ನಮಗೆ 150 ಸೀಟು ಕೊಡಿ, ಭರವಸೆಗಳನ್ನು ಈಡೇರಿಸುತ್ತೇವೆ: ಕರ್ನಾಟಕದ ಮತದಾರರಲ್ಲಿ ರಾಹುಲ್ ಗಾಂಧಿ ಮನವಿ

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಕನಿಷ್ಠ 150 ಸ್ಥಾನಗಳನ್ನು ಗೆದ್ದು ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರುವಂತೆ ಜನರು ಕಾಂಗ್ರೆಸ್ ಅನ್ನು ಬೆಂಬಲಿಸಬೇಕು ಎಂದು ಬೀದರ್​​ನಲ್ಲಿ ಮಾತನಾಡಿದ ರಾಹುಲ್ ಗಾಂಧಿ ಹೇಳಿದ್ದಾರೆ

ನಮಗೆ 150 ಸೀಟು ಕೊಡಿ, ಭರವಸೆಗಳನ್ನು ಈಡೇರಿಸುತ್ತೇವೆ: ಕರ್ನಾಟಕದ ಮತದಾರರಲ್ಲಿ ರಾಹುಲ್ ಗಾಂಧಿ ಮನವಿ
ರಾಹುಲ್ ಗಾಂಧಿ
Follow us
ರಶ್ಮಿ ಕಲ್ಲಕಟ್ಟ
|

Updated on: Apr 17, 2023 | 4:37 PM

ಕರ್ನಾಟಕದಲ್ಲಿ ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ (Karnataka Assembly polls) ಕಾಂಗ್ರೆಸ್ (Congress) ಪಕ್ಷವು ಕನಿಷ್ಠ 150 ಸ್ಥಾನಗಳನ್ನು ಗೆದ್ದು ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರುವಂತೆ ಜನರು ಕಾಂಗ್ರೆಸ್ ಅನ್ನು ಬೆಂಬಲಿಸಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಮತದಾರರಲ್ಲಿ ಮನವಿ ಮಾಡಿದ್ದಾರೆ. ಬೀದರ್ ಜಿಲ್ಲೆ ಬಸವಣ್ಣನವರ (12ನೇ ಶತಮಾನದ ಸಮಾಜ ಸುಧಾರಕ) ‘ಕರ್ಮಭೂಮಿ’. ಯಾರಾದರೂ ಮೊದಲು ಪ್ರಜಾಪ್ರಭುತ್ವದ ಬಗ್ಗೆ ಮಾತನಾಡಿ ಪ್ರಜಾಪ್ರಭುತ್ವದ ಹಾದಿಯನ್ನು ತೋರಿಸಿದ್ದರೆ ಅದು ಬಸವಣ್ಣ ಎಂದಿದ್ದಾರೆ ರಾಹುಲ್. ಬೀದರ್ ನಲ್ಲಿ ಇಂದು(ಸೋಮವಾರ) ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರವರು.ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲಾ (ಕರ್ನಾಟಕ ಉಸ್ತುವಾರಿ), ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ಭಾಲ್ಕಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಈಶ್ವರ ಖಂಡ್ರೆ ಸೇರಿದಂತೆ ಹಲವರು ಇಲ್ಲಿ ಉಪಸ್ಥಿತರಿದ್ದರು.

ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ರಾಹುಲ್ ಗಾಂಧಿ, ಪಕ್ಷದ ಸರ್ಕಾರದ ಮೊದಲ ಕ್ಯಾಬಿನೆಟ್ ಸಭೆಯು ಅದರ ಚುನಾವಣಾ ಭರವಸೆಗಳನ್ನು ಜಾರಿಗೊಳಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷವು ನಾಲ್ಕು ಚುನಾವಣಾ ಭರವಸೆಗಳನ್ನು ಘೋಷಿಸಿದೆ. ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಎಲ್ಲಾ ಮನೆಗಳಿಗೆ 200 ಯುನಿಟ್ ಉಚಿತ ವಿದ್ಯುತ್ (ಗೃಹ ಜ್ಯೋತಿ), ಪ್ರತಿ ಕುಟುಂಬದ ಮಹಿಳೆಗೆ ಮಾಸಿಕ ₹ 2,000 (ಗೃಹ ಲಕ್ಷ್ಮಿ), ಬಿಪಿಎಲ್ ಕುಟುಂಬದ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿ ಉಚಿತ (ಅನ್ನ ಭಾಗ್ಯ), ಮತ್ತು ಪದವೀಧರ ಯುವಕರಿಗೆ ಪ್ರತಿ ತಿಂಗಳು ₹ 3,000 ಮತ್ತು ಡಿಪ್ಲೊಮಾ ಹೊಂದಿರುವವರಿಗೆ ₹ 1,500 ( 18-25 ವರ್ಷ ವಯಸ್ಸಿನವರಿಗೆ) ಎರಡು ವರ್ಷಗಳವರೆಗೆ (ಯುವನಿಧಿ) ನೀಡಲಾಗುವುದು ಎಂದಿದ್ದಾರೆ ರಾಹುಲ್.

ಇದನ್ನೂ ಓದಿ:  Gyanvapi Mosque: ಜ್ಞಾನವಾಪಿ ಮಸೀದಿಯೊಳಗೆ ವುಝುಗೆ ಅವಕಾಶ: ಆಡಳಿತ, ಎಲ್ಲಾ ಪಕ್ಷಗಳೊಂದಿಗೆ ಮಾತುಕತೆ ನಡೆಸಲು ಸುಪ್ರೀಂ ಸೂಚನೆ

ನಾವು ಸುಮ್ಮನೆ ಭರವಸೆ ನೀಡುವುದಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಭರವಸೆಗಳನ್ನು ಈಡೇರಿಸಲಿದೆ.”ಕರ್ನಾಟಕದ ಮುಖ್ಯಮಂತ್ರಿ ಯಾರೇ ಆಗಲಿ, ಅಧಿಕಾರಕ್ಕೆ ಬಂದ ಮೊದಲ ದಿನದಲ್ಲಿ ಭರವಸೆಗಳನ್ನು ಕಾನೂನಾಗಿ ಪರಿವರ್ತಿಸುತ್ತಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ