ಬೆಂಗಳೂರು: ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿಯೂ ಆಗಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್ಡಿ ಕುಮಾರಸ್ವಾಮಿ (HD Kumaraswamy) ಅವರು ಇಂದು ಸಂಜೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕಳೆದ ಮೂರು ದಿನಗಳಿಂದ ಆಸ್ಪತ್ರೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ (Manipal Hospital) ಚಿಕಿತ್ಸೆ ಪಡೆಯುತ್ತಿದ್ದರು. ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆ ವೈದ್ಯರ ಸಲಹೆಯಂತೆ ಕುಮಾರಸ್ವಾಮಿ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ ಒಂದೆರಡು ತಿಂಗಳಿನಿಂದ ಪಂಚರತ್ನ ಯಾತ್ರೆ ಕೈಗೊಂಡು ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದರು. ಸುಡು ಬಿಸಿಲನ್ನೂ ಲೆಕ್ಕಿಸದೇ ರಾಜ್ಯದೆಲ್ಲೆಡೆ ಪ್ರವಾಸ ನಡೆಸಿದ್ದರು.
ವಿಶ್ರಾಂತಿ ಇಲ್ಲದೆ ಚುನಾವಣಾ ಕಾರ್ಯದಲ್ಲಿ ತೊಡಗಿದ್ದ ಹಿನ್ನೆಲೆ ಕುಮಾರಸ್ವಾಮಿ ಅವರಿಗೆ ತೀವ್ರ ಜ್ವರ ಕಾಣಿಸಿಕೊಂಡಿತ್ತು. ಸಣ್ಣ ಪ್ರಮಾಣದಲ್ಲಿ ಲಂಗ್ಸ್ ಇನ್ಫೆಕ್ಷನ್ ಹಾಗೂ ಡಸ್ಟ್ ಅಲರ್ಜಿ ಕೂಡ ಇದೆ ಎಂದು ವೈದ್ಯರು ಹೇಳಿದ್ದರು. ಹೀಗಾಗಿ ಕುಮಾರಸ್ವಾಮಿ ಅವರನ್ನು ಸ್ಪೆಷಲ್ ವಾರ್ಡ್ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಮಣಿಪಾಲ್ ಆಸ್ಪತ್ರೆಯ ಡಾ. ಸತ್ಯನಾರಾಯಣ್ ಅವರು ಎಚ್ಡಿ ಕುಮಾರಸ್ವಾಮಿಯವರಿಗೆ ಚಿಕಿತ್ಸೆ ನೀಡಿದ್ದರು.
ಕುಮಾರಸ್ವಾಮಿ ಅವರು ನಿರಂತರ ಪ್ರವಾಸ ಹಾಗೂ ಕಾರ್ಯಕ್ರಮಗಳನ್ನು ನಡೆಸುತ್ತಾ ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದರೂ ಬೆಡ್ ಮೇಲೆ ಕುಳಿತುಕೊಂಡೇ ಪಕ್ಷದ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದರು. ಕಾಂಗ್ರೆಸ್ ಹಾಗೂ ಬಿಜೆಪಿಯಿಂದ ವಲಸೆ ಬಂದಿರುವ ಪ್ರಮುಖ ನಾಯಕರುಗಳು ಕ್ಷೇತ್ರ ಸೇರಿದಂತೆ ಗೆಲ್ಲುವ ಅಭ್ಯರ್ಥಿಗಳನ್ನು ಟಾರ್ಗೆಟ್ ಮಾಡಿದ್ದಾರೆ. ಅಲ್ಲದೇ ಆ ಕ್ಷೇತ್ರಗಳಿಗೆ ಹೆಚ್ಚು ಪ್ರಚಾರಕ್ಕೆ ತೆರಳಲು ಆಸ್ಪತ್ರೆಯಿಂದಲೇ ರೂಟ್ ಮ್ಯಾಪ್ ಸಿದ್ಧಪಡಿಸಿದ್ದಾರೆ.
ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:53 pm, Mon, 24 April 23