ಐಟಿ ದಾಳಿ ವೇಳೆ ನಿವಾಸದಲ್ಲಿ ವೋಟರ್ ಐಡಿ ಪತ್ತೆ; ಕೆಜಿಎಫ್ ಬಾಬು ವಿರುದ್ಧ ಎಫ್‌ಐಆರ್ ದಾಖಲು
ಐಟಿ ದಾಳಿ ವೇಳೆ ಕೆಜಿಎಫ್ ಬಾಬು ನಿವಾಸದಲ್ಲಿ ಸಾವಿರಕ್ಕೂ ಹೆಚ್ಚು ವೋಟರ್ ಐಡಿಗಳು ಪತ್ತೆಯಾಗಿವೆ. ಹೀಗಾಗಿ ಕೆಜಿಎಫ್ ಬಾಬು ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು ಮಾಡಲಾಗಿದೆ.
ಬೆಂಗಳೂರು: ಐಟಿ ದಾಳಿ (IT Raid) ವೇಳೆ ನಿವಾಸದಲ್ಲಿ ಸಾವಿರಕ್ಕೂ ಹೆಚ್ಚು ವೋಟರ್ ಐಡಿಗಳು ಪತ್ತೆಯಾದ ಹಿನ್ನೆಲೆ ಕೆಜಿಎಫ್ ಬಾಬು (KGF Babu) ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಕರ್ನಾಟಕ ವಿಧಾನಸಭಾ ಚುನಾವಣೆಗೆ (Karnataka Assembly Elections 2023) ದಿನಗಣನೆ ಆರಂಭವಾಗಿರುವ ಮಧ್ಯೆಯೇ ಐಟಿ ಅಧಿಕಾರಿಗಳು ಕೂಡ ಅಲರ್ಟ್ ಆಗಿದ್ದಾರೆ. ಕೆಲ ದಿನಗಳ ಹಿಂದೆ ಮಂಗಳೂರು, ಮೈಸೂರು ಸೇರಿದಂತೆ ಕೆಲ ಕಡೆ ಕಾಂಗ್ರೆಸ್ ಮುಖಂಡರುಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿತ್ತು. ಇದರ ಬೆನ್ನಲ್ಲೇ ಬುಧವಾರದಂದು ಕೆಜಿಎಫ್ ಬಾಬು ನಿವಾಸದ ಮೇಲೆ ದಾಳಿ ನಡೆದಿತ್ತು. ಈ ವೇಳೆ 1925 ವೋಟರ್ ಐಡಿಗಳು ಪತ್ತೆಯಾಗಿದ್ದವು.
ಕೆಜಿಎಫ್ ಬಾಬು ಮನೆ ಮೇಲಿನ ದಾಳಿ ವೇಳೆಯಲ್ಲಿ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ 1925 ವೋಟರ್ ಐಡಿಗಳು ಪತ್ತೆಯಾಗಿದ್ದವು. 1925 ಚೆಕ್ಗಳ ಜೊತೆಯಲ್ಲಿ ವೋಟರ್ ಐಡಿಗಳನ್ನ ಶೇಖರಿಸಿಟ್ಟಿದ್ದರು. ವೋಟರ್ ಐಡಿಗಳು ಅಟ್ಯಾಚ್ ಆಗಿರುವ ಹೆಚ್ಡಿಎಫ್ಸಿ ಬ್ಯಾಂಕ್ ಅಕೌಂಟ್ನ 50200060873761 ನಂಬರಿನ ಚೆಕ್ಗಳು ಪತ್ತೆಯಾಗಿವೆ. ಪ್ರತೀ ಚೆಕ್ನಲ್ಲಿ 5000 ರೂ. ನಮೂದು ಮಾಡಲಾಗಿದೆ.
ಕೆಜಿಎಫ್ ಬಾಬು ಮನೆಯ ಮೊದಲ ಮಹಡಿಯ ಕೊಠಡಿಯೊಂದರಲ್ಲಿ ಈ ಚೆಕ್ ಹಾಗೂ ವೋಟರ್ ಐಡಿಗಳು ಪತ್ತೆಯಾಗಿವೆ. ಇನ್ನು, ಮನೆಯ ನೆಲಮಹಡಿಯಲ್ಲಿ 26 ಬ್ಯಾಗ್ಗಳಲ್ಲಿದ್ದ ಸೀರೆ, ಚಿಕ್ಕಪೇಟೆಗೆ ಸಂಬಂಧಿಸಿದ ಮುದ್ರಣ ಪ್ರತಿಗಳು, ವ್ಯಾನ್ ಹುಸೇನ್ ಕಂಪನಿಯ 481 ಸೂಟ್ಗಳು ಪತ್ತೆಯಾಗಿದ್ದವು. ದಾಳಿ ವೇಳೆ ಈ ಎಲ್ಲಾ ವಸ್ತುಗಳು ಪತ್ತೆಯಾಗಿರುವುದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿರುವುದು ಸ್ಪಷ್ಟವಾಗಿದೆ. ಸದ್ಯ ಶಿವಾಜಿನಗರ ವಲಯದ ಚುನಾವಣಾ ಉಸ್ತುವಾರಿ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಕೆಜಿಎಫ್ ಬಾಬು ವಿರುದ್ಧ ಜನ ಪ್ರತಿನಿಧಿ 1951 1989 ಕಾಯ್ದೆ ಅಡಿ ಕೇಸ್ ದಾಖಲಾಗಿದೆ.
ಇದನ್ನೂ ಓದಿ: IT ED Raids In Karnataka: ಮಲ್ಪೆ ಬೀಚ್ ನಿರ್ವಹಣಾ ಗುತ್ತಿಗೆದಾರನ ಮನೆ ಮೇಲೆ ಇಡಿ ದಾಳಿ
ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಮಧ್ಯೆಯೇ ಐಟಿ ಅಧಿಕಾರಿಗಳು ಕೂಡ ಅಲರ್ಟ್ ಆಗಿದ್ದಾರೆ. ಕೆಲ ದಿನಗಳ ಹಿಂದೆ ಮಂಗಳೂರು, ಮೈಸೂರು ಸೇರಿದಂತೆ ಕೆಲ ಕಡೆ ಕಾಂಗ್ರೆಸ್ ಮುಖಂಡರುಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿತ್ತು. ಈಗ ಐಟಿ ಅಧಿಕಾರಿಗಳು ಬೆಂಗಳೂರಿನಲ್ಲಿ ಕೆಜಿಎಫ್ ಬಾಬು ಸೇರಿದಂತೆ ಹಲವು ಕಾಂಗ್ರೆಸ್ ನಾಯಕರ ಮನೆಗಳ ಮೇಲೆ ದಾಳಿ ನಡೆಸಿದ್ದರು.
ಚಿಕ್ಕಪೇಟೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಬಯಸಿ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಕೆಜಿಎಫ್ ಬಾಬು, ಕ್ಷೇತ್ರದಲ್ಲಿ ಅನೇಕ ಸಾಮಾಜ ಸೇವೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಆದರೆ ಕಾಂಗ್ರೆಸ್ ಪಕ್ಷವು ಬಾಬುಗೆ ಟಿಕೆಟ್ ನೀಡಿಲ್ಲ. ಹಾಗಾಗಿ ಅವರು ಪತ್ನಿಯನ್ನು ಈ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಿದ್ದಾರೆ.
ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:13 pm, Thu, 20 April 23