ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ರಾಷ್ಟ್ರೀಯ ಯುವ ಕಾಂಗ್ರೆಸ್​ ಅಧ್ಯಕ್ಷ ಶ್ರೀನಿವಾಸ್ ವಿರುದ್ಧ ಎಫ್​ಐಆರ್ ದಾಖಲು

|

Updated on: Apr 24, 2023 | 9:13 AM

ರಾಷ್ಟ್ರೀಯ ಯುವ ಕಾಂಗ್ರೆಸ್​ ಅಧ್ಯಕ್ಷ ಶ್ರೀನಿವಾಸ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ

ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ರಾಷ್ಟ್ರೀಯ ಯುವ ಕಾಂಗ್ರೆಸ್​ ಅಧ್ಯಕ್ಷ ಶ್ರೀನಿವಾಸ್ ವಿರುದ್ಧ ಎಫ್​ಐಆರ್ ದಾಖಲು
ರಾಷ್ಟ್ರೀಯ ಯುವ ಕಾಂಗ್ರೆಸ್​ ಅಧ್ಯಕ್ಷ ಶ್ರೀನಿವಾಸ್
Follow us on

ಬೆಂಗಳೂರು: ಚುನಾವಣಾ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಹಿನ್ನೆಲೆ ರಾಷ್ಟ್ರೀಯ ಯುವ ಕಾಂಗ್ರೆಸ್​ ಅಧ್ಯಕ್ಷ ಶ್ರೀನಿವಾಸ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಏಪ್ರಿಲ್ 23 ರಂದು ರ್ಯಾಡಿಸನ್ ಬ್ಲೂ ಹೋಟೆಲ್​ನಲ್ಲಿ ಶ್ರೀನಿವಾಸ್ ಅವರು ಸಭೆ ನಡೆದುತ್ತಿದ್ದ ವೇಳೆ ಚುನಾವಣಾ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು ಚುನಾವಣಾ ಅಧಿಕಾರಿಗಳ ಕೆಲಸಕ್ಕೆ ಅಡ್ಡಿಪಡಿಸಿದ್ದಾರೆ. ದಾಳಿ ವೇಳೆ ಸಹಕರಿಸದೇ ಎಸ್​ಟಿಎಫ್ ಅಧಿಕಾರಿಗಳ ವಿರುದ್ಧ ವಾಗ್ವಾದ ಮಾಡಿದ್ದಾರೆ. ಹೀಗಾಗಿ ಅಧಿಕಾರಿಗಳು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕಿರುಕುಳ ಆರೋಪ ಎದುರಿಸುತ್ತಿರುವ ಶ್ರೀನಿವಾಸ್

ನಿನ್ನೆ ಅಷ್ಟೇ ಕಾಂಗ್ರೆಸ್​ ಪಕ್ಷದ ಯುವ ಘಟಕದ ರಾಷ್ಟ್ರಾಧ್ಯಕ್ಷ ಬಿ.ವಿ. ಶ್ರೀನಿವಾಸ್ ಅವರ ನಿವಾಸವನ್ನು ಹುಡುಕಿಕೊಂಡು ಅಸ್ಸಾಂ ಪೊಲೀಸರು ಬೆಂಗಳೂರಿಗೆ ಆಗಮಿಸಿದ್ದರು. ಶ್ರೀನಿವಾಸ್ ಪೊಲೀಸರ ಕೈಗೆ ಸಿಗದ ಕಾರಣ ಮನೆ ಬಾಗಿಲಿಗೆ ನೋಟಿಸ್​ ಅಂಟಿಸಿ ತೆರಳಿದ್ರು. ಇದರ ನಡುವೆ ಈಗ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಶ್ರೀನಿವಾಸ್ ಕಿರುಕುಳ ನೀಡಿದ್ದಾರೆ ಎಂದು ಅಸ್ಸಾಂ ಯುವ ಕಾಂಗ್ರೆಸ್ ಅಧ್ಯಕ್ಷೆ ಅಂಕಿತಾ ಆರೋಪ ಮಾಡಿದ್ದು ಈ ಕುರಿತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಅವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ನಾನು ಸೋತರೆ ಊರು ಬಿಡಿಸ್ತಾರೆ, ನನ್ನ ಕೈ ಬಿಡಬೇಡಿ; ಭಾವನಾತ್ಮಕವಾಗಿ ಮತಭೇಟೆಗಿಳಿದ ಪ್ರೀತಂಗೌಡ

ಈ ಕುರಿತು ಸರಣಿ ಟ್ವೀಟ್ ಮಾಡಿದ್ದ ಅವರು, ಶ್ರೀನಿವಾಸ್ ಬಿವಿ ಅವರು ಸತತವಾಗಿ ನನಗೆ ಕಿರುಕುಳ ನೀಡಿದ್ದಾರೆ. ಲಿಂಗ ತಾರತಮ್ಯ ಮಾಡಿದ್ದಾರೆ, ಹೆಣ್ಣು ಎಂಬ ಕಾರಣಕ್ಕೆ ನನಗೆ ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಅಂಕಿತಾ ದೂರಿದ್ದಾರೆ. ನೀವು ಓಡ್ಕಾ ಕುಡಿಯುತ್ತೀರಾ ಎಂದು ವ್ಯಂಗ್ಯವಾಗಿ ಪ್ರಶ್ನೆಗಳನ್ನು ಕೇಳಿದ್ದಾಗಿ ಹೇಳಿಕೊಂಡಿದ್ದರು.

ಗುವಾಹಟಿಯ ಐಪಿಎಸ್ ಅಧಿಕಾರಿ ಪ್ರತೀಕ್ ಖುದ್ದು ಆಗಮಿಸಿದ್ದಾರೆ. ಅಸ್ಸಾಂನ ಪೊಲೀಸರು ಬಸವೇಶ್ವರನಗರದಲ್ಲಿರುವ ನಿವಾಸಕ್ಕೆ ಬೆಂಗಳೂರು ನಗರ ಪೊಲೀಸರ ಸಹಾಯದಿಂದ ಬಂಧಿಸಲು ಆಗಮಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿತ್ತು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:07 am, Mon, 24 April 23