ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿರುದ್ಧ ಎಫ್ಐಆರ್ ದಾಖಲು
ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡದಂತೆ ಮಹಿಳೆಗೆ ಬೆದರಿಕೆ ಹಾಕಿರುವ ಆರೋಪ ಸಂಬಂಧ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿರುದ್ಧ ಹೆಬ್ಬಾಳ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಬೆಂಗಳೂರು: ಕಾಂಗ್ರೆಸ್ (Congress) ಅಭ್ಯರ್ಥಿ ಪರ ಪ್ರಚಾರ ಮಾಡದಂತೆ ಮಹಿಳೆಗೆ ಬೆದರಿಕೆ ಹಾಕಿರುವ ಆರೋಪ ಸಂಬಂಧ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು (Katta Subramanya Naidu) ಸೇರಿದಂತೆ ಮೂವರ ವಿರುದ್ಧ ಹೆಬ್ಬಾಳ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದೆ. ರಾಣಿ ವೆಂಕಟರಮಣ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದರು. ಇದೇ ಕಾರಣಕ್ಕೆ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸೇರಿದಂತೆ ಇತರರು ಅನುಮತಿ ಇಲ್ಲದೆ ನಿವಾಸಕ್ಕೆ ನುಗ್ಗಿ ಧಮ್ಕಿ ಹಾಕಿದ್ದಾಗಿ ರಾಣಿ ವೆಂಕಟರಮಣ ಆರೋಪಿಸಿದ್ದಾರೆ. ಸದ್ಯ ಅವರು ನೀಡಿದ ದೂರಿನ ಅನ್ವಯ ಪೊಲೀಸರು ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಅಭಯರಾಜು, ಪುನೀತ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ