AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜರಾಜೇಶ್ವರಿ ಕ್ಷೇತ್ರದಲ್ಲಿ ಬಿಜೆಪಿ-ಕಾಂಗ್ರೆಸ್​ ಕಾರ್ಯಕರ್ತರ ಗಲಾಟೆ: 11ಜನರ ವಿರುದ್ಧ ಕೇಸ್​ ದಾಖಲು

ರಾಜರಾಜೇಶ್ವರಿ ವಿಧಾಸಭಾ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಗಲಾಟೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಶವಂತಪುರ ಠಾಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರವಾಗಿ ಚಂದ್ರಪ್ಪ ಜಿಗಳಿ ಎಂಬುವರು ಪ್ರಕರಣ ದಾಖಲಿಸಿದ್ದಾರೆ.

ರಾಜರಾಜೇಶ್ವರಿ ಕ್ಷೇತ್ರದಲ್ಲಿ ಬಿಜೆಪಿ-ಕಾಂಗ್ರೆಸ್​ ಕಾರ್ಯಕರ್ತರ ಗಲಾಟೆ: 11ಜನರ ವಿರುದ್ಧ ಕೇಸ್​ ದಾಖಲು
ಎಫ್​ಐಆರ್
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:May 07, 2023 | 1:53 PM

Share

ಬೆಂಗಳೂರು: ರಾಜರಾಜೇಶ್ವರಿ ವಿಧಾಸಭಾ ಕ್ಷೇತ್ರದಲ್ಲಿ (Rajarajeshwari Assembly Election 2023) ಬಿಜೆಪಿ (BJP), ಕಾಂಗ್ರೆಸ್ (Congress)​ ಕಾರ್ಯಕರ್ತರ ನಡುವೆ ಗಲಾಟೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಶವಂತಪುರ ಠಾಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರವಾಗಿ ಚಂದ್ರಪ್ಪ ಜಿಗಳಿ ಎಂಬುವರು ಪ್ರಕರಣ ದಾಖಲಿಸಿದ್ದಾರೆ. ಮಾಜಿ ಕಾರ್ಪೊರೇಟರ್​ ಜಿ.ಕೆ.ವೆಂಕಟೇಶ್​ ಸೇರಿ 11 ಜನರ ವಿರುದ್ಧ ಐಪಿಸಿ ಸೆಕ್ಷನ್​ 354B, 341, 149, 392, 323ರಡಿ ಪ್ರಕರಣ ದಾಖಲಾಗಿದೆ.

ಬೆಂಗಳೂರಲ್ಲಿ ಬಿಜೆಪಿ-ಕಾಂಗ್ರೆಸ್​ ಕಾರ್ಯಕರ್ತರ ಗಲಾಟೆ

ನಿನ್ನೆ (ಮೇ.06) ರಂದು ಯಶವಂತಪುರ ವಾರ್ಡ್​ನಲ್ಲಿ ಕಾಂಗ್ರೆಸ್​ ಮಹಿಳಾ ಘಟಕ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಪ್ರಚಾರಕ್ಕೆ ಜಿ.ಕೆ.ವೆಂಕಟೇಶ್ ಮತ್ತು ಬೆಂಬಲಿಗರು ಅಡ್ಡಿಪಡಿಸಿ ಹಲ್ಲೆ ಮಾಡಿ ಕಾರ್ಯಕರ್ತೆಯರಿಗೆ ನಿಂದಿಸಿ ಚಿನ್ನದ ಸರ​, ಮೊಬೈಲ್ ಕಸಿದುಕೊಂಡಿದ್ದಾರೆಂಬ ಆರೋಪ ಕೇಳಿಬಂದಿತ್ತು. ಈ ವಿಚಾರವಾಗಿ ಕಾಂಗ್ರೆಸ್​ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಕಾಂಗ್ರೆಸ್​ ಅಭ್ಯರ್ಥಿ ಕುಸುಮಾರನ್ನು ಪುರುಷ ಪೊಲೀಸ್​ ಸಿಬ್ಬಂದಿ ತಳ್ಳಾಡಿದ್ದಾರೆ ಎನ್ನಲಾಗಿತ್ತು.

ಇದನ್ನೂ ಓದಿ: ಹೇಗಿತ್ತು ಪ್ರಧಾನಿ ಮೋದಿ ಬೆಂಗಳೂರು ರೋಡ್​ ಶೋ: ಇಲ್ಲಿದೆ ಚಿತ್ರಣ

ಕುಸುಮಾರನ್ನು ಡಿಸಿಪಿ ತಳ್ಳಿದ್ದಾರೆಂದು ಕಾಂಗ್ರೆಸ್​ ಕಾರ್ಯಕರ್ತರು ಆರೋಪ ಮಾಡಿದ್ದು, ಯಶವಂತಪುರ ಠಾಣೆ ಎದುರು ಕಾಂಗ್ರೆಸ್​ ಕಾರ್ಯಕರ್ತರು ಜಮಾವಣೆಗೊಂಡಿದ್ದರು. ಪೊಲೀಸರು ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆಂದು ಆರೋಪಿಸಿ ಧರಣಿ ಮಾಡಲಾಗಿತ್ತು. ಕಾಂಗ್ರೆಸ್​ ಕಾರ್ಯಕರ್ತರು ಮನೆಮನೆಗೆ ತೆರಳಿ ಚೀಟಿ ಹಂಚಿಕೆ ಮಾಡುತ್ತಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದರು.

ಈ ವೇಳೆ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರನ್ನು ಚದುರಿಸಲು ಲಾಠಿ ಬೀಸಿದ್ದರು. ಅಭ್ಯರ್ಥಿ ಕುಸುಮಾ ಸೇರಿದಂತೆ ಎಲ್ಲರನ್ನೂ ಪೊಲೀಸರು ಚದುರಿಸಿದ್ದರು. ಪೊಲೀಸರ ಜತೆ ಸೇರಿ ಬಿಜೆಪಿ ಕಾರ್ಯಕರ್ತರು ಹಲ್ಲೆಮಾಡಿರುವುದಾಗಿ ಕಾಂಗ್ರೆಸ್​ ಆರೋಪಿಸಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:51 pm, Sun, 7 May 23

Follow Us
ವಿವೇಕ ಬಿರಾದಾರ
ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?