Geetha Shivarajkumar: ನಾಳೆ ಕಾಂಗ್ರೆಸ್ ಪಕ್ಷಕ್ಕೆ ಸೇರಲಿರುವ ಗೀತಾ ಶಿವರಾಜ್ಕುಮಾರ್
ನಟ ಶಿವರಾಜ್ಕುಮಾರ್ ಪತ್ನಿ ಗೀತಾ ನಾಳೆ ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಸೇರ್ಪಡೆ ಆಗಲಿದ್ದಾರೆ.

ಬೆಂಗಳೂರು: ನಟ ಶಿವರಾಜ್ಕುಮಾರ್ ಪತ್ನಿ ಗೀತಾ (Geetha Shivarajkumar) ನಾಳೆ ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಸೇರ್ಪಡೆ ಆಗಲಿದ್ದಾರೆ. ಗೀತಾ ಅವರು ಮಾಜಿ ಸಿಎಂ ದಿ. ಎಸ್.ಬಂಗಾರಪ್ಪನವರ ಪುತ್ರಿ. ಈ ಹಿಂದೆ ಜೆಡಿಎಸ್ನಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದರು. ಇದೀಗ ಸೊರಬದಲ್ಲಿ ಮಧು ಬಂಗಾರಪ್ಪ ಪರ ಕಾಂಗ್ರೆಸ್ ಪಕ್ಷದ ಪರವಾಗಿ ಗೀತಾ ಶಿವರಾಜ್ಕುಮಾರ್ ಪ್ರಚಾರ ನಡೆಸಿದ್ದರು. ನಾಳೆ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ. ಗೀತಾ ಶಿವಾರಾಜ್ಕುಮಾರ್ ನಾಳೆ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರಂತೆ ಎಂದು ನಿರ್ಮಾಪಕ ಕೆ.ಪಿ.ಶ್ರೀಕಾಂತ್ ಅವರು ಕೂಡ ದೃಢಪಡಿಸಿದ್ದಾರೆ.
ವರನಟ ಡಾ. ರಾಜ್ಕುಮಾರ್ ಕುಟುಂಬದಲ್ಲಿ ರಾಜಕೀಯ ಪ್ರವೇಶ ಮಾಡಿರುವವರಲ್ಲಿ ಗೀತಾ ಶಿವರಾಜ್ಕುಮಾರ್ ಮಾತ್ರ. ಮಾಜಿ ಸಿಎಂ ದಿ. ಎಸ್.ಬಂಗಾರಪ್ಪ ಮತ್ತು ಸಹೋದರ ಮಧು ಬಂಗಾರಪ್ಪ ಜೊತೆ ರಾಜಕೀಯವಾಗಿ ಗುರುತಿಸಿಕೊಂಡಿದ್ದರು. 2021ರಲ್ಲಿ ಮಧು ಬಂಗಾರಪ್ಪ ಜೆಡಿಎಸ್ ಪಕ್ಷದಿಂದ ಹೊರಬಂದು ಬಳಿಕ ಕಾಂಗ್ರೆಸ್ ಪಕ್ಷ ಸೇರಿದ್ದರು. ಆವಾಗಲೇ ಗೀತಾ ಶಿವರಾಜ್ಕುಮಾರ್ ಕಾಂಗ್ರೆಸ್ ಸೇರುತ್ತಾರೆ ಎಂಬ ಮಾತು ಕೇಳಿಬಂದಿದ್ದವು.
ಇದನ್ನೂ ಓದಿ: ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿರುವ ನಟ-ನಟಿಯರು, ಚಿತ್ರಗಳು ಇಲ್ಲಿವೆ
2014ರ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ಸ್ಪರ್ಧಿಸಿದ್ದ ಗೀತಾ ಶಿವರಾಜ್ಕುಮಾರ್ ಸೋಲು ಕಂಡಿದ್ದರು.
ಚುನಾವಣೆ ಅಖಾಡಕ್ಕೆ ಸಿನಿಮಾ ತಾರೆಯರು
ಸಿನಿಮಾ ತಾರೆಯರು ಈ ಬಾರಿ ಚುನಾವಣೆ ಅಖಾಡಕ್ಕೆ ಇಳಿದಿದ್ದು ಕೆಲ ನಟ-ನಟಿಯರು ಬೇರೆ ಬೇರೆ ಪಕ್ಷಗಳ ಪರವಾಗಿ ಬಿರುಸಿನ ಪ್ರಚಾರ ಮಾಡುತ್ತಿದ್ದಾರೆ. ನಟ ಸುದೀಪ್ ಅವರು ಭರ್ಜರಿಯಾಗಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ನಟಿ ಹರ್ಷಿಕಾ ಪೂಣಚ್ಚ ಅವರು ರಾಜ್ಯ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ಬಿಜೆಪಿ ಪರ ಪ್ರಚಾರ ಮಾಡುತ್ತಿದ್ದಾರೆ.
Published On - 4:25 pm, Thu, 27 April 23