DK Shivakumar: ಚುನಾವಣೆ ಹೊಸ್ತಿಲಲ್ಲೇ ಡಿಕೆ ಶಿವಕುಮಾರ್​ಗೆ ಎದುರಾಯ್ತು ಸಂಕಷ್ಟ!

ಕರ್ನಾಟಕ ವಿಧಾನಸಭೆ ಚುನಾವಣೆ ರಂಗೇರಿದೆ. ಇದರ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ ಸಂಕಷ್ಟ ಎದುರಾಗಿದೆ.

DK Shivakumar: ಚುನಾವಣೆ ಹೊಸ್ತಿಲಲ್ಲೇ ಡಿಕೆ ಶಿವಕುಮಾರ್​ಗೆ ಎದುರಾಯ್ತು ಸಂಕಷ್ಟ!
ಡಿಕೆ ಶಿವಕುಮಾರ್
Follow us
ರಮೇಶ್ ಬಿ. ಜವಳಗೇರಾ
|

Updated on:Apr 04, 2023 | 9:53 AM

ಮಂಡ್ಯ: ಪ್ರಜಾಧ್ವನಿ ಯಾತ್ರೆ (congress praja dhwani yatra) ವೇಳೆ ಕಲಾವಿದರ ಮೇಲೆ 500 ರೂಪಾಯಿ ನೋಟಿನ ಕಂತೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(DK SHivakumar)​ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಡಿಕೆ ಶಿವಕುಮಾರ್​​ ವಿರುದ್ಧ ಮಂಡ್ಯ ಗ್ರಾಮಾಂತರ ಪೊಲೀಸ್ (Mandya Rural Police Station) ಠಾಣೆಯಲ್ಲಿ ಐಪಿಸಿ ಸೆಕ್ಷನ್ 1860 u/s 17 E ಆರ್​ಪಿ ಆಕ್ಟ್ ಪ್ರಕಾರ ಎಫ್​ಐಆರ್​ ದಾಖಲಾಗಿದೆ. ಟಿವಿ9 ವರದಿ ಬಳಿಕ ಚುನಾವಣಾ ಸೆಕ್ಟರ್ ಅಧಿಕಾರಿಯಿಂದ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದೂರು ದಾಖಲಲಾಗಿತ್ತು. ಪ್ರಕರಣದ ತನಿಖೆ ನಡೆಸುವಂತೆ ನ್ಯಾಯಾಲಯ ಆದೇಶಿಸಿದ್ದು, ಅದರಂತೆ ಮಂಡ್ಯ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Prajadhvani Yatre: ದೇವರು ಹೊತ್ತು ಕುಣಿಯುತ್ತಿದ್ದ ಜನರ ಮೇಲೆ ಹಣ ಎಸೆದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಮಾರ್ಚ್ 28ರಂದು ಶ್ರೀರಂಗಪಟ್ಟಣ ವಿಧಾನಸಭೆ ಕ್ಷೇತ್ರದ ಬೇವಿನಹಳ್ಳಿ ಗ್ರಾಮದಲ್ಲಿ ಪ್ರಜಾಧ್ವನಿ ಯಾತ್ರೆ ಕೈಗೊಂಡಿದ್ದರು. ಆ ವೇಳೆ ಬಸ್​ ಮೇಲಿಂದ ಕಲಾವಿದರತ್ತ 500 ರೂ. ನೋಟುಗಳನ್ನು ಎಸೆದಿದ್ದರು. ಬಳಿಕ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಸೆಕ್ಟರ್ ಆಫೀಸರ್​ ದೂರು ನೀಡಿದ್ದರು. ಇದೀಗ ನ್ಯಾಯಾಲಯದ ಆದೇಶದಂತೆ ನಿನ್ನೆ(ಏಪ್ರಿಲ್ 03) ಡಿಕೆ ಶಿವಕುಮಾರ್​ ವಿರುದ್ದ ಎಫ್‌ಐ‌ಆರ್ ದಾಖಲಾಗಿದ್ದು, ಈ ಬಾರಿಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಅವರಿಗೆ ಮೊದಲ ಸಂಕಷ್ಟ ಎದುರಾಗಿದೆ.

ಕರ್ನಾಟಕ ಅಸೆಂಬ್ಲಿ ಚುನಾವಣೆ ಕುರಿತಾದ ತಾಜಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:51 am, Tue, 4 April 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ