಕ್ಷದಿಂದ? ಯಾವ ಕ್ಷೇತ್ರದಿಂದ ಎನ್ನುವ ಬಗ್ಗೆ ಅವರ ಬೆಂಬಲಿಗರು ತಮ್ಮ-ತಮ್ಮ ಅಭಿಪ್ರಾಯಗಳನ್ನು ಹೇಳಿದ್ದಾರೆ.

Sumalatha Ambareesh: ರಾಜ್ಯ ರಾಜಕಾರಣಕ್ಕೆ ಸುಮಲತಾ ಅಂಬರೀಶ್ ಬರಲೇ ಬೇಕೆಂದು ಬೆಂಬಲಿಗರ ಸಭೆಯಲ್ಲಿ ತೀರ್ಮಾನ: ಯಾವ ಪಕ್ಷ, ಯಾವ ಕ್ಷೇತ್ರ?
ಸುಮಲತಾ ಅಂಬರೀಶ್ (ಸಂಗ್ರಹ ಚಿತ್ರ)
Follow us
| Updated By: ರಮೇಶ್ ಬಿ. ಜವಳಗೇರಾ

Updated on:Jan 31, 2023 | 3:31 PM

ಮಂಡ್ಯ: ಕಳೆದ ಲೋಕಸಭಾ ಚುನಾವಣೆಯಲ್ಲಿ ಅಂದಿನ ಹಾಲಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಪುತ್ರನ ವಿರುದ್ಧ ಗೆದ್ದು ಭಾರೀ ಸದ್ದು ಮಾಡಿದ್ದ ಸಂಸದೆ ಸುಮಲತಾ ಅಂಬರೀಶ್ಅ (sumalatha Ambareesh) ವರ ಕಣ್ಣು ಇದೀಗ ರಾಜ್ಯ ರಾಜಕಾರಣದ (Karnataka Politics)ಮೇಲೆ ಬಿದ್ದಿದೆ. ಆದ್ರೆ, ಇನ್ನು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇಂದು(ಜನವರಿ 31) ಮಂಡ್ಯದಲ್ಲಿ (Mandya) ಸುಮಲತಾ ಅಂಬರೀಶ್ ಅವರ ಬೆಂಬಲಿಗರ ಸಭೆ ನಡೆಸಿದ್ದು, ಸಭೆಯಲ್ಲಿ ಸುಮಲತಾ ರಾಜ್ಯ ರಾಜಕಾರಣಕ್ಕೆ ಬರಲೇ ಬೇಕೆಂದು ನಿರ್ಣಯ ಕೈಗೊಂಡಿದ್ದಾರೆ. ಏಳು ವಿಧಾನಸಭಾ ಕ್ಷೇತ್ರದಿಂದ ಸಭೆಗೆ ಆಗಮಿಸಿದ್ದ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಸುಮಲತಾ ಅಂಬರೀಶ್ ಅವರು ರಾಜ್ಯ ರಾಜಕೀಯಕ್ಕೆ ಬರಲೇ ಬೇಕೆಂದು ಬಹುತೇಕ ಬೆಂಬಲಿಗರು ಒತ್ತಾಯಿಸಿದ್ದಾರೆ.

ಇಂದು ಮಂಡ್ಯದ ಕರ್ನಾಟಕ ಸಂಘದಲ್ಲಿ ನಡೆದ ಬೆಂಬಲಿಗರ ಸಭೆಯಲ್ಲಿ ಸುಮಲತಾ ಅಂಬರೀಶ್ ರಾಜ್ಯ ರಾಜಕೀಯಕ್ಕೆ ಬರಲೇ ಬೇಕೆಂದು ಅವರು ಬೆಂಬಲಿಗರು ಹಾಗೂ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಇದೇ ಸಭೆಯಲ್ಲಿ ಮದ್ದೂರು ಹಾಗೂ ಮಂಡ್ಯ ವಿಧಾನಸಭಾ ಕ್ಷೇತ್ರದಿಂದಲೇ ಸ್ಪರ್ಧಿಸಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇನ್ನು ಸುಮಲತಾ ಯಾವ ಪಕ್ಷದಿಂದ ಕಣಕ್ಕಳಿಯಬೇಕೆನ್ನುವ ಬಗ್ಗೆ ತಮ್ಮದೇ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದು., ಶೇಕಡ 50 ಪರ್ಸೆಂಟ್ ರಷ್ಟು ಜನರು ಸುಮಲತಾ ಕಾಂಗ್ರೆಸ್ ಸೇರಬೇಕೆಂದು​ ಅಭಿಪ್ರಾಯ ವ್ಯಕ್ತಪಡಿಸಿದ್ರೆ, ಇನ್ನುಳಿದ 50 ಪರ್ಸೆಂಟ್ ಬೆಂಬಲಿಗರು ಬಿಜೆಪಿ ಪರ ಬ್ಯಾಟ್ ಬೀಸಿದ್ದಾರೆ. ಇದರಿಂದ ಸುಮಲತಾ ಅಂಬರೀಶ್ ಅವರು ಒಂದು ವೇಳೆ ರಾಜ್ಯ ರಾಜಕಾರಣಕ್ಕೆ ಮರಳಿದರೆ ಯಾವ ಪಕ್ಷದಿಂದ ಕಣಕ್ಕಿಳಿಯುತ್ತಾರೆ ಎನ್ನುವುದು ತೀವ್ರ ಮೂಡಿಸಿದೆ.

ಪತಿ ಅಂಬರೀಶ್ ಪ್ರತಿನಿಧಿಸಿದ್ದ ಕ್ಷೇತ್ರದಿಂದ ಸ್ಪರ್ಧಿಸುತ್ತಾರಾ?

ಒಂದು ವೇಳೆ ವಿಧಾನಸಭೆಗೆ ಸುಮಲತಾ ಎಂಟ್ರಿಯಾದರೆ ಯಾವ ಕ್ಷೇತ್ರ ಆಯ್ಕೆ ಮಾಡ್ತಾರೆ ಎನ್ನುವುದು ತೀವ್ರ ಕುತೂಹಲ ಕೆರಳಿಸಿದೆ. ಹಾಗೇನಾದರೂ ಆದರೆ ಸುಮಲತಾ ಅವರ ಆಯ್ಕೆ ಮಂಡ್ಯ ಕ್ಷೇತ್ರ(Mandya Assembly Constituency) ಆಗಲಿದೆ ಎನ್ನುವ ಮಾತುಗಳು ಕೇಳಿ ಬರ್ತಿದೆ.‌ ಯಾಕೆಂದರೆ ಮಂಡ್ಯ ಕ್ಷೇತ್ರ ಸುಮಲತಾ ಅವರ ಪತಿ ಅಂಬರೀಶ್ ಪ್ರತಿನಿಧಿಸುತ್ತಿದ್ದ ಕ್ಷೇತ್ರ. ಹಾಗಾಗಿ ಆ ಕ್ಷೇತ್ರದಿಂದಲೇ ಸುಮಲತಾ ಕಣಕ್ಕಿಳಿತಾರೆ ಎನ್ನುವ ಲೆಕ್ಕಾಚಾರವಿದೆ. ಒಂದು ವೇಳೆ ಹಾಗೇನಾದರೂ ಆದರೆ ಮಂಡ್ಯ ಕ್ಷೇತ್ರ ಮತ್ತೆ ರಣರಣ ರಾಜಕೀಯಕ್ಕೆ ವೇದಿಕೆ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ.

ಯಾವ ಪಕ್ಷದಿಂದ ಕಣಕ್ಕಿಯಬಹುದು?

ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯ ಹಾಗೂ ಮೈಸೂರಿನಲ್ಲಿ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲು ಪಣತೊಟ್ಟಿರುವ ಕೇಸರಿ ಪಡೆ ಅನ್ಯ ಪಕ್ಷಗಳ ಪ್ರಮುಖರಿಗೆ ಗಾಳ ಹಾಕಿತ್ತಿದೆ. ಆ ಪಟ್ಟಿಯಲ್ಲಿ ಸುಮಲತಾ ಅಂಬರೀಶ್ ಅವರು ಸಹ ಇದ್ದಾರೆ. ಈಗಾಗಲೇ ಆರ್. ಅಶೋಕ್ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಸೇರಿದಂತೆ ಕೆಲ ಪ್ರಮುಖ ಬಿಜೆಪಿ ನಾಯಕರು ಸುಮಲತಾ ಅಂಬರೀಶ್ ಅವರ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಅಲ್ಲದೇ ಹೈಕಮಾಂಡ್ ನಾಯಕರ ಜೊತೆ ಒಂದು ಸುತ್ತಿನ ಮಾತುಕತೆ ಮುಗಿದಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಇನ್ನು ಇತ್ತ ಕಾಂಗ್ರೆಸ್​ ಸಹ ಸುಮಲತಾ ಅಂಬರೀಶ್ ಅವರು ಪಕ್ಷ ಬಂದರೆ ಅನುಕೂಲವಾಗಲಿದೆ ಎನ್ನುವ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರು ಕಾಂಗ್ರೆಸ್ ಟಿಕೆಟ್ ಕೇಳಿದ್ದರು. ಆದ್ರೆ, ಜೆಡಿಎಸ್​ನೊಂದಿಗೆ ಮೈತ್ರಿ ಮಾಡಿಕೊಂಡಿದ್ದರಿಂದ ಮಂಡ್ಯ ಲೋಕಸಭೆ ಟಿಕೆಟ್​​ ಜೆಡಿಎಸ್​ಗೆ ಬಿಟ್ಟು ಕೊಟ್ಟಿತ್ತು. ಅಲ್ಲದೇ ಬೆಂಗಳೂರಿನಲ್ಲಿ ನಿಲ್ಲುವಂತೆ ಸುಮಲತಾ ಅಂಬರೀಶ್ ಅವರಿಗೆ ಡಿಕೆ ಶಿವಕುಮಾರ್ ಆಫರ್ ನೀಡಿದ್ದರು. ಆದ್ರೆ, ಅದನ್ನು ಸುಮಲತಾ ಅಂಬರೀಶ್ ಅವರು ತಿರಸ್ಕರಿಸಿ ಮಂಡ್ಯದಲ್ಲೇ ಪಕ್ಷೇತರ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಸ್ಪರ್ಧಿಸಿ ಅಭೂತಪೂರ್ವವಾಗಿ ಗೆಲುವು ಸಾಧಿಸಿದ್ದರು. ಸುಮಲತಾ ಅಂಬರೀಶ್ ಅವರಿಗೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಬೆಂಬಲಿಸಿದ್ದು ವಿಶೇಷವಾಗಿತ್ತು. ಇದೀಗ ಸುಮಲತಾ ಅಂಬರೀಶ್ ಅವರು ಒಂದು ವೇಳೆ ರಾಜ್ಯ ರಾಜಕಾರಣ ಪ್ರವೇಶ ಮಾಡಿದರೆ ಯಾವ ಪಕ್ಷದಿಂದ ಕಣಕ್ಕಳಿಯುತ್ತಾರೆ ಎನ್ನುವುದೇ ಕುತೂಹಲ. ಇನ್ನು ಲೋಕಸಭೆಯಂತೆ ಚುನಾವಣೆಯಂತೆ 2023ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲೂ ಸಹ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದರೂ ಅಚ್ಚರಿ ಪಡಬೇಕಿಲ್ಲ.

Published On - 3:28 pm, Tue, 31 January 23

ಬುಡಕಟ್ಟು ಜನರೊಂದಿಗೆ ನೃತ್ಯ ಮಾಡಿದ ಸಿಎಂ ಸಿದ್ದರಾಮಯ್ಯ
ಬುಡಕಟ್ಟು ಜನರೊಂದಿಗೆ ನೃತ್ಯ ಮಾಡಿದ ಸಿಎಂ ಸಿದ್ದರಾಮಯ್ಯ
ಊಟ ಮಾಡುವಾಗ ಅರ್ಧಕ್ಕೆ ಎದ್ದು ಹೋಗಬಾರದು ಯಾಕೆ? ವಿಡಿಯೋ ನೋಡಿ
ಊಟ ಮಾಡುವಾಗ ಅರ್ಧಕ್ಕೆ ಎದ್ದು ಹೋಗಬಾರದು ಯಾಕೆ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭ ಫಲವಿದೆ
Nithya Bhavishya: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭ ಫಲವಿದೆ
ತಮಿಳು, ತೆಲುಗಿನಲ್ಲೂ ಶಿವರಾಜ್​ಕುಮಾರ್ ಬ್ಯುಸಿ; ಇಲ್ಲಿದೆ ಮಾಹಿತಿ..
ತಮಿಳು, ತೆಲುಗಿನಲ್ಲೂ ಶಿವರಾಜ್​ಕುಮಾರ್ ಬ್ಯುಸಿ; ಇಲ್ಲಿದೆ ಮಾಹಿತಿ..
ಶಿವರಾಜ್​ಕುಮಾರ್​ ಆರೋಗ್ಯ ಸಮಸ್ಯೆ; ಕರೆ ಮಾಡಿ ವಿಚಾರಿಸಿದ ಯಶ್, ಸುದೀಪ್
ಶಿವರಾಜ್​ಕುಮಾರ್​ ಆರೋಗ್ಯ ಸಮಸ್ಯೆ; ಕರೆ ಮಾಡಿ ವಿಚಾರಿಸಿದ ಯಶ್, ಸುದೀಪ್
ಕೆರೆ ಹಾಡಿಯ ಪಡಸಾಲೆಯಲ್ಲಿ ಕುಳಿತು ಜನದ ಸಮಸ್ಯೆ ಆಲಿಸಿದ ಸಿದ್ದರಾಮಯ್ಯ
ಕೆರೆ ಹಾಡಿಯ ಪಡಸಾಲೆಯಲ್ಲಿ ಕುಳಿತು ಜನದ ಸಮಸ್ಯೆ ಆಲಿಸಿದ ಸಿದ್ದರಾಮಯ್ಯ
ಜನಾಂಗೀಯ ನಿಂದನೆಯಾಗಿದೆ ಅಂತ ಕುಮಾರಸ್ವಾಮಿ ಯಾಕೆ ದೂರು ನೀಡಿಲ್ಲ? ಶಿವಕುಮಾರ್
ಜನಾಂಗೀಯ ನಿಂದನೆಯಾಗಿದೆ ಅಂತ ಕುಮಾರಸ್ವಾಮಿ ಯಾಕೆ ದೂರು ನೀಡಿಲ್ಲ? ಶಿವಕುಮಾರ್
ಜಮೀರ್ ಅಹ್ಮದ್​​ರನ್ನು ಸೃಷ್ಟಿ ಮಾಡಿದ್ದೇ ದೇವೇಗೌಡರ ಕುಟುಂಬ: ವಿ ಸೋಮಣ್ಣ
ಜಮೀರ್ ಅಹ್ಮದ್​​ರನ್ನು ಸೃಷ್ಟಿ ಮಾಡಿದ್ದೇ ದೇವೇಗೌಡರ ಕುಟುಂಬ: ವಿ ಸೋಮಣ್ಣ
ಹನುಮಂತನ ಪಂಚೆ ಧರಿಸಿದ ಗೌತಮಿ ಜಾದವ್; ಬಟ್ಟೆ ಮಹಿಮೆಯಿಂದ ಬದಲಾಯ್ತು ವರ್ತನೆ
ಹನುಮಂತನ ಪಂಚೆ ಧರಿಸಿದ ಗೌತಮಿ ಜಾದವ್; ಬಟ್ಟೆ ಮಹಿಮೆಯಿಂದ ಬದಲಾಯ್ತು ವರ್ತನೆ
ಸಿದ್ದರಾಮಯ್ಯ ವಿರುದ್ಧ ಯಾವತ್ತೂ ವೈಯಕ್ತಿಕ ಟೀಕೆ ಮಾಡಿಲ್ಲ: ಎ ಮಂಜು
ಸಿದ್ದರಾಮಯ್ಯ ವಿರುದ್ಧ ಯಾವತ್ತೂ ವೈಯಕ್ತಿಕ ಟೀಕೆ ಮಾಡಿಲ್ಲ: ಎ ಮಂಜು