AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗದಲ್ಲಿ ಕೂಲ್‌ ಡ್ರಿಂಕ್ಸ್‌ ವ್ಯಾಪಾರಿಗೆ ಪ್ರತಾಪ್​ ಸಿಂಹ, ಕಾಂಗ್ರೆಸ್ ಸಹಾಯ: ಹೆಚ್ಚುವರಿ ಹಣವನ್ನು ವೃದ್ಧಾಶ್ರಮಕ್ಕೆ ನೀಡಿದ ಸಮೀರ್​​

ನನಗೆ ಹೆಚ್ಚಿಗೆ 20 ಸಾವಿರ ಹಣ ಬಂದಿದೆ. ಇದರಿಂದ ನಾನು ವೃದ್ಧಾಶ್ರಮ ಹಾಗೂ ಆಸ್ಪತ್ರೆ ರೋಗಿಗಳಿಗೆ ಹಣ್ಣು‌ ಹಂಪಲ ನೀಡಲು ನಿರ್ಧರಿಸಿದ್ದೇನೆ ಎಂದು ಸಮೀರ್​ ಹೇಳಿದ್ದಾರೆ.

ಗದಗದಲ್ಲಿ ಕೂಲ್‌ ಡ್ರಿಂಕ್ಸ್‌ ವ್ಯಾಪಾರಿಗೆ ಪ್ರತಾಪ್​ ಸಿಂಹ, ಕಾಂಗ್ರೆಸ್ ಸಹಾಯ: ಹೆಚ್ಚುವರಿ ಹಣವನ್ನು ವೃದ್ಧಾಶ್ರಮಕ್ಕೆ ನೀಡಿದ ಸಮೀರ್​​
ಕೂಲ್ ಡ್ರಿಂಕ್ಸ್ ವ್ಯಾಪಾರಿ ಸಮೀರ್​
ವಿವೇಕ ಬಿರಾದಾರ
ವಿವೇಕ ಬಿರಾದಾರ| Edited By: |

Updated on:May 01, 2023 | 12:37 PM

Share

ಗದಗ: ಲಕ್ಷ್ಮೇಶ್ವರದ ಕೂಲ್ ಡ್ರಿಂಕ್ಸ್ (Cool Drinks) ವ್ಯಾಪಾರಿ ಸಮೀರ್ ಅವರಿಗೆ ಸಂಸದ ಪ್ರತಾಪ್​​ ಸಿಂಹ್ (Pratap Simha)​ 35 ಸಾವಿರ ರೂ. ಹಣ ಸಹಾಯ ಮಾಡಿದ್ದು, ಇದೀಗ ಕಾಂಗ್ರೆಸ್ (Congress) ಮುಖಂಡರು ​ಕೂಡ 20 ಸಾವಿರ ರೂ. ಹಣ ನೀಡಿದ್ದಾರೆ. ಈ ವಿಚಾರವಾಗಿ ಸಮೀರ್​​ ಪ್ರತಿಕ್ರಿಯಿಸಿ ನನಗೆ ಹೆಚ್ಚಿಗೆ 20 ಸಾವಿರ ಹಣ ಬಂದಿದೆ. ಇದರಿಂದ ನಾನು ವೃದ್ಧಾಶ್ರಮ ಹಾಗೂ ಆಸ್ಪತ್ರೆ ರೋಗಿಗಳಿಗೆ ಹಣ್ಣು‌ ಹಂಪಲ ನೀಡಲು ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ.

ಗದಗ ಕೋಲ್ಡ್​​​ ಡ್ರಿಂಕ್ಸ್​ ಟಾಟಾ ಏಸ್​ ಮೇಲೆ ಮುಗಿಬಿದ್ದ ಜನ

ಏ.28 ರಂದು ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಅಮಿತ್ ಶಾ ಸಮಾವೇಶದ ವೇಳೆ ಜನರ ಗುಂಪು ತಂಪು ಪಾನೀಯ  ವಾಹನದ ಮೇಲೆ ಮುಗಿಬಿದ್ದು, ಕೂಲ್ ಡ್ರಿಂಕ್ಸ್ ಕುಡಿದಿದ್ದರು. ಇದರಿಂದ ಸಮೀರ್ ಹಸನ್ ಸಾಬ್​ಗೆ ನಷ್ಟವಾಗಿ ಕಣ್ಣೀರಿಟ್ಟಿದ್ದರು. ಈ ಸುದ್ದಿ ತಿಳಿದು ಸಂಸದ ಪ್ರತಾಪ್ ಸಿಂಹ , ನಷ್ಟ ಅನುಭವಿಸಿದ್ದ ವ್ಯಾಪಾರಿ ಸಮೀರ್​ಗೆ ಹಣ ಸಂದಾಯ ಮಾಡಿದ್ದಾರೆ. ಹಣ ಸಂದಾಯ ಮಾಡಿರುವ ಬಗ್ಗೆ ಟ್ವೀಟ್‌ನಲ್ಲಿ ಸ್ಪಷ್ಟನೆ ನೀಡಿದ್ದು, Sorry Brother ಎಂದು ಟ್ವೀಟ್‌ ಮಾಡಿದ್ದಾರೆ. ಇದರೊಂದಿಗೆ ಬಡ ವ್ಯಾಪಾರಿಗೆ ಹಣ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಇನ್ನು ಇವರ ಕಾರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆಗೆ ಕಾರಣವಾಗಿದೆ.

ಲಕ್ಷ್ಮೇಶ್ವರದಲ್ಲಿ ಅಮಿತ್ ಶಾ ಸಮಾವೇಶಕ್ಕೆ ಬದಿದ್ದ ಜನರಿಗೆ ಕಾರ್ಯಕ್ರಮದ ಆಯೋಜಕರು ನೀರಿನ ವ್ಯವಸ್ಥೆ ಮಾಡಿರಲಿಲ್ಲ. ಇದರಿಂದ ಬಿಸಿಲಿನ ಬೇಗೆಗೆ ಜನ ಬೇಸತ್ತು ಹೋಗಿದ್ದರು. ಜನರಿಗೆ ತುಂಬ ಬಾಯಾರಿಕೆ ಆಗಿದ್ದುಮ ನೀರಿಗಾಗಿ ಪರದಾಡುತ್ತಿದ್ದರು. ಅದೇ ಸಂದರ್ಭದಲ್ಲಿ ಸಮೀರ್ ಹಸನ್​ ಸಾವ್ ಎನ್ನುವಾತ ಕೂಲ್ ಡ್ರಿಂಕ್ಸ್​ ಇರುವ ವಾಹನ ಸಮಾವೇಶದ ಬಳಿ ವ್ಯಾಪಾರಕ್ಕೆ ಬಂದಿದ್ದ. ಬಿಜೆಪಿಯವರೇ ಕೂಲ್​ ಡ್ರಿಂಕ್ಸ್ ತರಿಸಿದ್ದಾರೆ ಎಂದು ಜನ ಸಮೀರ್​ ವಾಹನಕ್ಕೆ ಮುಗಿಬಿದ್ದು, ಕೂಲ್​ ಡ್ರಿಂಕ್ಸ್, ಜ್ಯೂಸ್, ನೀರಿನ ಬಾಟಲ್​ ತಗೆದುಕೊಂಡು ಹೋಗಿದ್ದರು. ಇದರಿಂದ ಸುಮಾರ್ 35 ಸಾವಿರ ರೂಪಾಯಿ ನಷ್ಟವಾಯ್ತು ಎಂದು ಸಮೀರ್​ ಕಣ್ಣೀರಿಟ್ಟಿದ್ದ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಫುಲ್​ ವೈರಲ್ ಆಗಿತ್ತು.

ಇದೀಗ ಮೈಸೂರು ಸಂಸದ ಪ್ರತಾಪ್ ಸಿಂಹ, ವ್ಯಾಪಾರಿ ಸಮೀರ್​ ಅಕೌಂಟ್​ಗೆ 35 ಸಾವಿರ ರೂಪಾಯಿ ಟ್ರಾನ್ಸ್​ಫರ್ ಮಾಡಿದ್ದರು. ಈ ಮೂಲಕ ಪ್ರತಾಪ್ ಸಿಂಹ್ ಮಾನವೀಯತೆ ಮರೆದಿದ್ದಾರೆ. ಇನ್ನು ಸಂಸದರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಇನ್ನು ಈ ಬಗ್ಗೆ ಟಿವಿ9 ವರದಿ ಬಳಿಕ ಸಂಸದ ಪ್ರತಾಪ್ ಸಿಂಹ, ಕಾಂಗ್ರೆಸ್ ನಾಯಕರು ಹಣ ಸಹಾಯ‌ ಮಾಡಿದರು. ಹೀಗಾಗಿ ಟಿವಿ9ಗೆ ಸಮೀರ್ ಧನ್ಯವಾದ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:12 pm, Mon, 1 May 23

Follow Us
ವಿವೇಕ ಬಿರಾದಾರ
ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ