ಬಿಜೆಪಿಯವರು ವಿಷಜಂತುಗಳು ಎಂದ ಮಾಜಿ ಸಚಿವೆ, ನಟಿ ಉಮಾಶ್ರೀ ವಿರುದ್ಧ ಎಫ್​ಐಆರ್

ಬಿಜೆಪಿಯವರು ವಿಷಜಂತುಗಳು ಎಂದು ಹೇಳಿದ್ದ ಮಾಜಿ ಸಚಿವೆ, ನಟಿ ಉಮಾಶ್ರೀ ವಿರುದ್ಧ ರಾಯಚೂರು ಜಿಲ್ಲೆ ಮಸ್ಕಿ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ.

ಬಿಜೆಪಿಯವರು ವಿಷಜಂತುಗಳು ಎಂದ ಮಾಜಿ ಸಚಿವೆ, ನಟಿ ಉಮಾಶ್ರೀ ವಿರುದ್ಧ ಎಫ್​ಐಆರ್
ಮಾಜಿ ಸಚಿವೆ, ನಟಿ ಉಮಾಶ್ರೀ
Follow us
|

Updated on: May 07, 2023 | 12:31 PM

ರಾಯಚೂರು: ಬಿಜೆಪಿಯವರು ವಿಷಜಂತುಗಳು ಎಂದು ಹೇಳಿದ್ದ ಮಾಜಿ ಸಚಿವೆ, ನಟಿ ಉಮಾಶ್ರೀ(Umashree) ವಿರುದ್ಧ ರಾಯಚೂರು ಜಿಲ್ಲೆ ಮಸ್ಕಿ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್(FIR) ದಾಖಲಾಗಿದೆ. ಏ.28ರಂದು‌ ಮಸ್ಕಿ ಪಟ್ಟಣದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಅಧ್ಯಕ್ಷತೆಯಲ್ಲಿ ನಡೆದಿದ್ದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಉಮಾಶ್ರೀಯವರು ಬಿಜೆಪಿ ಮುಖಂಡರು ವಿಷ ಜಂತುಗಳೆಂದು ಕಿಡಿಕಾರಿದ್ದರು. ಬಿಜೆಪಿ ಮುಖಂಡರು ಧರ್ಮವನ್ನು ಒಡೆದು, ಕೋಮುವಾದ ಸೃಷ್ಟಿಸಿ ಬೆಂಕಿ ಹಚ್ಚುವಂಥವರು ಅನ್ನೋ‌ ಆರೋಪ ಮಾಡಿದ್ದರು. ಇದೇ ವಿಚಾರಗಳ ಆಧಾರದಲ್ಲಿ ಮಾಜಿ ಸಚಿವೆ ಉಮಾಶ್ರೀ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಡಿಕೆ ಶಿವಕುಮಾರ್​ಗೆ ನೋಟಿಸ್ ಜಾರಿ

ಇನ್ನು ಮತ್ತೊಂದೆಡೆ ಕಾಂಗ್ರೆಸ್ ಪಕ್ಷದ ಜಾಹಿರಾತನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದ್ದು ನೀತಿ ಸಂಹಿತೆ ಉಲ್ಲಂಘನೆ ದೂರಿನ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಗೆ ನೋಟಿಸ್ ಜಾರಿಗೊಳಿಸಿದೆ. ಕಾಂಗ್ರೆಸ್ ಮಾಡಿರುವ ನಿರ್ದಿಷ್ಟ ಆರೋಪಗಳ ಕುರಿತಾಗಿ ಸಾಕ್ಷ್ಯಾಧಾರ ಹಾಜರುಪಡಿಸುವಂತೆ ಚುನಾವಣಾ ಆಯೋಗ ತಾಕೀತು ಮಾಡಿದೆ.

ಇದನ್ನೂ ಓದಿ: KSTDC: ಮತದಾನ ದಿನದಂದು ‘ಮಯೂರ’ ಹೋಟೆಲ್‌ಗಳಲ್ಲಿ ತಂಗಲು 50% ವಿಶೇಷ ರಿಯಾಯಿತಿ

ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಮೂರೇ ದಿನ ಬಾಕಿ ಉಳಿದಿದೆ. ಈ ನಡುವೆ ಆಡಳಿತ ಪಕ್ಷ ಬಿಜೆಪಿ ವಿರುದ್ಧ ಕಾಂಗ್ರೆಸ್ ನೀಡಿರುವ ಜಾಹಿರಾತು ಬಿಜೆಪಿಯ ಕೆಂಗಣ್ಣಿಗೆ ಗುರಿಯಾಗಿದೆ. ಅಲ್ಲದೇ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಕೂಡಾ ಜಾಹಿರಾತನ್ನು ಗಂಭೀರವಾಗಿ ಪರಿಗಣಿಸಿದೆ. ಪ್ರಜಾ ಪ್ರಾತಿನಿಧ್ಯ ಕಾಯ್ದೆ ಸೆಕ್ಷನ್ 123(4), ಐಪಿಸಿ ಸೆಕ್ಷನ್ 171 ಜಿ ಅಡಿ ಅಪರಾಧವಾಗಿದೆ. ಕಾಂಗ್ರೆಸ್ ಪಕ್ಷದ ಜಾಹೀರಾತಿನಲ್ಲಿನ ನಿರ್ದಿಷ್ಟ ಭ್ರಷ್ಟಾಚಾರ ಆರೋಪಗಳು ಚುನಾವಣೆ ಪ್ರಕ್ರಿಯೆ ಮೇಲೂ ಪರಿಣಾಮ ಬೀರಬಹುದಾದ ಕಾರಣ ಭ್ರಷ್ಟಾಚಾರ ಆರೋಪಗಳಿಗೆ ಸಾಕ್ಷ್ಯಾಧಾರ ಒದಗಿಸುವಂತೆ ಚುನಾವಣಾ ಆಯೋಗ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಗೆ ನೋಟಿಸ್ ಜಾರಿಗೊಳಿಸಿದೆ.

ರಾಜ್ಯ ವಿಧಾನಸಭಾ ಚುನಾವಣೆ ಸಂಬಂಧ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ