ಚುನಾವಣೆ ಹೊಸ್ತಿಲಲ್ಲೇ ಬೆಂಗಳೂರಿನಲ್ಲಿ ವೋಟರ್​ ಐಡಿ ಸಂಗ್ರಹಿಸುತ್ತಿದ್ದ ನಾಲ್ವರು ಪೊಲೀಸ್ ವಶಕ್ಕೆ

ವಿಧಾನಸಭೆ ಚುನಾವಣೆ(Karnataka Assembly Elections 2023)ಗೆ ಇನ್ನೇನು ಆರು ದಿನಗಳು ಬಾಕಿಯಿರುವಾಗಲೇ ಇದೀಗ ವೋಟರ್​ ಐಡಿ ಸಂಗ್ರಹಿಸುತ್ತಿದ್ದ ನಾಲ್ವರನ್ನ ಫ್ಲೈಯಿಂಗ್ ಸ್ಕ್ವಾಡ್​​​, ಭಾರತಿನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಚುನಾವಣೆ ಹೊಸ್ತಿಲಲ್ಲೇ  ಬೆಂಗಳೂರಿನಲ್ಲಿ ವೋಟರ್​ ಐಡಿ ಸಂಗ್ರಹಿಸುತ್ತಿದ್ದ ನಾಲ್ವರು ಪೊಲೀಸ್ ವಶಕ್ಕೆ
ಪ್ರಾತಿನಿಧಿಕ ಚಿತ್ರ
Follow us
ಕಿರಣ್ ಹನುಮಂತ್​ ಮಾದಾರ್
|

Updated on: May 04, 2023 | 7:55 AM

ಬೆಂಗಳೂರು: ವಿಧಾನಸಭೆ ಚುನಾವಣೆ(Karnataka Assembly Elections 2023)ಗೆ ಇನ್ನೇನು ಆರು ದಿನಗಳು ಬಾಕಿಯಿರುವಾಗಲೇ ಇದೀಗ ವೋಟರ್​ ಐಡಿ ಸಂಗ್ರಹಿಸುತ್ತಿದ್ದ ನಾಲ್ವರನ್ನ ಫ್ಲೈಯಿಂಗ್ ಸ್ಕ್ವಾಡ್​​​, ಭಾರತಿನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೌದು ಶಿವಾಜಿನಗರ ಕ್ಷೇತ್ರದಲ್ಲಿ ಮತದಾರರ ಬಳಿ ಹೋಗಿ ನಿಮ್ಮ ಒಂದು ವೋಟರ್​ ಐಡಿಗೆ 2 ಸಾವಿರ ರೂ. ಹಣ ಕೊಡುತ್ತೆವೆ ಎಂದು ಹೇಳಿ ವೋಟರ್ ಐಡಿ ಸಂಗ್ರಹಿಸುತ್ತಿದ್ದರು. ಈ ಸಂಬಂಧ ಶಿವಾಜಿನಗರ ಕಾಂಗ್ರೆಸ್ ಕಾರ್ಯಕರ್ತ ದೂರು ನೀಡಿದ್ದು, ದೂರಿನ ಮೇರೆಗೆ ನಾಲ್ವರನ್ನ ವಶಕ್ಕೆ ಪಡೆಯಲಾಗಿದೆ. ಈ ವೇಳೆ 15ಕ್ಕೂ ಹೆಚ್ಚು ವೋಟರ್ ಐಡಿ, ಆಧಾರ್ ಕಾರ್ಡ್ ಪತ್ತೆಯಾಗಿದ್ದು, ಆರೋಪಿಗಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ಸಂಶಯವೇ? ಪರೀಕ್ಷಿಸುವುದು ಹೇಗೆಂದು ಇಲ್ಲಿ ನೋಡಿ

ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಪ್ರತಿ ಪಕ್ಷಗಳು ಮತದಾರರನ್ನು ತಮ್ಮತ್ತ ಸೆಳೆಯಲು ಸಾಕಷ್ಟು ಕಸರತ್ತು ಮಾಡುತ್ತಿವೆ. 18 ವರ್ಷ ವಯಸ್ಸು ಪೂರೈಸಿದವರು ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಮತದಾನಕ್ಕೆ ಅರ್ಹರಾಗಿದ್ದಾರೆ. ಮೇ 10ರಂದು ರಾಜ್ಯದಲ್ಲಿ ಮತದಾನ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಆದರೆ ಈಗ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೋ ಇಲ್ಲವೋ ಎಂಬ ಸಂಶಯ ಹಲವರನ್ನು ಕಾಡುತ್ತಿರಬಹುದು. ಹಾಗಾದರೆ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ತಿಳಿಯಲು ಮುಂದೆ ಓದಿ.

ಇದನ್ನೂ ಓದಿ:ವೋಟರ್​ ಐಡಿ ಅಕ್ರಮ ಪ್ರಕರಣ: ಇಬ್ಬರು ಐಎಎಸ್​​ ಅಧಿಕಾರಿಗಳ ಅಮಾನತು ಆದೇಶ ವಾಪಸ್

ಹೆಸರು ಪರಿಶೀಲಿಸುವ ವಿಧಾನ

ವೆಬ್​ ಸೈಟ್​ಗೆ ಭೇಟಿ ನೀಡಿದ ನಂತರ, ನೀವು ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಎರಡು ವಿಧಾನಗಳಲ್ಲಿ ಹುಡುಕಬಹುದಾಗಿದೆ. ಮೊದಲ ವಿಧಾನವೆಂದರೆ ಸಾಮಾನ್ಯ ವಿಧಾನ. ಇನ್ನೊಂದು ಎಪಿಕ್​ ಸಂಖ್ಯೆ ವಿಧಾನ.

ಸಾಮಾನ್ಯ ವಿಧಾನ: ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ಎಂದು ಪತ್ತೆ ಹಚ್ಚಲು ಈ ಸಾಮಾನ್ಯ ವಿಧಾನವನ್ನು ಬಳಸಬಹುದಾಗಿದೆ. http://electoralsearch.in ಸೈಟ್​ ಭೇಟಿ ನೀಡಿ ಸರ್ಚ್​ ಬೈ ಡೀಟೇಲ್ಸ್ ಅನ್ನು ಆಯ್ಕೆ ಮಾಡಿಕೊಳ್ಳಿ. ಬಳಿಕ ನಿಮ್ಮ ಹೆಸರು, ವಯಸ್ಸು, ರಾಜ್ಯ, ಜಿಲ್ಲೆ ಮತ್ತು ಕ್ಯಾಪ್ಚಾ ಕೋಡ್​ ನಮೂದಿಸಿ. ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿದ್ದರೆ ಪರದೆಯ ಕೆಳಭಾಗದಲ್ಲಿ ಮಾಹಿತಿ ನೀಡಲಾಗುತ್ತದೆ.

ಇದನ್ನೂ ಓದಿ:ವೋಟರ್​ ಐಡಿ ಅಕ್ರಮ: ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಎಪಿಕ್​ ಸಂಖ್ಯೆ ವಿಧಾನ: ನೀವು ಮತದಾರರ ಗುರುತಿನ ಚೀಟಿ ಹೊಂದಿದ್ದರೆ ಅದರ ಸಂಖ್ಯೆ ಬಳಸುವುದರ ಮೂಲಕ ಪರಿಶೀಲಿಸಬಹುದು. ಎಪಿಕ್​ ಅಂದರೆ ಅಕ್ಷರ ಮತ್ತು ಸಂಖ್ಯೆಗಳಿಂದ ಕೂಡಿದ ಕೋಡ್​ ಆಗಿದೆ. http://electoralsearch.in ಸೈಟ್​ಗೆ ಭೇಟಿ ನೀಡಿ, ಸರ್ಚ್​ ಬೈ ಎಪಿಕ್ ಆಯ್ಕೆ ಮಾಡಿಕೊಳ್ಳಿ. ನಿಮ್ಮ ಗುರುತಿನ ಚೀಟಿಯ ಸಂಖ್ಯೆ, ರಾಜ್ಯ, ಕ್ಯಾಪ್ಚಾ ಕೋಡ್​ನ್ನು ನಮೂದಿಸಿ. ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿದ್ದರೆ ಪರದೆಯ ಕೆಳಭಾಗದಲ್ಲಿ ಜಿಲ್ಲೆ, ವಿಧಾನಸಭಾ ಕ್ಷೇತ್ರ ವಿರವ ಮೂಡುತ್ತದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ