ಜಿ ಪರಮೇಶ್ವರ್​ ನಾಮಪತ್ರ ಸಲ್ಲಿಸುವ ವೇಳೆ ಕಲ್ಲು ತೂರಾಟ: ಮಹಿಳಾ ಪೊಲೀಸ್ ಸಿಬ್ಬಂದಿಗೆ ಗಾಯ

ಕಾಂಗ್ರೆಸ್ ಅಭ್ಯರ್ಥಿ ಜಿ. ಪರಮೇಶ್ವರ್​ ನಾಮಪತ್ರ ಸಲ್ಲಿಸಲು ತೆರಳಿದ ವೇಳೆ ಕಿಡಿಗೇಡಿ‌ಗಳಿಂದ ಕೊರಟಗೆರೆ ತಾಲೂಕು ಕಚೇರಿ ಮೇಲೆ ಕಲ್ಲು ತೂರಾಟ ಮಾಡಿರುವಂತಹ ಘಟನೆ ನಡೆದಿದೆ.

ಜಿ ಪರಮೇಶ್ವರ್​ ನಾಮಪತ್ರ ಸಲ್ಲಿಸುವ ವೇಳೆ ಕಲ್ಲು ತೂರಾಟ: ಮಹಿಳಾ ಪೊಲೀಸ್ ಸಿಬ್ಬಂದಿಗೆ ಗಾಯ
ಗಾಯಗೊಂಡಿದ್ದ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ಆಸ್ಪತ್ರೆಗೆ ಸಾಗಿಸಲಾಯಿತು

Updated on: Apr 19, 2023 | 3:33 PM

ಮುಖ್ಯಾಂಶಗಳು

  • ಕೊರಟಗೆರೆ ತಾಲೂಕು ಕಚೇರಿ ಮೇಲೆ ಕಲ್ಲು ತೂರಾಟ
  • ಮಹಿಳಾ ಪೊಲೀಸ್ ಸಿಬ್ಬಂದಿಗೆ ಗಾಯ
  • ಜಿ.ಪರಮೇಶ್ವರ್​ ನಾಮಪತ್ರ ಸಲ್ಲಿಸಲು ಒಳ ಹೋದಾಗ ಘಟನೆ

ತುಮಕೂರು: ಕಾಂಗ್ರೆಸ್ ಅಭ್ಯರ್ಥಿ ಜಿ. ಪರಮೇಶ್ವರ್ (G Parameshwara)​ ನಾಮಪತ್ರ ಸಲ್ಲಿಸಲು ತೆರಳಿದ ವೇಳೆ ಕಿಡಿಗೇಡಿ‌ಗಳಿಂದ ಕೊರಟಗೆರೆ ತಾಲೂಕು ಕಚೇರಿ ಮೇಲೆ ಕಲ್ಲು ತೂರಾಟ ಮಾಡಿರುವಂತಹ ಘಟನೆ ನಡೆದಿದೆ. ಕಲ್ಲು ತೂರಾಟ ವೇಳೆ ಮಹಿಳಾ ಪೊಲೀಸ್​ ಸಿಬ್ಬಂದಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ನಾಮಪತ್ರ ಸಲ್ಲಿಕೆ ಬಳಿಕ ಪರಮೇಶ್ವರ್​ ಪ್ರತಿಕ್ರಿಯೆ ನೀಡಿದ್ದು, ಕಚೇರಿ ಮೇಲೆ ಯಾರು ಕಲ್ಲು ಎಸೆದರು ಅಂತಾ ನನಗೆ ಗೊತ್ತಿಲ್ಲ. ನಾನು ನಾಮಪತ್ರ ಸಲ್ಲಿಸಲು ಒಳಗೆ ಹೋದಾಗ ಘಟನೆ ನಡೆದಿದೆ. ಈ ಬಗ್ಗೆ ಪೊಲೀಸರ ಬಳಿ ಮಾಹಿತಿ ಪಡೆಯುತ್ತೇನೆ ಎಂದು ಹೇಳಿದರು. ಮತ್ತೊಂದು ಪ್ರಕರಣದಲ್ಲಿ ಸೇಬಿಗಾಗಿ ಮುಗಿಬಿದ್ದ ಕಾಂಗ್ರೆಸ್ ಕಾರ್ಯಕರ್ತರಿಗೆ ಲಾಠಿಚಾರ್ಜ್​​ ಮಾಡಿರುವಂತಹ ಘಟನೆ ನೆಲಮಂಗಲದಲ್ಲಿ ನಡೆದಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಮುಖಂಡರು ಆ್ಯಪಲ್​ ಹಾರ ಹಾಕಿದ್ದರು. ಈ ವೇಳೆ ಹಾರದಲ್ಲಿದ್ದ ಸೇಬು ಕಿತ್ತುಕೊಳ್ಳಲು ಕಾರ್ಯಕರ್ತರ ನಡುವೆ ತಳ್ಳಾಟ ಉಂಟಾಗಿದೆ. ಹಾಗಾಗಿ ಲಾಠಿ ಪ್ರಹಾರ ನಡೆಸಿ ಪೊಲೀಸರು ಕಾರ್ಯಕರ್ತರನ್ನು ಚದುರಿಸಿದ್ದಾರೆ.

ಅನಿಲ್ ಮೆಣಸಿನಕಾಯಿ ಕಾರಿನ ಮೇಲೆ ಕಲ್ಲುತೂರಾಟ

ಗದಗ: ಬಿಜೆಪಿ ಅಭ್ಯರ್ಥಿ ಅನಿಲ್ ಮೆಣಸಿನಕಾಯಿ ಕಾರಿನ ಮೇಲೆ ದುಷ್ಕರ್ಮಿಗಳಿಂದ ಕಲ್ಲುತೂರಾಟ ಮಾಡಿದ್ದಾರೆ. ಅನಿಲ್ ಮೆಣಸಿನಕಾಯಿ ಅವರು ಗದಗ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ನಾಮಪತ್ರ ಸಲ್ಲಿಸಿ ಹೊರ ಬರುತ್ತಿದ್ದ ವೇಳೆ ಕಾರಿನ ಮೇಲೆ ಕಲ್ಲುತೂರಾಟ ಮಾಡಿದ್ದಾರೆ. ಘಟನಾ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

ಇದನ್ನೂ ಓದಿ: ಬಿಎಸ್​ ಯಡಿಯೂರಪ್ಪನವರ ಲಕ್ಕಿ ಕಾರಿನಲ್ಲಿ ತೆರಳಿ ನಾಮಪತ್ರ ಸಲ್ಲಿಸಿದ ಬಿವೈ ವಿಜಯೇಂದ್ರ

ರೋಡ್​ ಶೋ ಮೂಲಕ H.K.ಪಾಟೀಲ್​ ಕೂಡ ನಾಮಪತ್ರ ಸಲ್ಲಿಕೆಗೆ ಬಂದಿದ್ದರು. ಈ ವೇಳೆ ಬಿಜೆಪಿ ಅಭ್ಯರ್ಥಿ ಅನಿಲ್‌‌‌‌ ಜೊತೆಗೆ ಮಾತಿನ ಚಕಮಕಿ ಉಂಟಾಗಿದೆ. ಪರಿಸ್ಥಿತಿ ತಿಳಿಗೊಳಿಸಲು ಗದಗ ಪೊಲೀಸರು ಪರದಾಟ ನಡೆಸಿದರು.

ಇದನ್ನೂ ಓದಿ: ಲಿಂಗಾಯತರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿ; ಕಾಂಗ್ರೆಸ್​​ಗೆ ನಳಿನ್ ಕುಮಾರ್ ಕಟೀಲ್ ಸವಾಲು

ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ

ದಕ್ಷಿಣ ಕನ್ನಡ: ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ಉಂಟಾಗಿದೆ. ಹರೀಶ್ ಪೂಂಜಾ ನಾಮಪತ್ರ ಬಳಿಕ ಕಾರ್ಯಕರ್ತರು ತೆರಳುತ್ತಿದ್ದರು. ಈ ವೇಳೆ ರೋಡ್ ಶೋ ನಾಮಪತ್ರ ಸಲ್ಲಿಸಲು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಆಗಮಿಸಿದ್ದಾಗ ಗಲಾಟೆ ನಡೆದಿದೆ. ಗಲಾಟೆ ವೇಳೆ ಬಿಜೆಪಿ ಕಾರ್ಯಕರ್ತನ ಕಾರಿನ ಗಾಜು ಪುಡಿ ಪುಡಿಯಾಗಿದೆ. ಸ್ಥಳೀಯ ಪೊಲೀಸರ ಜೊತೆ ಬಿಜೆಪಿ ಕಾರ್ಯಕರ್ತರು ವಾಗ್ವಾದ ಮಾಡಿದ್ದು, ಕಾಂಗ್ರೆಸ್​ ಕಾರ್ಯಕರ್ತರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ಮಾಡಿದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:21 pm, Wed, 19 April 23

ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Loading...
Unable to load recommendations.
Follow Us