ಏನು ಕಡಿಮೆ ಮಾಡಿದ್ದೆವು ಎಂಬ ಯಡಿಯೂರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್

ಜಗದೀಶ್ ಶೆಟ್ಟರ್​ಗೆ ಬಿಜೆಪಿ ಪಕ್ಷ ಎಲ್ಲವನ್ನು ನೀಡಿತ್ತು. ಆದರೂ ಅವರು ಈ ರೀತಿಯ ನಿರ್ಧಾರ ತೆಗೆದುಕೊಂಡಿದ್ದಾರೆ ಎಂಬ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆ ಜಗದೀಶ್ ಶೆಟ್ಟರ್​ ತಿರುಗೇಟು ನೀಡಿದ್ದಾರೆ.

ಏನು ಕಡಿಮೆ ಮಾಡಿದ್ದೆವು ಎಂಬ ಯಡಿಯೂರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್
ಜಗದೀಶ್ ಶೆಟ್ಟರ್, ಬಿ.ಎಸ್.ಯಡಿಯೂರಪ್ಪ (ಸಂಗ್ರಹ ಚಿತ್ರ)
Follow us
ಗಂಗಾಧರ​ ಬ. ಸಾಬೋಜಿ
|

Updated on:Apr 16, 2023 | 4:49 PM

ಹುಬ್ಬಳ್ಳಿ: ಜಗದೀಶ್ ಶೆಟ್ಟರ್(Jagadish Shettar)​ಗೆ ಬಿಜೆಪಿ ಪಕ್ಷ ಎಲ್ಲವನ್ನು ನೀಡಿತ್ತು. ಆದರೂ ಅವರು ಈ ರೀತಿಯ ನಿರ್ಧಾರ ತೆಗೆದುಕೊಂಡಿದ್ದಾರೆ ಎಂಬ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆ ಜಗದೀಶ್ ಶೆಟ್ಟರ್​ ತಿರುಗೇಟು ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2012ರಲ್ಲಿ ಬಿಜೆಪಿ ಒಡೆದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಕೆಜೆಪಿ ಕಟ್ಟಿದ್ದರು. ನನ್ನನ್ನು ಪ್ರಶ್ನಿಸಿದ್ದಕ್ಕೆ ಕೇಳುತ್ತಿದ್ದೇನೆ. ಹುಬ್ಬಳ್ಳಿ-ಧಾರವಾಡದಲ್ಲಿ ನಾನೇ ಬೆಳೆಸಿದ ಹುಡುಗರು ಇದ್ದಾರೆ. ಅವರನ್ನು ಎಷ್ಟು ದಿನ ಅಂತಾ ಹಿಡಿದಿಟ್ಟುಕೊಳ್ಳಲು ಆಗುತ್ತದೆ. ದೈಹಿಕವಾಗಿ ಬಿಜೆಪಿಯಲ್ಲಿದ್ದರೂ ಮಾನಸಿಕವಾಗಿ ನನ್ನ ಜತೆಗಿದ್ದಾರೆ. ಇದುವರೆಗೆ ಬೇರೆ ಪಕ್ಷಗಳ ನಾಯಕರು ನನ್ನನ್ನು ಸಂಪರ್ಕಿಸಿಲ್ಲ. ನಾನು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕು. ಇಂದು ಸಂಜೆ ಬೆಂಗಳೂರಿಗೆ ತೆರಳಿದ ನಂತರ ನನ್ನ ಮುಂದಿನ ನಡೆ ಬಗ್ಗೆ ತಿಳಿಸುವೆ ಎಂದು ಹೇಳಿದರು.

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್​ ಕ್ಷೇತ್ರದ ಟಿಕೆಟ್ ಮಾತ್ರ ಕೇಳಿದ್ದೆ. ಆದರೆ ರಾಜ್ಯಸಭೆಗೆ ಕಳಿಸುವುದಾಗಿ ಬಿಜೆಪಿ ನಾಯಕರು ಹೇಳಿದ್ದಾರೆ. ಯಾಕೆ ಮೂಲೆಗೆ ಕೂರಿಸಲು ಯತ್ನಿಸುತ್ತಿದ್ದೀರಿ ಎಂದು ಪ್ರಶ್ನಿಸಿದೆ. ನಾನು ಕೇಳುತ್ತಿರುವುದು ಒಂದು ಟಿಕೆಟ್​ ಎಂದರೂ ಒಪ್ಪಲೇ ಇಲ್ಲ. ಅನಿವಾರ್ಯವಾಗಿ ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದರು.

ಇದನ್ನೂ ಓದಿ: ಪಕ್ಷ ಬಿಟ್ಟು ಹೋದವರ ವಿರುದ್ಧ ಯಡಿಯೂರಪ್ಪ ಗುಟುರು: ಮುಂದೆ ಇವರ ಬಂಡವಾಳ ಬಯಲು ಮಾಡ್ತೇವೆ, ಸವದಿ, ಶೆಟ್ಟರ್ ವಿರುದ್ಧ ವಾಗ್ದಾಳಿ

ನನಗೆ ಅಪಮಾನ ಆಗಿದೆ

ಎರಡು ಬಾರಿ ನನಗೆ ಅವಕಾಶ ಸಿಕ್ಕಾಗಲೂ ಪ್ರಮಾಣಿಕ ಕೆಲಸ ಮಾಡಿದ್ದೇನೆ. ಯಾಕೆ ನನಗೆ ಅವಕಾಶ ಕೊಟ್ರು, ಅನ್ನೋದನ್ನ ನಾನು ಡಿಟೇಲ್ ಮಾತಾಡುತ್ತೆನೆ. ಪಕ್ಷ ನನಗೆ ಎಲ್ಲ ಅವಕಾಶ ಕೊಟ್ಟಿದೆ ಅದಕ್ಕೆ ಅಭಿನಂದನೆ. ಇದಕ್ಕೆ ಪ್ರತಿಯಾಗಿ ನಾನು ಪಕ್ಷ ಕಟ್ಟಿದ್ದೇನೆ. ಯಡಿಯೂರಪ್ಪ ನಮ್ಮ ನಾಯಕರು. ಪಕ್ಷದ ಸ್ಥಾನ ಮಾನ ತೆಗೆದುಕೊಂಡ ನೀವು ಪಕ್ಷ ಒಡೆದು‌ ಕೆಜಿಪಿ ಕಟ್ಟಿದ್ರಿ ಯಾಕೆ. ಇವತ್ತು ನನ್ನ ಬಗ್ಗೆ ಮಾತಾಡ್ತಾರೆ ಎಂದು ಕಿಡಿಕಾರಿದರು. ನನಗೆ ಅಪಮಾನ ಆಗಿದೆ ನಾನು ಅದರ ಬಗ್ಗೆ ಮಾತಾಡುತ್ತೇನೆ. ನನಗೆ ಯಾವುದೇ ಭರವಸೆ ಇಲ್ಲ. ಅದಕ್ಕೆ ಹಂತ ಹಂತವಾಗಿ ನನ್ನ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: ಹುಬ್ಬಳ್ಳಿ-ಧಾರವಾಡ ಕೇಂದ್ರದ ಬಿಜೆಪಿ ಅಭ್ಯರ್ಥಿ ಗೆಲ್ಲಿಸಬೇಕು: ಬಿಜೆಪಿ ಮುಖಂಡರಿಗೆ ಪ್ರಲ್ಹಾದ್ ಜೋಶಿ ಮನವಿ

ಜಗದೀಶ್ ಶೆಟ್ಟರ್ ವಿರುದ್ಧ ಯಡಿಯೂರಪ್ಪ ಕಿಡಿ 

ಜಗದೀಶ್ ಶೆಟ್ಟರ್ ಬಿಜೆಪಿ ತೊರೆದ ಬೆನ್ನಲ್ಲೆ ಬಿಎಸ್ ಯಡಿಯೂರಪ್ಪ ಸುದ್ದಿಗೋಷ್ಠಿ ಮಾಡಿದ್ದು, ನನಗೆ, ಜಗದೀಶ್ ಶೆಟ್ಟರ್​ಗೆ, ಲಕ್ಷ್ಮಣ ಸವದಿಗೆ ಪಕ್ಷ ಹಲವು ಅವಕಾಶ ನೀಡಿದೆ. ಜನಸಂಘದ ಕಾಲದಿಂದಲೂ ಜಗದೀಶ್​ ಶೆಟ್ಟರ್​ ಬಿಜೆಪಿಯಲ್ಲಿದ್ದರು. ಶೆಟ್ಟರ್​ರನ್ನು ಶಾಸಕ, ಸಚಿವ, ವಿಪಕ್ಷ ನಾಯಕ, ಸಿಎಂ ಮಾಡಿದ್ದೆವು. ಜಗದೀಶ್​ ಶೆಟ್ಟರ್​ಗೆ ನಾನು, ಅನಂತಕುಮಾರ್​ ಕಾವಲಾಗಿದ್ದೆವು.

ನನ್ನ ಜತೆ ಹೆಜ್ಜೆಹಾಕುವ ಜವಾಬ್ದಾರಿ ಜಗದೀಶ್ ಶೆಟ್ಟರ್​ಗೆ ಇತ್ತು. ಪಕ್ಷದ ಸಹಕಾರ ಇಲ್ಲದಿದ್ದರೆ ವ್ಯಕ್ತಿ ಎತ್ತರಕ್ಕೆ ಬೆಳೆಯಲು ಆಗಲ್ಲ. ಮಾಜಿ ಸಿಎಂ ಜಗದೀಶ್​ ಶೆಟ್ಟರ್​ಗೆ ಏನು ಕಡಿಮೆ ಮಾಡಿದ್ದೆವು. ಶೆಟ್ಟರ್ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ, ಇದಕ್ಕೆ ಕ್ಷಮೆಯೇ ಇಲ್ಲ ಎಂದು  ಯಡಿಯೂರಪ್ಪ ಅಸಮಾಧಾನ ಹೊರ ಹಾಕಿದ್ದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:49 pm, Sun, 16 April 23

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್