Karnataka Assembly Election 2023: ಹೊಸ ಯುವ ಮತದಾರರಿಗಾಗಿ ರಾಜ್ಯಾದ್ಯಂತ ವಿಶೇಷ ಮತಗಟ್ಟೆ ನಿರ್ಮಾಣ

|

Updated on: Apr 17, 2023 | 8:52 AM

ಇದೇ ಮೊದಲ ಬಾರಿಗೆ ಯುವ ಮತದಾರರಿಗಾಗಿ ವಿಶೇಷ ಮತಗಟ್ಟೆಗಳನ್ನು ತೆರೆಯಲು ರಾಜ್ಯ ಚುನಾವಣಾ ಆಯೋಗ ನಿರ್ಧರಿಸಿದೆ.

Karnataka Assembly Election 2023: ಹೊಸ ಯುವ ಮತದಾರರಿಗಾಗಿ ರಾಜ್ಯಾದ್ಯಂತ ವಿಶೇಷ ಮತಗಟ್ಟೆ ನಿರ್ಮಾಣ
ಯುವ ಮತದಾರರು
Follow us on

ಹುಬ್ಬಳ್ಳಿ: ಚುನಾವಣಾ ಆಯೋಗ (Election Commission of India) ಪ್ರತಿ ಚುನಾವಣೆಯಲ್ಲಿ ಮತದಾರರನ್ನು ಸೆಳೆಯಲು ಅನೇಕ ಹೊಸ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತದೆ. ಅದರಂತೆ ಈಗ ಇದೇ ಮೊದಲ ಬಾರಿಗೆ ಯುವ ಮತದಾರರಿಗಾಗಿ (Young Voters) ವಿಶೇಷ ಮತಗಟ್ಟೆಗಳನ್ನು ತೆರೆಯಲು ರಾಜ್ಯ ಚುನಾವಣಾ ಆಯೋಗ ನಿರ್ಧರಿಸಿದೆ. ಮಹಿಳೆಯರಿಗಾಗಿ ಸಖಿ ಮತಗಟ್ಟೆಗಳ ನಂತರ, ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟ ಮತದಾರರನ್ನು ಉತ್ತೇಜಿಸಲು, ರಾಜ್ಯದಲ್ಲಿ ಯುವ ಮತದಾರರ ಮತಗಟ್ಟೆಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಅದರಂತೆ ರಾಜ್ಯಾದ್ಯಂತ ಪ್ರತಿ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯ ಯುವ ಮತದಾರರು ನೋಂದಾಯಿಸಿಕೊಂಡಿದ್ದಾರೆ.

ರಾಜ್ಯದಲ್ಲಿ ಇಂತಹ ಸರಿಸುಮಾರು 224 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ಈ ಮತಗಟ್ಟೆಗಳನ್ನು ಯುವ ಸರ್ಕಾರಿ ಅಧಿಕಾರಿಗಳು ನಿರ್ವಹಿಸುತ್ತಾರೆ. ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ ಕಾರ್ಯಕ್ರಮ (SVEEP) ಮತಗಟ್ಟೆಗಳನ್ನು ಗುರುತಿಸಿದ್ದು, ಅವುಗಳನ್ನು ಭವ್ಯವಾಗಿ ಅಲಂಕರಿಸಲಾಗಿದೆ.

ಈ ಬಗ್ಗೆ ಧಾರವಾಡ ಜಿಲ್ಲಾಧಿಕಾರಿ ಗುರುದತ್ ಹೆಗಡೆಯವರು ಮಾತನಾಡಿ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಯುವ ಮತದಾರರು ತಮ್ಮ ಹಕ್ಕನ್ನು ಚಲಾಯಿಸುವಂತೆ ಮಾಡಲು ಎಸ್ವಿಇಇಪಿ​ ಸಾಕಷ್ಟು ಪ್ರಯತ್ನ ಮಾಡಿದೆ. ಏಪ್ರಿಲ್ 11ರವರೆಗೆ ಹೊಸದಾಗಿ ಮತ ಪಟ್ಟಿಗೆ ಸೇರಲು ಆಯೋಗ ಅವಕಾಶ ಕಲ್ಪಿಸಿತ್ತು. ಇದರಿಂದ ಹೊಸ ಮತದಾರರ ಸಂಖ್ಯೆ ಹೆಚ್ಚಿದ್ದು, ಧಾರವಾಡ ಜಿಲ್ಲೆಯಲ್ಲಿ 2018ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ 16,902 ಹೊಸ ಮತದಾರರಿದ್ದು, ಪ್ರಸ್ತುತ 30,056 ಹೊಸ ಮತದಾರರಿದ್ದಾರೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಚುನಾವಣಾ ಆಯೋಗ ಅನುಮತಿ ನಿರಾಕರಣೆ: ಕರ್ನಾಟಕ-ಭಾರತ್ ಗೌರವ್ ಕಾಶಿ ದರ್ಶನ ರೈಲುಗಳ 2 ಟ್ರಿಪ್​​​ ರದ್ದು

ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಮಾತನಾಡಿ, ರಾಜ್ಯದಲ್ಲಿ ಪ್ರಥಮ ಬಾರಿಗೆ ಚೊಚ್ಚಲ ಮತದಾರರನ್ನು ಉತ್ತೇಜಿಸಲು ಮತಗಟ್ಟೆ ಕೇಂದ್ರ ಸ್ಥಾಪಿಸಲು ನಿರ್ಧರಿಸಲಾಗಿದೆ. ಯುವ ಸರ್ಕಾರಿ ಅಧಿಕಾರಿಗಳು ಈ ಮತಗಟ್ಟೆಗಳನ್ನು ನಿರ್ವಹಿಸಲಿದ್ದಾರೆ. ಜಿಲ್ಲೆಯಲ್ಲಿ ಹಲವು ಯುವ ಅಧಿಕಾರಿಗಳು ಇರುವುದರಿಂದ ಚುನಾವಣಾ ಕರ್ತವ್ಯಕ್ಕೆ ಈ ಅಧಿಕಾರಿಗಳನ್ನು ನೇಮಿಸಲಾಗಿದೆ. ಪ್ರತಿ ಮತಗಟ್ಟೆಗೆ 4 ಯುವ ಅಧಿಕಾರಿಗಳನ್ನು ನಿಯೋಜಿಸಲಾಗುವುದು. ಯುವ ಮತದಾರರನ್ನು ಆಕರ್ಷಿಸಲು ಮತಗಟ್ಟೆಯನ್ನು ವಿನ್ಯಾಸಗೊಳಿಸಲಾಗುವುದು. 7 ಮತಗಟ್ಟೆಗಳಲ್ಲಿ ವಿಭಿನ್ನ ಪರಿಕಲ್ಪನೆಗಳನ್ನು ಬಳಸಲಾಗುವುದು ಎಂದು ಹೇಳಿದರು.

ಮತದಾನ ಕೇಂದ್ರಗಳಿಗೆ ಪರಿಕಲ್ಪನೆಗಳನ್ನು ಸಿದ್ಧಪಡಿಸುವಂತೆ ಕಲಾ ಕಾಲೇಜು ಉಪನ್ಯಾಸಕರಿಗೆ ಸೂಚಿಸಲಾಗಿದೆ ಎಂದು ಎಸ್​ವಿಇಇಪಿ ಸಮಿತಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವಿನ್ಯಾಸವನ್ನು ಅಂತಿಮಗೊಳಿಸಿದ ನಂತರ, ಅದಕ್ಕೆ ಅನುಗುಣವಾಗಿ 7 ಮತಗಟ್ಟೆಗಳನ್ನು ಅಲಂಕರಿಸಲಾಗುವುದು ಎಂದು ಶಿವಾನಂದ ಭಜಂತ್ರಿ ಮಾಹಿತಿ ನೀಡಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ