AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆ ಕ್ಷಣದಲ್ಲಿ ನಾಮಪತ್ರ ವಾಪಸ್ ಪಡೆದ ಮತ್ತೋರ್ವ ಜೆಡಿಎಸ್ ಅಭ್ಯರ್ಥಿ, ಪಕ್ಷದಿಂದ ಉಚ್ಚಾಟನೆಗೆ ತೀರ್ಮಾನ

ಜೆಡಿಎಸ್​ನ ಮತ್ತೊಂದು ವಿಕೆಟ್ ಪತನವಾಗಿದೆ. ಪಕ್ಷದ ಜಿಲ್ಲಾ ನಾಯಕರು ಹಾಗೂ ಹೈಕಮಾಂಡ್ ಗಮನಕ್ಕೂ ಬಾರದೆ ಜೆಡಿಎಸ್ ಅಭ್ಯರ್ಥಿ ನಾಮಪತ್ರ ವಾಪಸ್ ಪಡೆದುಕೊಂಡು ಶಾಕ್ ಕೊಟ್ಟಿದ್ದಾರೆ. ಇದರಿಂದ ಭಾರೀ ಟೀಕೆಗಳು ವ್ಯಕ್ತವಾಗುತ್ತಿವೆ.

ಕೊನೆ ಕ್ಷಣದಲ್ಲಿ ನಾಮಪತ್ರ ವಾಪಸ್ ಪಡೆದ ಮತ್ತೋರ್ವ ಜೆಡಿಎಸ್ ಅಭ್ಯರ್ಥಿ, ಪಕ್ಷದಿಂದ  ಉಚ್ಚಾಟನೆಗೆ ತೀರ್ಮಾನ
ಜೆಡಿಎಸ್ ಪಕ್ಷದ ಚಿಹ್ನೆ
ರಮೇಶ್ ಬಿ. ಜವಳಗೇರಾ
|

Updated on:Apr 25, 2023 | 11:14 AM

Share

ಬೆಳಗಾವಿ: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ (ಉಳ್ಳಾಲ) ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಏಕಾಏಕಿ ನಾಮಪತ್ರ ವಾಪಸ್ ಪಡೆದಿರುವುದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಇದರ ಬೆನ್ನಲ್ಲೇ ಗೋಕಾಕ್​ನಲ್ಲೂ ಸಹ ಜೆಡಿಎಸ್ ಅಭ್ಯರ್ಥಿ ನಾಮಪತ್ರ ವಾಪಸ್ ಪಡೆದುಕೊಂಡಿದ್ದಾರೆ. ಇದರೊಂದಿಗೆ ಜೆಡಿಎಸ್​ ವರಿಷ್ಠರಿಗೆ ಶಾಕ್ ಕೊಟ್ಟಿದ್ದಾರೆ. ಹೌದು… ಗೋಕಾಕ್ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಚಂದನ್ ಗಿಡ್ಡನವರ್ ಅವರು ತಮ್ಮ ನಾಮಪತ್ರ ವಾಪಸ್ ಪಡೆದುಕೊಂಡು ಕಾಂಗ್ರೆಸ್​ ಜೊತಗೆ ಕೈಜೋಡಿಸಿದ್ದಾರೆ. ಇದರೊಂದಿಗೆ ಗೋಕಾಕ್‌ನಲ್ಲಿ ರಮೇಶ್ ಜಾರಕಿಹೊಳಿ ಸೋಲಿಸಲು ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳು ಒಂದಾಗಿದ್ದಾರೆ. ಜೆಡಿಎಸ್ ಅಭ್ಯರ್ಥಿ ಕಣದಿಂದ ಹಿಂದೆ ಸರಿದಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ಪಕ್ಷದ ನಾಯಕರಿಗೆ ಹೇಳದೆ ನಾಮಪತ್ರ ವಾಪಸ್ ಪಡೆದಿದ್ದಾರೆಂಬ ಟೀಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಉಳ್ಳಾಲದಲ್ಲಿ ಸಿನಿಮೀಯ ಬೆಳವಣಿಗೆ; ಬಲವಂತವಾಗಿ ಜೆಡಿಎಸ್​ ಅಭ್ಯರ್ಥಿ ಅಲ್ತಾಫ್ ಕುಂಪಲ ನಾಮಪತ್ರ ಹಿಂತೆಗೆಸಿದ ಕಾಂಗ್ರೆಸ್! 

ರಮೇಶ್ ಜಾರಕಿಹೊಳಿ ಹಾಗೂ ಕಾಂಗ್ರೆಸ್​​ ಮಧ್ಯೆ ಜಿದ್ದಾಜಿದ್ದಿ ಹೋರಾಟವಿರುವ ಗೋಕಾಕ್​ ರಾಜಕೀಯದಲ್ಲಿ ಹೊಸ ಬೆಳವಣಿಗೆ ನಡೆಸಿದ್ದು, ಕಾಂಗ್ರೆಸ್​ಗೆ ವರದಾನವಾಗಿದೆ. ಇದರಿಂದ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿಗೆ ಕೊಂಚ ಸಂಕಷ್ಟ ಎದುರಾಗಿದೆ. ಯಾಕಂದ್ರೆ, ಕ್ಷೇತ್ರದ ಅಲ್ಪಸಂಖ್ಯಾತ ಮತಗಳು ಜೆಡಿಎಸ್ ಹಾಗೂ ಕಾಂಗ್ರೆಸ್​​ ನಡುವೆ ಹರಿದುಹಂಚಿ ಹೋಗಲಿದ್ದು, ಇದರಿಂದ ತಮಗೆ ಲಾಭವಾಗಲಿದೆ ಎನ್ನುವ ನಿರೀಕ್ಷೆಯಲ್ಲಿ ರಮೇಶ್ ಜಾರಕಿಹೊಳಿ ಇದ್ದರು. ಆದ್ರೆ, ಇದೀಗ ಜೆಡಿಎಸ್ ಅಭ್ಯರ್ಥಿ ಕೊನೆ ಕ್ಷಣದಲ್ಲಿ ಕೈಕೊಟ್ಟಿದ್ದು, ರಮೇಶ್ ಜಾರಕಿಹೊಳಿ ಲೆಕ್ಕಾಚಾರವೆಲ್ಲ ಉಲ್ಟಾ ಆಗಿದೆ.

ಇಂದು(ಏಪ್ರಿಲ್ 24) ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿತ್ತು. ಕೊನೆಯ ಕ್ಷಣದಲ್ಲಿ ನಾಮಪತ್ರ ವಾಪಸ್ ಪಡೆದಿರುವ ಗೋಕಾಕ್ ತಾಲೂಕು ಜೆಡಿಎಸ್ ಅಧ್ಯಕ್ಷರೂ ಆಗಿರುವ ಚಂದನ್ ಗಿಡ್ಡನವರ್, ಅವರು ಕಾಂಗ್ರೆಸ್​ ಅಭ್ಯರ್ಥಿ ಡಾ.ಮಹಾಂತೇಶ ಕಡಾಡಿಗೆ ಬೆಂಬಲ ಘೋಷಿಸಿದ್ದಾರೆ. ಇದರಿಂದ ಚಂದನ್ ಗಿಡ್ಡನವರ್‌ನ್ನು ಪಕ್ಷದಿಂದ ಉಚ್ಚಾಟನೆ ಮಾಡಲು ಜಿಲ್ಲಾ ಜೆಡಿಎಸ್ ನಿರ್ಧಾರ ಮಾಡಿದೆ.

ಈ ಬಗ್ಗೆ ಟಿವಿ9ಗೆ ಪ್ರತಿಕ್ರಿಯಿಸಿರುವ ಬೆಳಗಾವಿ ಜೆಡಿಎಸ್ ಜಿಲ್ಲಾಧ್ಯಕ್ಷ ಶಂಕರ್ ಮಾಡಲಗಿ, ‘ದೇವರು, ತಾಯಿಯ ಮೇಲೆ ಆಣೆ ಮಾಡಿ ಟಿಕೆಟ್ ಪಡೆದಿದ್ದರು. ಈಗ ನಾಮಪತ್ರ ವಾಪಸ್ ಪಡೆದು ಪಕ್ಷದ್ರೋಹ ಕೆಲಸ ಮಾಡಿದ್ದಾರೆ. ಹೀಗಾಗಿ ಚಂದನ್ ಗಿಡ್ಡನವರ್‌ನ್ನು ಪಕ್ಷದಿಂದ ಉಚ್ಚಾಟಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.

ಉಳ್ಳಾಲ ಜೆಡಿಎಸ್ ಅಭ್ಯರ್ಥಿ ನಾಮಪತ್ರ ವಾಪಸ್

ಇನ್ನು ನಿನ್ನೆ ಬೆಳಗ್ಗೆ ಮಂಗಳೂರು ಉಳ್ಳಾಲ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹೈಕಮಾಂಡ್ ಗಮನಕ್ಕೂ ಬಾರದೆ ನಾಮಪತ್ರ ಅಲ್ತಾಫ್ ಕುಂಪಲ ಹಿಂತೆಗೆದುಕೊಂಡಿದ್ದರು. ಜಿದ್ದಾಜಿದ್ದಿ ಹೋರಾಟವಿರುವ ಮಂಗಳೂರು ಕ್ಷೇತ್ರದಲ್ಲಿ ಹಾಲಿ ಶಾಸಕ, ಯು.ಟಿ.ಖಾದರ್ ವಿರುದ್ಧ ಅಲ್ತಾಫ್ ಅವರನ್ನು ಜೆಡಿಎಸ್ ಸ್ಪರ್ಧೆಗಿಳಿಸಿತ್ತು. ಆದರೆ ಬೆಳಗ್ಗೆ ಅವರು ನಾಮಪತ್ರ ಹಿಂಪಡೆದಿದ್ದರು.

ನಾಮಪತ್ರ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಅಲ್ತಾಫ್ ಕುಂಪಲ, ನಾನು ಎಲ್ಲೂ ಓಡಿಹೋಗಿಲ್ಲ, ನನ್ನನ್ನು ಅಪಹರಿಸಿ ಬೆದರಿಸಿ ನನ್ನಿಂದ ನಾಮಪತ್ರ ಹಿಂದೆ ಪಡೆಯುವಂತೆ ಮಾಡಲಾಗಿದೆ. ನನಗೆ ಯಾವುದೇ ರೀತಿಯಲ್ಲಿ ಆಮಿಷ ಒಡ್ಡಲಾಗಿಲ್ಲ. ಈ ಕುರಿತು ಪೊಲೀಸ್ ಕಮಿಷನರ್ ಅವರಿಗೆ ಭದ್ರತೆ ನೀಡುವಂತೆ ಮನವಿ ಮಾಡಲಾಗಿದೆ ಎಂದಿದ್ದರು.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:16 am, Tue, 25 April 23

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು