ಮಂಡ್ಯ: ಪ್ರಜಾಧ್ವನಿ ಯಾತ್ರೆ (congress praja dhwani yatra) ವೇಳೆ ಕಲಾವಿದರ ಮೇಲೆ 500 ರೂಪಾಯಿ ನೋಟಿನ ಕಂತೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(DK SHivakumar) ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಮಂಡ್ಯ ಗ್ರಾಮಾಂತರ ಪೊಲೀಸ್ (Mandya Rural Police Station) ಠಾಣೆಯಲ್ಲಿ ಐಪಿಸಿ ಸೆಕ್ಷನ್ 1860 u/s 17 E ಆರ್ಪಿ ಆಕ್ಟ್ ಪ್ರಕಾರ ಎಫ್‌ಐಆರ್ ದಾಖಲಾಗಿದೆ. ಟಿವಿ9 ವರದಿ ಬಳಿಕ ಚುನಾವಣಾ ಸೆಕ್ಟರ್ ಅಧಿಕಾರಿಯಿಂದ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದೂರು ದಾಖಲಲಾಗಿತ್ತು. ಪ್ರಕರಣದ ತನಿಖೆ ನಡೆಸುವಂತೆ ನ್ಯಾಯಾಲಯ ಆದೇಶಿಸಿದ್ದು, ಅದರಂತೆ ಮಂಡ್ಯ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಾರ್ಚ್ 28ರಂದು ಶ್ರೀರಂಗಪಟ್ಟಣ ವಿಧಾನಸಭೆ ಕ್ಷೇತ್ರದ ಬೇವಿನಹಳ್ಳಿ ಗ್ರಾಮದಲ್ಲಿ ಪ್ರಜಾಧ್ವನಿ ಯಾತ್ರೆ ಕೈಗೊಂಡಿದ್ದರು. ಆ ವೇಳೆ ಬಸ್ ಮೇಲಿಂದ ಕಲಾವಿದರತ್ತ 500 ರೂ. ನೋಟುಗಳನ್ನು ಎಸೆದಿದ್ದರು. ಬಳಿಕ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಸೆಕ್ಟರ್ ಆಫೀಸರ್ ದೂರು ನೀಡಿದ್ದರು. ಇದೀಗ ನ್ಯಾಯಾಲಯದ ಆದೇಶದಂತೆ ನಿನ್ನೆ(ಏಪ್ರಿಲ್ 03) ಡಿಕೆ ಶಿವಕುಮಾರ್ ವಿರುದ್ದ ಎಫ್‌ಐಆರ್ ದಾಖಲಾಗಿದ್ದು, ಈ ಬಾರಿಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಅವರಿಗೆ ಮೊದಲ ಸಂಕಷ್ಟ ಎದುರಾಗಿದೆ.
ಕರ್ನಾಟಕ ಅಸೆಂಬ್ಲಿ ಚುನಾವಣೆ ಕುರಿತಾದ ತಾಜಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:51 am, Tue, 4 April 23