ಬಿಜೆಪಿ ತೊರೆದ ಆರ್. ಶಂಕರ್ ಎನ್​ಸಿಪಿಗೆ; ನಾಳೆ ರಾಜ್ಯದಲ್ಲಿ ಅಭ್ಯರ್ಥಿಗಳ ಹೆಸರು ಪ್ರಕಟಿಸಲಿದೆ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ

ಬಿಜೆಪಿ ಟಿಕೆಟ್ ದೊರೆಯದೆ ಅಸಮಾಧಾನಗೊಂಡು ಪಕ್ಷಕ್ಕೆ ಮತ್ತು ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಆರ್. ಶಂಕರ್ ಶುಕ್ರವಾರ ಶರದ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ ಸೇರಿದ್ದಾರೆ.

ಬಿಜೆಪಿ ತೊರೆದ ಆರ್. ಶಂಕರ್ ಎನ್​ಸಿಪಿಗೆ; ನಾಳೆ ರಾಜ್ಯದಲ್ಲಿ ಅಭ್ಯರ್ಥಿಗಳ ಹೆಸರು ಪ್ರಕಟಿಸಲಿದೆ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ
ಆರ್. ಶಂಕರ್ ಎನ್​ಸಿಪಿಗೆ ಸೇರ್ಪಡೆಯಾದರು

Updated on: Apr 14, 2023 | 10:27 PM

ಬೆಂಗಳೂರು: ಬಿಜೆಪಿ ಟಿಕೆಟ್ ದೊರೆಯದೆ ಅಸಮಾಧಾನಗೊಂಡು ಪಕ್ಷಕ್ಕೆ ಮತ್ತು ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಆರ್. ಶಂಕರ್ (R Shankar) ಶುಕ್ರವಾರ ಶರದ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (NCP) ಸೇರಿದ್ದಾರೆ. ಅವರು ವಿಧಾನಸಭೆ ಚುನಾವಣೆಗೆ ಹಾವೇರಿಯ ರಾಣೆಬೆನ್ನೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಅವರಿಗೆ ಟಿಕೆಟ್ ನಿರಾಕರಿಸಲಾಗಿತ್ತು. ಅವರ ಬದಲು ಹಾಲಿ ಶಾಸಕ ಅರುಣ್ ಕುಮಾರ್ ಪೂಜಾರ ಅವರಿಗೆ ಟಿಕೆಟ್ ನೀಡಲಾಗಿತ್ತು. 2019 ರಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಪತನಕ್ಕೆ ಕಾರಣವಾದ, ಆ ಸಂದರ್ಭದಲ್ಲಿ ಬಿಜೆಪಿಯನ್ನು ಬೆಂಬಲಿಸಿದ ಶಾಸಕರಲ್ಲಿ ಆರ್ ಶಂಕರ್ ಕೂಡ ಒಬ್ಬರು. ಆ ಸಂದರ್ಭದ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಿತ್ತು.

ಏತನ್ಮಧ್ಯೆ, ಕರ್ನಾಟಕ ಚುನಾವಣೆಯಲ್ಲಿ ಎನ್‌ಸಿಪಿ 40-45 ಸ್ಥಾನಗಳಲ್ಲಿ ಸ್ಪರ್ಧಿಸಲು ಚಿಂತನೆ ನಡೆಸಿದ್ದು ಶನಿವಾರ ಅಭ್ಯರ್ಥಿಗಳ ಹೆಸರನ್ನು ಘೋಷಿಸುವ ಸಾಧ್ಯತೆಯಿದೆ.

ಗೋವಾ, ಮೇಘಾಲಯ ಮತ್ತು ಮಣಿಪುರದಂತಹ ರಾಜ್ಯಗಳಲ್ಲಿ ಎನ್​ಸಿಪಿಯ ಬಲ ಕ್ಷೀಣಿಸಿದೆ. ಹೀಗಾಗಿ ರಾಷ್ಟ್ರೀಯ ಪಕ್ಷದ ಸ್ಥಾನಮಾನವನ್ನು ಮರಳಿ ಪಡೆಯಲು ಎನ್‌ಸಿಪಿ ಪ್ರಯತ್ನಿಸುತ್ತಿದ್ದು, ಇದಕ್ಕಾಗಿ ಕರ್ನಾಟಕದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದೆ.

ಇದನ್ನೂ ಓದಿ: R Shankar: ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಆರ್. ಶಂಕರ್ ರಾಜೀನಾಮೆ

ಗಣನೀಯವಾಗಿ ಮರಾಠಿ ಮಾತನಾಡುವ ಜನರು ಇರುವ ಮಹಾರಾಷ್ಟ್ರ-ಕರ್ನಾಟಕ ಗಡಿ ಪ್ರದೇಶದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಎನ್​ಸಿಪಿ ಬೆಂಬಲವನ್ನು ಘೋಷಿಸಿದೆ.

ರಾಜ್ಯದಲ್ಲಿ ಮೇ 10ರಂದು ಚುನಾವಣೆ ನಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ನಾಮಪತ್ರ ಸಲ್ಲಿಕೆ ಈಗಾಗಲೇ ಆರಂಭವಾಗಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us